ಆರೋಗ್ಯ ಸೇವೆ ಜನರಿಗೆ ಸಮರ್ಪಕವಾಗಿ ಸಿಗದಿದ್ದರೆ ಸಹಿಸಲ್ಲ: ಅಧಿಕಾರಿಗಳ ವಿರುದ್ಧ ಸಚಿವ ಗುಂಡೂರಾವ್ ಗರಂ

Date:

“ಗುಣಮಟ್ಟದ ಆರೋಗ್ಯ ಸೇವೆಗಳು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಗಮನ ಹರಿಸಬೇಕು. ಒಂದು ವೇಳೆ ಜನರಿಗೆ ಆರೋಗ್ಯ ಸೇವೆ ಸಮರ್ಪಕವಾಗಿ ಸಿಗದಿದ್ದರೆ ಸಹಿಸಲ್ಲ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು(ಜೂನ್ 20) ಆರೋಗ್ಯ ಇಲಾಖೆಯ ಉಪನಿರ್ದೇಶಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಸಭೆ ನಡೆಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಜಾರಿಯಲ್ಲಿರುವ ಆರೋಗ್ಯ ಸೇವೆಗಳು ಹೆಚ್ಚು ಪ್ರಗತಿ ಕಂಡಿಲ್ಲ. ಹಲವು ಸೇವೆಗಳು ನಿರೀಕ್ಷಿತ ಮಟ್ಟದಲ್ಲಿ ಅನುಷ್ಠಾನಗೊಂಡಿಲ್ಲ. ಕಳೆದ ವರ್ಷದ ಅವಧಿಯಲ್ಲಿ ಹಲವು ಬಿಲ್‌ಗಳು ಪಾವತಿಯಾಗದೇ ಬಾಕಿ ಇರಿಸಿಕೊಂಡಿರುವ ಬಗ್ಗೆ ಅಧಿಕಾರಿಗಳಿಗೆ ಚಾಟಿ ಬೀಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ದೊರೆಯುವ ಅನುದಾನವನ್ನ ಸಮರ್ಪಕವಾಗಿ ಬಳಿಸಿಕೊಂಡಿಲ್ಲ ಎಂದಾದರೆ, ಆರೋಗ್ಯ ಸೇವೆಗಳು ಸಮರ್ಪಕವಾಗಿ ತಲುಪಲು ಹೇಗೆ ಸಾಧ್ಯ ಎಂದು ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಚುರುಕು ಮುಟ್ಟಿಸಿದರು.‌

ಲಭ್ಯವಿರುವ ಹಣಕಾಸಿನ ಸರಿಯಾಗಿ ಖರ್ಚು ಮಾಡದಿದ್ದರೆ ಏನು ಪ್ರಯೋಜನ. ಟೆಂಡರ್ ಪ್ರಕ್ರಿಯೆಗಳನ್ನ ಮಾರ್ಚ್ ತಿಂಗಳವರೆಗೆ ಯಾಕೆ ಎಳೆದುಕೊಂಡು ಹೋಗುತ್ತಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.‌

“ಯಾವ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಲ್ಲ ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ನಾನು ಹಿಂಜರಿಯಲ್ಲ. ಯಾರ ಮುಲಾಜೂ ನಮಗಿಲ್ಲ. ಯಾರ ಒತ್ತಡದಿಂದಲೂ ನಾನು ಒಬ್ಬ ಅಧಿಕಾರಿಯನ್ನೂ ನೇಮಿಸಿಲ್ಲ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಲಹೆಯ ಮೇರೆಗೆ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನ ನೀಡಲಾಗಿದೆ. ಹೀಗಾಗಿ ನಿಮ್ಮ ಕಾರ್ಯದಕ್ಷತೆ ತೋರದಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ನಿರ್ಧಾರಗಳನ್ನ ತೆಗೆದುಕೊಳ್ಳುವುದಾಗಿ” ಸಚಿವ ದಿನೇಶ್ ಗುಂಡೂರಾವ್ ಅವರು ಎಚ್ಚರಿಕೆ ನೀಡಿದರು.

ಜಿಲ್ಲಾಸ್ಪತ್ರೆಗಳಲ್ಲಿ ಕಾರ್ಯವೈಖರಿ, ಇ – ಆಫೀಸ್, ಟೆಲಿ ಐಸಿಯು, ಆಯುಷ್ಮಾನ್ ಭಾರತ್ ಯೋಜನೆಯ ರೆಫರೆಲ್ ಪದ್ದತಿಗಳ ಬಗ್ಗೆ ಚರ್ಚಿಸಲು ಸಭೆ ಆಯೋಜಿಸುವಂತೆ ಇದೇ ವೇಳೆ ಸಚಿವರು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಎನ್.ಎಚ್.ಎಮ್. ಎಂ.ಡಿ ನವೀನ್ ಭಟ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಬಿಜೆಪಿಯಲ್ಲಿ ಯೋಗಿ-ಮೌರ್ಯ ನಡುವೆ ಗುದ್ದಾಟ; ಮೋದಿ-ಶಾ ಚರ್ಚೆ

ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ತೀರಾ ಕಳಪೆ ಪ್ರದರ್ಶನ ನೀಡಿದೆ....

ಕನ್ನಡಿಗರಿಗೆ ಉದ್ಯೋಗ | ‘ಅಸ್ತು’ ಎಂದು ಹೆಜ್ಜೆ ಇಟ್ಟ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’: ವಿಜಯೇಂದ್ರ ವ್ಯಂಗ್ಯ

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ?...

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ; ಯೂ-ಟರ್ನ್‌ ಸರ್ಕಾರ ಎಂದ ಬಿಜೆಪಿ

ಖಾಸಗಿ ವಲಯದ ಕಂಪನಿಗಳು, ಸಂಸ್ಥೆಗಳಲ್ಲಿ ಕನ್ನಡಿಗರಿಗೆ 75% ಮೀಸಲಾತಿ ಒದಗಿಸುವ ಮಸೂದೆಯನ್ನು...

‘ಬಡವರ ವಿರುದ್ಧ ಬುಲ್ಡೋಜರ್ ಹರಿಸಿದ್ದೇ ಬಿಜೆಪಿಗೆ ಮುಳುವಾಯಿತು’; ಬಿಜೆಪಿ ಮಿತ್ರ ಪಕ್ಷದ ಟೀಕೆ

ಬಡವರ ವಿರುದ್ಧ ಬುಲ್ಡೋಜರ್ ಹರಿಸಿದ್ದೇ ಬಿಜೆಪಿಗೆ ಮುಳುವಾಯಿತು ಎಂದು ಉತ್ತರಪ್ರದೇಶದ ಯೋಗಿ...