ದೇವೇಗೌಡರ ರಾಜಕೀಯ ಭವಿಷ್ಯ ನಿರ್ನಾಮ ಮಾಡಿದ್ದು ಇದೇ ಕಾಂಗ್ರೆಸ್: ಎಚ್‌ ಡಿ ಕುಮಾರಸ್ವಾಮಿ

Date:

ದೇವೇಗೌಡರ ರಾಜಕೀಯ ಭವಿಷ್ಯ ನಿರ್ನಾಮ ಮಾಡಿದ್ದು ಇದೇ ಕಾಂಗ್ರೆಸ್, ಇವರಿಂದ ನಾನು ಪಾಠ ಕಲಿಬೇಕಾ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

- Advertisement -

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಅಧಿಕಾರಕ್ಕಾಗಿ ಜೆಡಿಎಸ್ ಕೇಸರಿಕರಣವಾಗಿದೆ’ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಚರಣ್ ಸಿಂಗ್ ಅವರಿಗೆ ಸಂಸತ್ ಕಲಾಪದಲ್ಲಿ ಭಾಗವಹಿಸಲು ಕಾಂಗ್ರೆಸ್ ಬಿಡಲಿಲ್ಲ. ಚಂದ್ರಶೇಖರ್ ಸೇರಿ ಎಷ್ಟು ಜನರನ್ನ ಬಲಿ ತೆಗೆದುಕೊಂಡರು. ಅವರ ರಾಜಕೀಯ ಭವಿಷ್ಯ ನಿರ್ನಾಮ ‌ಮಾಡಿಬಿಟ್ಟರು. ‌ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು, ಅದಕ್ಕೂ ಮೊದಲು ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದಿದ್ದು ಅವರಿಗೆ ಗೊತ್ತಿರಲಿಲ್ಲವೇ” ಎಂದು ಕಿಡಿಕಾರಿದರು.

“ಅಧಿಕಾರಕ್ಕಾಗಿ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್. ಅವತ್ತು ಏನೇನು ನಡೆಯಿತು ಎನ್ನುವುದನ್ನು ಅವರು ತಮ್ಮ ತಂದೆಯನ್ನು ಕೇಳಿ ತಿಳಿದುಕೊಳ್ಳಲಿ. ಬೆಂಗಳೂರಿನಲ್ಲಿ ರಾಜಕೀಯ ಮಾಡುವ ಬದಲು ತಮ್ಮ ಜಿಲ್ಲೆಯಲ್ಲಿ ಏನಾಗಿದೆ ಎಂಬ ಬಗ್ಗೆ ಗಮನ ಹರಿಸಲಿ. ಕಾಂಗ್ರೆಸ್ ನವರು ಮಾತೆತ್ತಿದರೆ ತಾಜ್ ಹೋಟೆಲ್‌ನಲ್ಲಿ ಇದ್ದೆ ಅಂತಾರೆ. ನಾನು ತಾಜ್ ಹೊಟೇಲಿನಲ್ಲಿ ಮಲಗಿದ್ದರೆ ರೈತರ 25 ಸಾವಿರ ಕೋಟಿ ಸಾಲಮನ್ನಾ ಮಾಡೋಕೆ ಆಗುತ್ತಿತ್ತಾ”ಎಂದು ಸಚಿವರು ಪ್ರಶ್ನಿಸಿದರು.

“ಕಾಂಗ್ರೆಸ್ ಶಾಸಕರಿಗೆ ‌ನಾನು ಸಿಎಂ ಅಗಿದ್ದಾಗ ಅಭಿವೃದ್ದಿಗಾಗಿ 19 ಸಾವಿರ ಕೋಟಿ ಅನುದಾನವನ್ನು ಒಂದೇ ವರ್ಷದಲ್ಲಿ ಕೊಟ್ಟಿದ್ದೆ. ಇವತ್ತು ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಇದ್ದಾಗ ಏನ್ ಕೊಟ್ರು ಅಂತ ಚರ್ಚೆ ಮಾಡ್ತಾರೆ. ದಾಖಲೆ, ಅಂಕಿ ಅಂಶಗಳು ಅವರ ಬಳಿಯೇ ಇವೆ. ಮೊದಲು ನೋಡಲಿ” ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಆರ್ ಎಸ್ ಎಸ್ ಬ್ಯಾನ್ ವಿಚಾರ

“ಹಿಂದೆ ನಾನು ಆರ್ ಎಸ್ ಎಸ್ ಅನ್ನು ಟೀಕೆ ಮಾಡಿದ್ದೇನೆ. ಇಲ್ಲ ಅಂತ ಹೇಳಲ್ಲ. ಕಾಂಗ್ರೆಸ್‌ನವರು ನೀವೇನು ಮಾಡಿದ್ದೀರಾ? ರಾಜ್ಯದಲ್ಲಿ 136 ಸೀಟು ಕೊಟ್ಟಿದ್ದಾರೆ. ಜನರ ಸಮಸ್ಯೆ ಕೇಳ್ತಿಲ್ಲ. ಕಲಬುರ್ಗಿಯಲ್ಲಿ ಜನ ಬೀದಿಯಲ್ಲಿ ಇದ್ದಾರೆ. ರೈತರು ಸಂಕಷ್ಟದಲ್ಲಿ ಇದ್ದಾರೆ ಏನು ಮಾಡಿದ್ದೀರಪ್ಪ?” ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

“ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಅಪ್ಪ ಏನು ಹೇಳಿದ್ದರು? ನಮ್ಮ ಹೊಲದಲ್ಲಿ 40 ಎಕರೆ ಬೆಳೆ ನಷ್ಟ ಆಗಿದೆ ಅಂತ ರೈತರು ಹೋಗಿ ಕೇಳಿದರೆ ನಾನು ಎಲ್ಲಿ ಹೋಗಲಿ ಅಂತ ಹೇಳಿದ್ದರು. ನಿಮ್ಮಿಂದ ನಾನು ಯಾವ ರೀತಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಬೇಕು ಅಂತ ಕಲಿಯಬೇಕಾ? ಪ್ರಿಯಾಂಕ್ ಖರ್ಗೆ ಮಾತಾಡಬೇಕಾದ್ರೆ ಹದ್ದುಬಸ್ತಿನಲ್ಲಿ ಮಾತಾಡಿ. ನನ್ನ ಬಗ್ಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಉಳಿಸಿಕೊಂಡಿಲ್ಲ ನೀವು” ಎಂದು ಪ್ರಿಯಾಂಕ ಖರ್ಗೆಗೆ ಸಚಿವರು ಎಚ್ಚರಿಕೆ ನೀಡಿದರು.

“ಅಧಿಕಾರಕ್ಕಾಗಿ ನಾವು ಯಾರ ಬಳಿಗೂ ಹೋಗೊಲ್ಲ. ಕಾಂಗ್ರೆಸ್ ಅವರು ಅಧಿಕಾರ ಹಿಡಿಯಲು ಬೇಕಾದಾಗ ನಮ್ಮ ಹತ್ತಿರ ಬರುತ್ತಾರೆ. ಯಾರ ಯಾರ ಬೆನ್ನಿಗೆ ಕಾಂಗ್ರೆಸ್ ಚೂರಿ ಹಾಕಿದೆ ಎಂಬುದು ಗೊತ್ತಿದೆ. ಯಾರು ಯಾರನ್ನ ಅಧಿಕಾರದಿಂದ ತೆಗೆದರು‌, ಎಷ್ಟು ಜನರ ರಾಜಕೀಯ ಜೀವನ ಹಾಳು ಮಾಡಿದರು ಎನ್ನುವುದು ನಿಮಗೆ ತಿಳಿದಿಲ್ಲವೇ” ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಪಥಸಂಚಲನ ಪಾಲಿಟಿಕ್ಸ್‌ | ಕಲಬುರಗಿಯಲ್ಲಿ ನಡೆಯುವುದೇ RSS-DSS ನೇರ ಹಣಾಹಣಿ?

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕಿಲ್ಲ

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ಈ ಬಗ್ಗೆ ವಿಷಯ ಚರ್ಚೆಗೆ ಬಂದಿಲ್ಲ. ಸದ್ಯ ನಾನೇ ಅಧ್ಯಕ್ಷನಾಗಿದ್ದೇನೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ ಅವರಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ, ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ಅವರು ತಿಳಿಸಿದರು.

ಅನುದಾನ; ಸಿಎಂಗೆ ತರಾಟೆ

ಕೇಂದ್ರದಿಂದ ರಾಜ್ಯಕ್ಕೆ ಸೂಕ್ತ ಅನುದಾನ ಸಿಗುತ್ತಿಲ್ಲ ಸಿಎಂ ಸಿದ್ದರಾಮಯ್ಯ ‌ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, “ದೇಶದಲ್ಲಿ 50 ವರ್ಷಗಳ ಕಾಂಗ್ರೆಸ್ ಪಕ್ಷ ಒಂದೇ ಆಡಳಿತ ನಡೆಸಿದೆ. ಸ್ವಾತಂತ್ರ್ಯ ಬಂದ ನಂತರ ಎಲ್ಲಾ28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಂಸದರನ್ನೇ ಜನ ಗೆಲ್ಲಿಸುತ್ತಿದ್ದರು. ಆಗ ಕೇಂದ್ರದಲ್ಲೂ, ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ ಇತ್ತು. ಅವತ್ತಿನ ಅ ಸಂಸತ್ ಸದಸ್ಯರು ಏನೇನು ತಂದಿದ್ದರು” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...