ಯತ್ನಾಳ್‌ ಎಲ್ಲಿಂದ ಮಾಹಿತಿ ತಗೊಂಡು ಮಾತಾಡ್ತಾರೆ ಎಂಬುದೇ ವಿಚಿತ್ರ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌

Date:

Advertisements

ಸಿಎಂ ಸಿದ್ದರಾಮಯ್ಯ ವಿರುದ್ಧ ನಮ್ಮವರೇ ಬಿಜೆಪಿ ನಾಯಕರಿಗೆ ದಾಖಲೆ ನೀಡುತ್ತಿದ್ದಾರೆ ಎಂದು ಯತ್ನಾಳ್‌ ಆರೋಪಿಸಿದ್ದಾರೆ. ಅವರು ಎಲ್ಲಿಂದ ಇಂತಹ ವಿಷಯ ಸಂಗ್ರಹಿಸಿ ಮಾತನಾಡುತ್ತಾರೆ ಎಂಬುದೇ ವಿಚಿತ್ರ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಸಲು ಕಾಂಗ್ರೆಸ್‌ನವರೇ ದಾಖಲೆ ಕೊಡುತ್ತಿದ್ದಾರೆ ಎಂದು ಯತ್ನಾಳ್‌ ಆರೋಪಿಸುತ್ತಾರೆ. ಡಿ ಕೆ ಶಿವಕುಮಾರ್‌ ಋಣ ತೀರಿಸಲು ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎನ್ನುತ್ತಾರೆ. ಅವರದ್ದು ಯಾವ ಋಣ ಅಂತ ನನಗೆ ಗೊತ್ತಿಲ್ಲ” ಎಂದು ವ್ಯಂಗ್ಯವಾಗಿ ನುಡಿದರು.

ಬಿಜೆಪಿಯಲ್ಲಿ ಸಿಎಂ ಹುದ್ದೆಗಾಗಿ ಹೈಕಮಾಂಡ್‌ಗೆ ₹2,000 ಕೋಟಿ, ಮಂತ್ರಿಸ್ಥಾನಕ್ಕೆ ₹500 ಕೋಟಿ ನೀಡಬೇಕಿದೆ ಎಂದು ಹಿಂದೆ ಇದೇ ಯತ್ನಾಳ್‌ ಅವರು ಹೇಳಿದ್ದರು. ಈಗ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಯನ್ನು ಬಿಜೆಪಿಯವರು ಆಯ್ಕೆ ಮಾಡುತ್ತಾರೆ ಎನ್ನುತ್ತಾರೆ. ಅವರು ಮಾತು ಕೇಳಿದರೆ ಸೂರ್ಯ ಪಶ್ಚಿಮ ದಿಕ್ಕಿನಲ್ಲಿ ಹುಟ್ಟುತ್ತಾನೆಯೇನೋ ಎಂಬಂತಿದೆ” ಎಂದು ಲೇವಡಿ ಮಾಡಿದರು.

Advertisements

ಬೆಳಗಾವಿ ವಿಭಜನೆ

“ಜಿಲ್ಲೆ ವಿಭಜನೆಯಾಗದ ಕಾರಣ ಆಡಳಿತಕ್ಕೆ ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿದೆ. ಇದನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ವಿಭಜಿಸಬೇಕೆಂಬ ಚರ್ಚೆ ಇದೆ‌. ಉನ್ನತಮಟ್ಟದ ಸಭೆಯಲ್ಲೇ ತೀರ್ಮಾನಿಸಲಾಗುವುದು” ಎಂದರು.

ಪ್ರವಾಹ ಕುರಿತು ಸಿಎಂ, ಡಿಸಿಎಂ ಮಾಹಿತಿ

“2019ರಲ್ಲಿ ಬೆಳಗಾವಿ ಜಿಲ್ಲೆ ಶತಮಾನದಲ್ಲೇ ಕಂಡರಿಯದ ಪ್ರವಾಹಕ್ಕೆ ಒಳಗಾಗಿತ್ತು. ಆಗಲೂ ಪ್ರಧಾನಿ ಮೋದಿ ಇಲ್ಲಿಗೆ ಭೇಟಿ ಕೊಟ್ಟಿರಲಿಲ್ಲ. ಸದ್ಯದ ಪ್ರವಾಹಪೀಡಿತ ಸ್ಥಳಗಳ ಬಗ್ಗೆ ಸಿಎಂ, ಡಿಸಿಎಂ ಮಾಹಿತಿ ಪಡೆಯುತ್ತಿದ್ದಾರೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಧಿಕಾರಿಗಳಿಂದ ತಪ್ಪು ಮಾಹಿತಿ

“ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿ ಬಗ್ಗೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ. ನಾನು ಸ್ವತಃ ಖಾನಾಪುರ ತಾಲ್ಲೂಕಿಗೆ ಹೋಗಿ ಪರಿಶೀಲಿಸಿದ್ದೇನೆ. ಅಧಿಕಾರಿಗಳು ಕೊಟ್ಟ ಮಾಹಿತಿಗಿಂತಲೂ ಹೆಚ್ಚಿನ ಮನೆಗಳು ಬಿದ್ದಿವೆ. ಅಧಿಕಾರಿಗಳಿಂದ ಬೇಜವಾಬ್ದಾರಿ ಕೆಲಸ ಆಗಬಾರದು” ಎಂದು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X