ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮುಚ್ಚಿದ ಲಕೋಟೆಯಲ್ಲೇ ಜಾತಿಗಣತಿ ವರದಿ ತೆರೆಯಲು ನಿರ್ಧಾರ

Date:

ಕರ್ನಾಟಕ ಎದುರು ನೋಡುತ್ತಿರುವ ಜಾತಿಗಣತಿ ವರದಿ ಬಗ್ಗೆ ಕಾಂಗ್ರೆಸ್‌ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಹುನಿರೀಕ್ಷಿತ ಜಾತಿಗಣತಿ ವರದಿ ತೆರೆಯಲು ತೀರ್ಮಾನ ಕೈಗೊಳ್ಳಲಾಗಿದೆ.

- Advertisement -

ಜಾತಿಗಣತಿ ವರದಿಯನ್ನು ಮೊಹರು ಮಾಡಿದ ಲಕೋಟೆಯಲ್ಲಿರುವುದನ್ನು ತೆರೆಯಲು ತೀರ್ಮಾನಿಸಲಾಗಿದ್ದು, ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯ ಮುಂದಿಡಲು ನಿರ್ಧರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಸಚಿವ ಸಂಪುಟ ಸಭೆಯ ಪ್ರಮುಖ ಅಂಶಗಳು

ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ 8 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ವಿಮೆ ಒದಗಿಸಲು ನಿರ್ಧಾರ.

ರೇಷನ್​ ಕಾರ್ಡ್​ ಇರುವವರಿಗೆ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಎಂಆರ್​ಐ ಸ್ಕ್ಯಾನ್, ಸಿಟಿ ಸ್ಕ್ಯಾನ್.

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲು ಅಸ್ತು. ಇದಕ್ಕೆ 413 ಕೋಟಿ ರೂ. ಅನುಮೋದನೆ.

ಮಹಾನಗರ ಪಾಲಿಕೆಯ ಒಟ್ಟು 13 ಹೆರಿಗೆ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ನಿರ್ಧಾರ.

10 ಮಹಾನಗರ ಪಾಲಿಕೆ ಮತ್ತು 24 ನಗರಪಾಲಿಕೆಗಳಲ್ಲಿ ಒಂದು ಚಿತಾಗಾರಕ್ಕೆ 4 ಕೋಟಿ ರೂ. ವೆಚ್ಚದಂತೆ 126 ಕೋಟಿ ರೂ ವೆಚ್ಚದಲ್ಲಿ ಚಿತಾಗಾರಗಳ ನಿರ್ಮಾಣ.

10 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ.

ಡಿಜಿ ಕಂದಾಯ ಯೋಜನೆಯ ಅನುದಾನದಿಂದ ಡಿಜಿ ಸೇವೆಯನ್ನು ನೀಡಲು ಕ್ರೋಮ್ ಬುಕ್ ಅಥವಾ ಲ್ಯಾಪ ಟಾಪ್​​ ಖರೀದಿಗೆ 20 ಕೋಟಿ ರೂ ಅನುಮೋದನೆ.

ಆರ್ಥಿಕ ಇಲಾಖೆ ಅಧಿಕಾರಿಗಳು, ನೌಕರರ ವರ್ಗಾವಣೆಯನ್ನು ಕೌನ್ಸೆಲಿಂಗ್​ ಮೂಲಕ ಮಾಡಲು ಅನುಮೋದನೆ.

13.30 ಕೋಟಿ ರೂ. ವೆಚ್ಚದಲ್ಲಿ ಆಶಾಕಿರಣ ಯೋಜನೆ ಜಾರಿಗೆ ಅಸ್ತು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್​ಗೆ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಕ್ಕೆ ನಿರ್ಧಾರ.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ 450 ಬೆಡ್​​ ಉಳ್ಳ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ.

ಅಸ್ತಿತ್ವದಲ್ಲಿರುವ ಅಂಗ ಕಸಿ ಜೀವ ಸಾರ್ಥಕತೆ ಯೋಜನೆಗೆ ಶ್ವಾಸಕೋಶ ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನು ಸೇರಿಸಿ ಯೋಜನೆ ವಿಸ್ತರಣೆಗೆ ಅನುಮೋದನೆ.

ಎಚ್ಎಂಟಿ ಅಧೀನದಲ್ಲಿ ಇರುವ ಅರಣ್ಯ ಭೂಮಿ ಹಿಂಪಡೆಯುವ ಬಗ್ಗೆ ಚರ್ಚೆ. ಸುಪ್ರಿಂ ಕೋರ್ಟ್‌ನಲ್ಲಿರುವ ಮಧ್ಯಂತರ ಅರ್ಜಿ ಹಿಂಪಡೆಯಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡಿಗರಿಗೆ ಉದ್ಯೋಗ ತಾರತಮ್ಯ: ಖಾಸಗಿ ಸಂಸ್ಥೆಗಳಿಗೆ ಸಿಎಂ ಎಚ್ಚರಿಕೆ, ಕನ್ನಡಪರ ಸಂಘಟನೆಗಳಿಗೆ ಶಾಂತಿ ಕಾಪಾಡಲು ಮನವಿ

ಐಟಿ-ಬಿಟಿ ಕಂಪನಿಗಳಲ್ಲಿ ನೇಮಕಾತಿ ವೇಳೆ ಸ್ಥಳೀಯ ಕನ್ನಡಿಗರಿಗೆ ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಲಾಗುತ್ತಿದೆ...

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು ಮುಂದಾಗಿದ್ದೇಕೆ ಬಿಜೆಪಿ?

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು; ಹೋರಾಟದ ನಡುವೆ ಒಣಗುತ್ತಿದೆ ಕಬ್ಬು

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ...

ಬೆಂಗಳೂರಿನ ಪಂಚತಾರಾ ಹೋಟೆಲ್ ಈಜುಕೊಳದಲ್ಲಿ ವಿದ್ಯುತ್ ಸ್ಪರ್ಶ: ಇಬ್ಬರು ವಿದೇಶಿ ಪ್ರಜೆಗಳ ಸಾವು

ಬೆಂಗಳೂರಿನ ಹಲಸೂರಿನಲ್ಲಿರುವ ಪಂಚತಾರಾ ಹೋಟೆಲ್‌ನ ಈಜುಕೊಳದಲ್ಲಿ ಶುಕ್ರವಾರ ಸಂಜೆ ಈಜುತ್ತಿದ್ದ ವೇಳೆ...