ರಾಹುಲ್ ಗಾಂಧಿ ದೇಶ ಮುನ್ನಡೆಸಬೇಕು ಎಂಬುವುದು ರಾಷ್ಟ್ರದ ಆಶಯ: ಸಂಜಯ್ ರಾವತ್

Date:

“ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರಾಷ್ಟ್ರವನ್ನು ಮುನ್ನಡೆಸಬೇಕು ಎಂಬುವುದು ದೇಶದ ಆಶಯ” ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

- Advertisement -

ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು 290 ಕ್ಷೇತ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು 228 ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟ ಮುನ್ನಡೆಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ: ರಾಯ್‌ಬರೇಲಿ, ವಯನಾಡಿನಲ್ಲಿ ರಾಹುಲ್ ಗಾಂಧಿ ಮುನ್ನಡೆ

ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭರವಸೆಯನ್ನು ವ್ಯಕ್ತಪಡಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಕಾಂಗ್ರೆಸ್‌ನಿಂದಲೇ ಪ್ರಧಾನಿಯನ್ನು ಆಯ್ಕೆ ಮಾಡುವ ಪ್ರಸ್ತಾಪ ಮಾಡಿದ್ದಾರೆ.

“ಕಾಂಗ್ರೆಸ್ 100 ಲೋಕಸಭಾ ಸ್ಥಾನಗಳ ಗಡಿ ದಾಟಿದರೆ, ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ 150 ಲೋಕಸಭಾ ಸ್ಥಾನಗಳ ಗಡಿಯನ್ನು ತಲುಪಿದರೆ ಅತಿ ದೊಡ್ಡ ಪಕ್ಷವಾದ ಕಾಂಗ್ರೆಸ್‌ನಿಂದ ಪ್ರಧಾನಿ ಆಯ್ಕೆ ಮಾಡಲಾಗುತ್ತದೆ. ರಾಹುಲ್ ಗಾಂಧಿ ರಾಷ್ಟ್ರವನ್ನು ಮುನ್ನಡೆಸಬೇಕು ಎಂಬುದು ರಾಷ್ಟ್ರದ ಆಶಯ” ಎಂದು ಹೇಳಿದ್ದಾರೆ.

“ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಈ ಚುನಾವಣೆಯ ಫಲಿತಾಂಶ ಬರುತ್ತಿದೆ. ಕಾಂಗ್ರೆಸ್ 150 ಸ್ಥಾನಗಳಲ್ಲಿಯೂ ಗೆಲುವು ಸಾಧಿಸಬಹುದು. ಹೀಗಾದರೆ ದೇಶದ ಚಿತ್ರಣವೇ ಬದಲಾಗುತ್ತದೆ” ಎಂದು ಸಂಜಯ್ ರಾವತ್ ತಿಳಿಸಿದ್ದಾರೆ.

“ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ ಪ್ರಧಾನಿ ಅವರ ಪಕ್ಷದಿಂದಲೇ ಆಗುತ್ತಾರೆ. ಇದು ದೇಶದ ಇಚ್ಛೆಯಾಗಿರುತ್ತದೆ. ರಾಹುಲ್ ಗಾಂಧಿ ಅವರ ಸಂಘರ್ಷವನ್ನು ನೋಡಿದಾಗ ಅವರೇ ದೇಶವನ್ನು ಮುನ್ನಡೆಸಬೇಕೆಂದು ಅನಿಸುತ್ತದೆ” ಎಂದು ಅಭಿಪ್ರಾಯಿಸಿದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...