ಇದು ನಿರುದ್ಯೋಗ, ಹಣದುಬ್ಬರವನ್ನು ಸೋಲಿಸುವ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹೇಳಿದ್ದಾರೆ.
ದೇಶದಲ್ಲಿಂದು ಮೂರನೇ ಹಂತದ ಚುನಾವಣೆ ನಡೆಯುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ.
ಇಂದು (ಮೇ 7) ದೇಶದಲ್ಲಿ ಮೂರನೇ ಹಂತದ ಲೋಕಸಭೆ ಚುನಾವಣೆ ನಡೆಯುತ್ತಿದ್ದು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
प्रिय देशवासियों, यह चुनाव देश के लोकतंत्र और संविधान को बचाने का चुनाव है। यह ऐतिहासिक बेरोजगारी, प्रचंड महंगाई, संस्थागत भ्रष्टाचार और आर्थिक संकट को हराने का चुनाव है। आपका एक-एक वोट महत्वपूर्ण है। सोच-समझ कर, अपने विवेक का इस्तेमाल करते हुए भारी संख्या में मतदान करें। अपने और…
— Priyanka Gandhi Vadra (@priyankagandhi) May 7, 2024
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ “ಪ್ರಿಯ ದೇಶದ ಜನರೇ, ಈ ಚುನಾವಣೆ ಪ್ರಜಾಪ್ರಭುತ್ವ ಮತ್ತು ದೇಶದ ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಿದೆ. ಇದು ಐತಿಹಾಸಿಕ ನಿರುದ್ಯೋಗ, ವಿಪರೀತ ಹಣದುಬ್ಬರ, ಸಾಂಸ್ಥಿಕ ಭ್ರಷ್ಟಾಚಾರ ಮತ್ತು ಆರ್ಥಿಕತೆ ಬಿಕ್ಕಟ್ಟನ್ನು ಸೋಲಿಸುವ ಚುನಾವಣೆಯಾಗಿದೆ” ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ರಾಹುಲ್ ವಯನಾಡು ತೊರೆದರೆ, ಕೇರಳದಲ್ಲಿ ಕಾಂಗ್ರೆಸ್ ಭವಿಷ್ಯವೇನು?; ಕೈ ಹಿಡಿತಾರಾ ಪ್ರಿಯಾಂಕಾ
“ಪ್ರತಿಯೊಂದು ಮತವೂ ಮುಖ್ಯ. ಆಳವಾಗಿ ಆಲೋಚನೆ ಮಾಡಿ ನಂತರ ಮತ ಚಲಾಯಿಸಿ. ನಿಮ್ಮ ವಿವೇಚನೆಯನ್ನು ಬಳಸಿಕೊಂಡು ಹೆಚ್ಚಿನ ಜನರು ಮತ ಹಾಕಿ. ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಮತ ಚಲಾಯಿಸಿ” ಎಂದು ಮನವಿ ಮಾಡಿದ್ದಾರೆ.
ಮೂರನೇ ಹಂತದ ಚುನಾವಣೆಯಲ್ಲಿ ಸುಮಾರು 120 ಮಹಿಳೆಯರು ಸೇರಿದಂತೆ 1,300ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. 8.39 ಕೋಟಿ ಮಹಿಳೆಯರು ಸೇರಿದಂತೆ 17.24 ಕೋಟಿ ಜನರು ಮತದಾನ ಮಾಡಲು ಅರ್ಹರಾಗಿದ್ದಾರೆ.