ತುಮಕೂರು ಲೋಕಸಭೆಗೆ ಟಿಕೆಟ್‌ ಕೊಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ: ವಿ ಸೋಮಣ್ಣ

Date:

“ತುಮಕೂರು ಸಂಸದ ಜಿ ಎಸ್ ಬಸವರಾಜ್ ನನಗೆ ಆತ್ಮೀಯರು. ತುಮಕೂರು ಕ್ಷೇತ್ರಕ್ಕೆ ನಾನು ಬರಬೇಕು ಎಂಬುದು ಅವರ ಅಪೇಕ್ಷೆ. ನಾನು ಸ್ಪರ್ಧೆ ಮಾಡಬೇಕೋ ಅಥವಾ ಬೇಡವೋ ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ” ಎಂದು ಬಿಜೆಪಿ ಹಿರಿಯ ನಾಯಕ ವಿ ಸೋಮಣ್ಣ ತಿಳಿಸಿದರು.

ನವದೆಹಲಿಯಲ್ಲಿ ಸೋಮವಾರ ಮಾತನಾಡಿದ ಅವರು, “ಖಾಸಗಿ ಕೆಲಸಕ್ಕಾಗಿ ದೆಹಲಿಗೆ ಬಂದಿದ್ದೇನೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಭೇಟಿಗೂ ಯತ್ನಿಸುತ್ತೇನೆ. ಸಾಧ್ಯವಾದರೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗುತ್ತೆನೆ” ಎಂದರು.

“ರಾಜ್ಯಸಭೆಗೆ ಆಯ್ಕೆ ವಿಚಾರ ಪಕ್ಷ ಏನು ಮಾಡುತ್ತೋ ನೋಡಬೇಕು. ನಾನು ಕಳೆದ ಬಾರಿ ದೆಹಲಿಗೆ ಬಂದಾಗಲೇ ಅಭಿಪ್ರಾಯ ತಿಳಿಸಿದ್ದೇನೆ. ಲೋಕಸಭೆಗೆ ಅವಕಾಶ ಸಿಗದಿದ್ದರೂ ಪಕ್ಷದ ಕೆಲಸ ಮಾಡುತ್ತೇನೆ. ಮಾಜಿ ಸಚಿವ ಕೆ.ಸುಧಾಕರ್ ಸ್ಪರ್ಧೆ ಮಾಡುವ ಬಗ್ಗೆ ಮಾಹಿತಿ ಇಲ್ಲ. ಸುಧಾಕರ್ ಏನು ಹೇಳಿದ್ದಾರೆ ಅಂತಲೂ ನನಗೆ ಗೊತ್ತಿಲ್ಲ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? 1.37 ಲಕ್ಷ ಕಡತಗಳು ಕುಂತಲ್ಲೇ ಕೂತು ದೂಳು ತಿನ್ನುತ್ತಿವೆ: ಬಿ ವೈ ವಿಜಯೇಂದ್ರ ಆಕ್ರೋಶ

ಕುಮಾರಸ್ವಾಮಿ ಭೇಟಿ ವಿಚಾರವಾಗಿ ಮಾತನಾಡಿ, “ಪಕ್ಷ ಬೇರೆ ಇರಬಹುದು, ಆದರೆ ನಾವು ಮೊದಲಿನಿಂದಲೂ ಪರಿಚಯ. ಮೊನ್ನೆ ಅವರ ತೋಟದ ಮನೆಯಲ್ಲಿ ಭೇಟಿ ಆಗಿದ್ದೇನೆ. ಅವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ಹೀಗಾಗಿ ಸಹಜವಾಗಿ ಮಾತಾಡಿದ್ದೇವೆ. ನಾವು ಇವತ್ತು ಈ ರೀತಿ ಮಾತನಾಡಲು ದೇವೇಗೌಡರು ಕಾರಣ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಷ್ಟ್ರೀಯತೆ, ದೇಶಭಕ್ತಿ ಬಗ್ಗೆ ಬಿಜೆಪಿ ನಮಗೆ ಹೇಳಿಕೊಡಬೇಕಿಲ್ಲ: ಸಚಿವ ಎಂ ಬಿ ಪಾಟೀಲ್‌

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಮತ್ತು ದೇಶ ವಿಭಜನೆಯನ್ನು ತಡೆಯಲು ಶಕ್ತಿ ಮೀರಿ...

ಬಿಎಂಟಿಸಿ | 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಖಾಲಿ ಇರುವ ಸುಮಾರು 2,500...

ಬೆಂಗಳೂರು | ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕ ಹಾಕಲು ಬುಧವಾರವೇ ಕೊನೆ ದಿನ

ಫೆ.28ರೊಳಗೆ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ವಾಣಿಜ್ಯ ಮಳಿಗೆಗಳ ಮುಂದೆ...

ಬೆಂಗಳೂರು ಪೂರ್ವ | ಆರು ತಿಂಗಳಲ್ಲಿ 46 ‘ವ್ಹೀಲಿಂಗ್ ಮಾಡಿದ’ ಪ್ರಕರಣ ದಾಖಲು

ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 2023 ರಿಂದ 2024ರ...