ಕೆಜಿಎಫ್‌ ಬಾಬು ಮನೆ ಮೇಲೆ ಐಟಿ ದಾಳಿ ಅಂತ್ಯ; ದೂರು ದಾಖಲಿಸಿದ ಚುನಾವಣಾಧಿಕಾರಿಗಳು

Date:

  • ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದತೆ ನಡೆಸಿದ್ದ ಕೆಜಿಎಫ್‌ ಬಾಬು
  • ಚುನಾವಣಾ ಅಧಿಕಾರಿಗಳಿಂದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ದಾಖಲು

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಸಿದ್ದತೆ ನಡೆಸಿದ್ದ ಉದ್ಯಮಿ ಕೆಜಿಎಫ್‌ ಬಾಬು ಮನೆ ಮೇಲೆ ನಡೆದಿದ್ದ ಐಟಿ ದಾಳಿ ಬಹುತೇಕ ಅಂತ್ಯಗೊಂಡಿದೆ. ಬಾಬು ವಿರುದ್ಧ ಚುನಾವಣಾ ಅಧಿಕಾರಿಗಳು ಹೈಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿದ್ದಾರೆ.

ಬುಧವಾರ ಬೆಳಂಬೆಳಗ್ಗೆ ವಸಂತನಗರದ ರುಕ್ಸಾನ ಪ್ಯಾಲೇಸ್‌ನಲ್ಲಿರುವ ಬಾಬು ಅವರ ಮನೆಗೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ, ಸೀರೆ, ಡಿ.ಡಿ, ಮತದಾರರ ಗುರುತಿನ ಚೀಟಿ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದ್ದು, ಮೆಲ್ನೋಟಕ್ಕೆ ಚುನಾವಣಾ ಅಕ್ರಮ ಎಸಗಿರುವುದು ಕಂಡು ಬಂದಿದೆ ಎನ್ನಲಾಗಿದೆ. ಬಾಬು ವಿರುರ್ದಧ ಚುನಾವಣಾ ಅದಿಕಾರಿಗಳು ಹೌಗೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎನ್‌ಸಿಆರ್‌ ದಾಖಲಿಸಿಕೊಂಡಿರುವ ಪೊಲೀಸರು, ನ್ಯಾಯಾಲಯದಿಂದ ಒಪ್ಪಿಗೆ ಪಡೆದ ನಂತರವ ಎಫ್ಐಆರ್ ದಾಖಲಿಸಲು ಚಿಂತನೆ ನಡೆಸಿದ್ದಾರೆ.

ಐಟಿ ಅಧಿಕಾರಿಗಳು ದಾಳಿ ನಡೆಸಿದಾಗ 26 ಬ್ಯಾಗ್‌ಗಳಲ್ಲಿ ಇಟ್ಟಿದ್ದ ಸೀರೆಗಳು, ಮುದ್ರಣ ಪ್ರತಿಗಳು, ವ್ಯಾನ್ ಹುಸೇನ್ ಕಂಪನಿಯ 481 ಸೂಟ್‌ಗಳು, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ 2000ಕ್ಕೂ ಹೆಚ್ಚು ವೋಟರ್ ಐಡಿ ಹಾಗೂ ಅದಕ್ಕೆ ಪಿನ್‌ ಮಾಡಲಾಗಿದ್ದ ಎಚ್‌ಡಿಎಫ್‌ಸಿ ಬ್ಯಾಂಕ್ ಅಕೌಂಟ್‌ನ (50200060873761) ನಂಬರ್‌ನ ಚೆಕ್‌ಗಳು ಪತ್ತೆಯಾಗಿವೆ. ಪ್ರತಿ ಚೆಕ್ ಮೇಲೂ 5000 ರೂ. ಎಂದು ಬರೆಯಲಾಗಿತ್ತೆಂದು ಮಾಹಿತಿ ಲಭ್ಯವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? : ಬೆಂಗಳೂರು | ಕಾಂಗ್ರೆಸ್‌ ಮುಖಂಡ ಕೆಜಿಎಫ್‌ ಬಾಬು ಕಚೇರಿ ಮೇಲೆ ಐಟಿ ದಾಳಿ

ಇವುಗಳೆನ್ನೆಲ್ಲ ಗಮನಿಸಿದ ಐಟಿ ಅಧಿಕಾರಿಗಳು ಕೆಜಿಎಫ್ ಬಾಬು ಚುನಾವಣಾ ನೀತಿ ಸಂಹಿತೆ ಉಲ್ಲಂಘಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ ಎಂದಿದ್ದಾರೆ. ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ಅಧಿಕಾರಿಗಳಿಂದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...