ಬೆಂಗಳೂರನ್ನು ಅವಹೇಳನ‌ ಮಾಡುತ್ತಿರುವುದು ನಮ್ಮವರೇ: ಬಿಜೆಪಿ ವಿರುದ್ಧ ಸಚಿವ ಪರಮೇಶ್ವರ್‌ ವಾಗ್ದಾಳಿ

Date:

ನಮ್ಮವರೇ ಬೆಂಗಳೂರನ್ನು ಅವಹೇಳನ‌ ಮಾಡುತ್ತಿದ್ದಾರೆ. ಹೊರ ದೇಶದವರಿಗೆ, ಹೊರ ಜನರಿಗೆ ಬೆಂಗಳೂರಿನ ಬಗ್ಗೆ ಏನನ್ನು ಬಿಂಬಿಸಲು ಹೊರಟಿದ್ದೀರಿ ಎಂದು ಬಿಜೆಪಿಯವರನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ‌ತರಾಟೆಗೆ ತೆಗೆದುಕೊಂಡರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿ.ಕೆ.ಶಿವಕುಮಾರ್ ಅವರು ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಅನೇಕ‌ಸಲ ಹೇಳಿದ್ದಾರೆ. ಇದಕ್ಕೆ ನಿಗದಿತವಾದ ಕಾರ್ಯಕ್ರಮವನ್ನು ಹಾಕಿಕೊಂಡಿದ್ದಾರೆ. ಎಲ್ಲರ ಆಡಳಿತಾವಧಿಯಲ್ಲಿಯೂ ಮಳೆಗಾಲದಲ್ಲಿ ರಸ್ತೆ ಗುಂಡಿ ಬೀಳುವುದು, ಚರಂಡಿಯಲ್ಲಿ ಕಸ ತುಂಬಿಕೊಂಡು ಫ್ಲಡ್ ಆಗಿದೆ. ಇದನ್ನು ಆಧರಿಸಿ ಬೆಂಗಳೂರಿನ ಬಗ್ಗೆ ಕೆಟ್ಟದಾಗಿ ಬಿಂಬಿಸುವುದು ಸರಿಯಲ್ಲ‌” ಎಂದರು.

“ಉಡ್ತಾ ಬೆಂಗಳೂರು, ಬ್ರ್ಯಾಂಡ್ ಬೆಂಗಳೂರು ಅಲ್ಲ ಗುಂಡಿ ಬೆಂಗಳೂರು ಅನ್ನುವುದು. ಹೊರ ದೇಶದವರಿಗೆ ಏನು ಚಿತ್ರಣ ಬಿಂಬಿಸಲು ಹೊರಟಿದ್ದೀರಿ? ನಮ್ಮ‌ ಮೇಲೆ, ನಮ್ಮ ಸರ್ಕಾರದ ಮೇಲೆ‌ ಆರೋಪಿಸಲಿ.‌ ತಪ್ಪುಗಳಿದ್ದರೆ ಸರಿಪಡಿಸಿಕೊಳ್ಳುತ್ತೇವೆ. ಜವಾಬ್ದಾರಿಯುತವಾಗಿ ನಡೆದುಕೊಳ್ಳದಿದ್ದರೆ, ನೀವೇ ಬೆಂಗಳೂರಿಗೆ ಕೆಟ್ಟ ಹೆಸರು ತರುತ್ತಿದ್ದೀರಿ” ಎಂದು ಹರಿಹಾಯ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅನೇಕ ವಿಚಾರಗಳ ಬಗ್ಗೆ ಬಿಜೆಪಿಯವರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸರಿಯಾದ ಸಂದರ್ಭದಲ್ಲಿ ಉತ್ತರಿಸಲಾಗುವುದು. ಏನಾದರೂ ನಿರ್ಧಿಷ್ಟವಾಗಿ ಹೇಳುವುದಿದ್ದರೆ ಹೇಳಲಿ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ನೋಡಿಕೊಳ್ಳಲು ಪೊಲೀಸ್ ಕಮಿಷನರ್ ಇದ್ದಾರೆ. ಪೊಲೀಸ್ ಇಲಾಖೆ ಇದೆ. ಅವರಿಗೆ ತಿಳಿಸಿದರೆ ಕ್ರಮ ತೆಗೆದುಕೊಳ್ಳುತ್ತಾರೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸದಿದ್ದರೆ ಅವರ ವಿರುದ್ಧ ಕ್ರಮ ಜರುಗಿಸುತ್ತೇವೆ. ಹೇಳಿಕೆಗಳಿಂದ ಪರಿಹಾರ ಕಂಡುಕೊಳ್ಳಲಾಗುವುದಿಲ್ಲ” ಎಂದರು

ಪತ್ರಕ್ಕೆ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಬೆಲೆ ಸಿಗಲಿಲ್ಲವೇ?

“ಮುಖ್ಯಮಂತ್ರಿಯವರು ಪ್ರಧಾನಮಂತ್ರಿಯವರಿಗೆ ಬರೆದ ಪತ್ರ ಮೇ 21ರಂದು ತಲುಪಿದೆ ಎಂಬುದಾಗಿ ವಿದೇಶಾಂಗ ಸಚಿವರು ಹೇಳಿದ್ದಾರೆ. ಮುಖ್ಯಮಂತ್ರಿಯವರು ಬರೆದಿದ್ದ ಪತ್ರ ವಿಚಾರವನ್ನು ಪ್ರಧಾನಮಂತ್ರಿ ಕಚೇರಿಯವರು ವಿದೇಶಾಂಗ ಇಲಾಖೆಯ ಕಚೇರಿಗೆ ತಿಳಿಸಿಲ್ಲ ಎಂಬುದು ಗೊತ್ತಾಗುತ್ತದೆ. ಪತ್ರಕ್ಕೆ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಬೆಲೆ ಸಿಗಲಿಲ್ಲವೇ? ವಿದೇಶಾಂಗ ಇಲಾಖೆಯ ಕಚೇರಿಗೆ ತಿಳಿಸಿಲ್ಲ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಯಾವ ರೀತಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಅನ್ನುವುದನ್ನು ಇದರಿಂದ ಅರ್ಥೈಸಿಕೊಳ್ಳಬೇಕು” ಎಂದು ಹೇಳಿದರು.

“ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದಾದ ಬಳಿಕ ದೇಶಕ್ಕೆ ವಾಪಸ್ ಆಗಬೇಕಾಗುತ್ತದೆ. ಆ ದೇಶದವರು ಇಟ್ಟುಕೊಳ್ಳಲು ಆಗುವುದಿಲ್ಲ” ಎಂದರು.

ರೌಡಿಸಂ ಮಾಡುವರನ್ನು ಸುಮ್ಮನೆ ಬಿಡುವುದಿಲ್ಲ

ದಾವಣಗೆರೆ ಘಟನೆಯ ಕುರಿತು ಪ್ರತಿಕ್ರಿಯಿಸಿದ ಅವರು, “ದೂರು ಇದ್ದ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ. ಆತನಿಗೆ 7 ನಿಮಿಷದೊಳಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಅದಕ್ಕೆ ಅವರು ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ, ಠಾಣೆಗೆ ನುಗ್ಗಲು ಯತ್ನಿಸಿದ್ದಾರೆ” ಎಂದರು.

“ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಗೊತ್ತಾಗಲಿದೆ. ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಘಟನೆಯಲ್ಲಿ ಪೇದೆಯೊಬ್ಬರು ಗಾಯಗೊಂಡಿದ್ದಾರೆ. ರೌಡಿಸಂ ಮಾಡುವರನ್ನು ಸುಮ್ಮನೆ ಬಿಡುವುದಿಲ್ಲ. ಪೊಲೀಸ್ ಠಾಣೆಗೆ ಬಂದು ಧಮ್ಕಿ ಹಾಕುವವರ ಬಗ್ಗೆ ಮೃಧುದೋರಣೆ ತೋರಿಸಲು ಆಗುತ್ತಾ? ಪೊಲೀಸರ ತಲೆ ಕತ್ತರಿಸುತ್ತೀನಿ ಅನ್ನುವರನ್ನ ಬಿಡುವುದಕ್ಕಾಗುತ್ತದೆಯೇ? ಅಂತವರ ಮೇಲೆ ಕಾನೂನಿನಲ್ಲಿ ಇರುವ ಅವಕಾಶದಂತೆ‌ ಕ್ರಮ ಜರುಗಿಸಲಾಗುತ್ತದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಮಾದರಿ ಮಾಡುತ್ತೀವಿ ಅಂದಿರುವುದು ಗಮನಕ್ಕೆ ಬಂದಿದೆ. ಮುಲಾಜಿಲ್ಲದೇ ಕಾನೂನು‌ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಎಚ್ಚರಿಸಿದರು.

ಹರೀಶ್ ಪೂಂಜಾ ಜಾಮೀನಿನ ಮೇಲೆ ಬಿಡುಗಡೆ

“ಶಾಸಕ ಹರೀಶ್ ಪೂಂಜಾನನ್ನು ಬಂಧಿಸಿ‌ ಠಾಣೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪೊಲೀಸರು ದೋಷಾರೋಪಣಾ ಪಟ್ಟಿ ಸಲ್ಲಿಸುತ್ತಾರೆ. ಪ್ರಕರಣ ಜನ ಪ್ರತಿನಿಧಿಗಳ ವಿಶೇಷ ನ್ಯಾಯಲಯದ ಮುಂದೆ ಬರುತ್ತದೆ” ಎಂದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ...

ಸೆಲೆಬ್ರಿಟಿಗಳ ಸುದ್ದಿಗಳು, ಮಾಧ್ಯಮಗಳು ಮತ್ತು ಜನಸಾಮಾನ್ಯರು

ಜವಾಬ್ದಾರಿಯುತ ಮಾಧ್ಯಮಗಳು ಮತ್ತು ಪ್ರಜ್ಞಾವಂತ ಜನರು ಸಕ್ರಿಯವಾಗಿ ಜನರನ್ನು ನಿರಂತರವಾಗಿ ಎಚ್ಚರಿಸುತ್ತಾ...

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...