ಬಡವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ಜವಾಬ್ದಾರಿ ಸರ್ಕಾರಿ ವೈದ್ಯರದ್ದು : ಸಿಎಂ ಸಿದ್ದರಾಮಯ್ಯ

Date:

Advertisements
  • ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
  • ಸರ್ವರಿಗೂ ಉತ್ತಮ ಆರೋಗ್ಯ, ಶಿಕ್ಷಣ ಕೊಡುವುದು ಸರ್ಕಾರದ ಕರ್ತವ್ಯ

ಶ್ರೀಮಂತರು ತಮಗೆ ಬೇಕಾದಂತೆ ಆರೋಗ್ಯ ಸೇವೆ ಪಡೆದುಕೊಳ್ಳುವುದು ಕಷ್ಟದ ಕೆಲಸವಲ್ಲ. ಹಾಗಾಗಿ, ಬಡವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ಜವಾಬ್ದಾರಿ ಸರ್ಕಾರಿ ವೈದ್ಯರ ಮೇಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರಿಗೆ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ತಾರತಮ್ಯ ಇರುವ ಕಾರಣಕ್ಕೆ ಉತ್ತಮ ಆರೋಗ್ಯ, ಉತ್ತಮ ಶಿಕ್ಷಣ, ಒಳ್ಳೆಯ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಬಡವರು ಖಾಸಗಿ ಆಸ್ಪತ್ರೆಗೆ ಹೋಗುವ ಅನಿವಾರ್ಯತೆ ಬಾರದ ರೀತಿಯಲ್ಲಿ ಸರ್ಕಾರಿ ವೈದ್ಯರು ವೃತ್ತಿಪರತೆ, ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

Advertisements

ಹಳ್ಳಿಗಳಿಂದ, ಬಡತನ, ಶೋಷಿತ, ಹಿಂದುಳಿದ ಕೌಟುಂಬಿಕ ಹಿನ್ನೆಲೆಯಿಂದ ಬರುತ್ತಿರುವ ವೈದ್ಯರ ಪ್ರಮಾಣವೇ ಹೆಚ್ಚಾಗಿದೆ. ಇವರು ಗ್ರಾಮೀಣ ಭಾಗಗಳಲ್ಲಿ ಕೆಲಸ ಮಾಡಲು ಹೆಚ್ಚು ಉತ್ಸಾಹದಿಂದ ಸ್ವಯಂಪ್ರೇರಿತವಾಗಿ ಮುಂದೆ ಬರಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬರುವ ರೋಗಿಗಳು ತಮ್ಮದೇ ಹಿನ್ನೆಲೆಯವರು ಎನ್ನುವುದನ್ನು ಮರೆಯಬಾರದು. ಅಗತ್ಯ ಸವಲತ್ತುಗಳನ್ನು ತಕ್ಕ ಮಟ್ಟಿಗೆ ದೊರಕಿಸಿಕೊಟ್ಟರೂ ಗ್ರಾಮೀಣ ಭಾಗದಲ್ಲಿ ವೈದ್ಯರು ಸೇವೆ ಸಲ್ಲಿಸಲು ಹಿಂದೇಟು ಹಾಕುತ್ತಿರುವುದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿ ಹೇಳಿದರು.

ಸರ್ವರಿಗೂ ಉತ್ತಮ ಆರೋಗ್ಯ, ಶಿಕ್ಷಣ ಕೊಡುವುದು ಸರ್ಕಾರದ ಕರ್ತವ್ಯ. ಜನರ ಈ ನಿರೀಕ್ಷೆಗೆ ತಕ್ಕಂತೆ ಸರ್ಕಾರಿ ವೈದ್ಯರು, ಖಾಸಗಿ ವೈದ್ಯರು ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.

ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿ ಆಗಿದ್ದ ಬಿಧಾನ್ ಚಂದ್ರ ರಾಯ್ ಅವರು ಮುಖ್ಯಮಂತ್ರಿ ಆಗಿದ್ದಾಗಲೂ ವೈದ್ಯ ವೃತ್ತಿ ಮುಂದುವರೆಸಿದ್ದರು. ಜನರಿಗೆ ಆರೋಗ್ಯ ಸೇವೆ ನೀಡುತ್ತಿದ್ದರು. ಹೀಗಾಗಿ ಭಾರತ ರತ್ನ ಎನಿಸಿಕೊಂಡರು. ಪ್ರತಿಯೊಬ್ಬ ವೈದ್ಯರಿಗೂ ಬಿ.ಸಿ.ರಾಯ್ ಮಾದರಿ ಆಗಲು ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದರು.

ಎಲ್ಲರೂ ಅಂಬೇಡ್ಕರ್ ಆಗಲು, ಬುದ್ದ ಆಗಲು, ಗಾಂಧಿ ಆಗಲು ಸಾಧ್ಯವಿಲ್ಲ. ಆದರೆ ಅವರ ದಾರಿಯಲ್ಲಿ ನಡೆಯಲು ಎಲ್ಲರಿಗೂ ಸಾಧ್ಯವಿದೆ. ವೈದ್ಯ ಸಮುದಾಯ ಡಾಕ್ಟರ್ ಬಿಧಾನ್ ಚಂದ್ರ ರಾಯ್ ಅವರು ಹಾಕಿಕೊಟ್ಟ ಮಾದರಿ ದಾರಿಯಲ್ಲಿ ನಡೆಯಲು ಶ್ರಮಿಸಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ , ಇಲಾಖೆ ಕಾರ್ಯದರ್ಶಿ ಅನಿಲ್ ಕುಮಾರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ಶಾಸಕ ರಿಜ್ವಾನ್ ಹರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X