ಬಿಜೆಪಿಯಲ್ಲಿ ಟಿಕೆಟ್‌ಗಾಗಿ ತೀವ್ರ ಒತ್ತಡ ಇರೋದು ನಿಜ: ಬಿ ಎಸ್ ಯಡಿಯೂರಪ್ಪ

Date:

  • ಬಿಎಸ್‌ವೈ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆ ನೀಡಿದ ಬೊಮ್ಮಾಯಿ
  • ಶುಕ್ರವಾರ ಸಂಜೆ ದೆಹಲಿಗೆ ತೆರಳಲಿರುವ ರಾಜ್ಯ ನಾಯಕರು

ಬಿಜೆಪಿ ಟಿಕೆಟ್‌ ತೀವ್ರ ಒತ್ತಡ ಇರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಹಿನ್ನೆಲೆ, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ತಯಾರಿಸಲು ತಿಣುಕಾಡುತ್ತಿದೆ. ಈ ಕುರಿತು ಬಿಜೆಪಿ ನಾಯಕರು ಸದಾ ಜಾರಿಕೊಳ್ಳುತ್ತಾ ಬಂದಿದ್ದಾರೆ. ಆದರೆ, ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ಅವರು ಒತ್ತಡ ಇರುವುದಾಗಿ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಯಡಿಯೂರಪ್ಪ, “ಟಿಕೆಟ್ ಅಂತಿಮಗೊಳಿಸುವ ಹಿನ್ನೆಲೆಯಲ್ಲಿ ಸಂಜೆ ದೆಹಲಿಗೆ ಹೋಗುತ್ತಿದ್ದೇವೆ. ಪಟ್ಟಿ ಸಿದ್ಧ ಮಾಡಬೇಕಿರುವ ಕಾರಣಕ್ಕೆ ಪ್ರಮುಖರ ಜೊತೆಗೆ ಚರ್ಚೆ ಮಾಡಬೇಕಿದೆ” ಎಂದು ತಿಳಿಸಿದ್ದಾರೆ.

“ಎಲ್ಲರೊಂದಿಗೆ ಚರ್ಚೆ ಮಾಡಿ ಪಟ್ಟಿ ಅಂತಿಮಗೊಳಿಸಲಾಗುವುದು. ಟಿಕೆಟ್‌ಗಾಗಿ ಬಹಳ ಒತ್ತಡ ಇರೋದು ನಿಜ. ಈಗಾಗಲೇ ಇಬ್ಬರು ಮೂವರು ಹೆಸರನ್ನು ಅಂತಿಮ ಮಾಡಿ ಹೈಕಮಾಂಡ್‌ಗೆ ಕಳುಹಿಸಲಾಗಿದೆ” ಎಂದು ಹೇಳಿದ್ದಾರೆ.

“ನಾನು, ಮುಖ್ಯಮಂತ್ರಿಗಳು ಮತ್ತು ಪ್ರಮುಖರು ದೆಹಲಿಗೆ ಹೋಗುತ್ತಿದ್ದೇವೆ. ಯಾರು ಗೆಲ್ತಾರೆ ಅನ್ನೋ ಬಗ್ಗೆ ಚರ್ಚಿಸಿ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ವೈಎಸ್‌ವಿ ದತ್ತಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಅಭಿಮಾನಿಗಳಿಗೆ ಪತ್ರದ ಮೂಲಕ ಸಭೆಗೆ ಆಹ್ವಾನ

ಆದರೆ, ಯಡಿಯೂರಪ್ಪ ಅವರ ಹೇಳಿಕೆಗೆ ತದ್ವಿರುದ್ಧ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಯಾವುದೇ ಆತಂಕ ಇಲ್ಲ” ಎಂದಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಹೆಚ್ಚಿನ ಆಕಾಂಕ್ಷಿಗಳಿದ್ದಾಗ ಪೈಪೋಟಿ ಸಹಜವಾಗಿ ಇರಲಿದೆ. 8 ಮತ್ತು 9 ರಂದು ಚುನಾವಣಾ ಆಯ್ಕೆ ಸಮಿತಿ ಸಭೆ ಸೇರಿ, ನಂತರ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಮಹೇಶ್ ಕುಮಟಳ್ಳಿ ಸೋಲನ್ನು ನನ್ನ ತಲೆಗೆ ಕಟ್ಟಲು ನೋಡುತ್ತಿದ್ದಾರೆ ಎಂಬ ಲಕ್ಷ್ಮಣ ಸವದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “ಲಕ್ಷ್ಮಣ್ ಸವದಿ ಅವರ ಬಳಿ ಮಾತನಾಡಿದ್ದು ಆ ರೀತಿ ಏನೂ ಇಲ್ಲ. ಅವರ ಜವಾಬ್ದಾರಿಯ ಬಗ್ಗೆ ಅವರಿಗೆ ಅರಿವಿದೆ ಎಂದು ತಿಳಿದಿದ್ದೇನೆ. ಅವರ ಬಳಿ ಮಾತನಾಡಿದ್ದು ಎಲ್ಲವೂ ಸರಿ ಹೋಗುತ್ತದೆ” ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಗಮ ಮಂಡಳಿ ನೇಮಕಾತಿಯಲ್ಲಿ ಯಾರ ಅಭಿಪ್ರಾಯವನ್ನೂ ಪಡೆದಿಲ್ಲ: ಸಿದ್ದರಾಮಯ್ಯ

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಕಾನೂನುಬಾಹಿರ ನ್ಯಾಯಾಲಯದ ಮೊರೆ...

‘ಮಹಾಧರಣಿ’ಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಡಿ.19ರಂದು ಮಹತ್ವದ ಸಭೆ

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕಳೆದ ಮೂರು ದಿನಗಳಿಂದ ಸಂಯುಕ್ತ ಹೋರಾಟ ಸಮಿತಿಯ...

ದೇಶದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ನಂಬರ್ ಒನ್ ಆಗಿಸಬೇಕಿದೆ: ಸಿದ್ದರಾಮಯ್ಯ

'ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಸುಸ್ಥಿರ ಬೆಳವಣಿಗೆ ಕಾಣಬೇಕು' 'ರಾಜ್ಯದ...

‘ಫ್ರೀಡಂ ಪಾರ್ಕ್’ನಿಂದ ನಮಗೆ ‘ಫ್ರೀಡಂ’ ಕೊಡಿ: ಸಿಎಂ ಸಿದ್ದರಾಮಯ್ಯಗೆ ‘ಮಹಾಧರಣಿ’ ಆಗ್ರಹ

ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಯೊಂದು ಪ್ರತಿಭಟನೆಗಳು ಕೇವಲ 'ಫ್ರೀಡಂ ಪಾರ್ಕ್‌'ಗೆ ಸೀಮಿತವಾಗಿದ್ದು,...