ನನ್ನನ್ನು ಸೋಲಿಸೋಕೆ ಇದು ಗುಜರಾತ್ ಅಲ್ಲ, ಕರ್ನಾಟಕ: ಬಿಜೆಪಿ ವಿರುದ್ಧ ಗುಡುಗಿದ ಶೆಟ್ಟರ್

Date:

  • ಕರ್ನಾಟಕದಲ್ಲಿ ಕಾಂಗ್ರೆಸ್ ಈ ಬಾರಿ 140 ಸ್ಥಾನ ಪಡೆಯುತ್ತದೆ
  • ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ಅದು ಗುಲಾಮಗಿರಿಯ ಸಂಕೇತ

ನನ್ನನ್ನು ಸೋಲಿಸೋಕೆ ಇದು ಗುಜರಾತ್ ಅಲ್ಲ, ಕರ್ನಾಟಕ; ಇದು ಕಾಂಗ್ರೆಸ್ ಮುಖಂಡ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಗುಡುಗಿದ ಪರಿ.

ಕೊಪ್ಪಳದಲ್ಲಿನ ಕಾಂಗ್ರೆಸ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಜಗದೀಶ್ ಶೆಟ್ಟರ್, “ನನ್ನನ್ನು ಸೋಲಿಸುವುದಾಗಿ ಘಟಾನುಘಟಿಗಳು ಚಾಲೆಂಜ್ ಮಾಡಿದ್ದಾರೆ. ಆದರೆ ನನ್ನನ್ನ ಸೋಲಿಸೋಕೆ ಇದು ಗುಜರಾತ್ ಅಲ್ಲ, ಇದು ಕರ್ನಾಟಕ. ನಾನು ಇವರ ಸವಾಲನ್ನು ಮೆಟ್ಟಿ ಗೆದ್ದು ಬರುತ್ತೇನೆ” ಎಂದು ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಪಕ್ಷದ ಶಕ್ತಿ ಬಗ್ಗೆ ಮಾತನಾಡಿದ ಶೆಟ್ಟರ್, “ರಾಜ್ಯದಲ್ಲಿ ಕಾಂಗ್ರೆಸ್‌ಗೆ ಈ ಬಾರಿ 140 ಸ್ಥಾನ ಬರುತ್ತೆ” ಎಂದು ಭವಿಷ್ಯ ನುಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತಮ್ಮ ವಿಚಾರದಲ್ಲಿ ಬಿಜೆಪಿ ನಡೆದುಕೊಂಡ ರೀತಿಯನ್ನು ಜನರೆದುರು ಶೆಟ್ಟರ್ ಎಳೆಎಳೆಯಾಗಿ ಬಿಚ್ಚಿಟ್ಟರು, ಕಮಲ ಪಕ್ಷದ ಮೇಲೆ ವಾಗ್ದಾಳಿ ನಡೆಸಿದರು.

“ರಾಹುಲ್ ಗಾಂಧಿ ನನ್ನ ವಿಚಾರದಲ್ಲಿಒಂದು ಮಾತು ಹೇಳಿದರು, ಶೆಟ್ಟರೇ ನೀವು ಭ್ರಷ್ಟಾಚಾರಿ ಅಲ್ಲ. ಅದಕ್ಕೆ ಬಿಜೆಪಿ ಟಿಕೆಟ್ ನೀಡಲಿಲ್ಲ ಎಂದರು. ಹೌದು ಅವರು ಹೇಳಿದ್ದು ನಿಜವೇ” ಎಂದರು.

ಈ ಸುದ್ದಿ ಓದಿದ್ದೀರಾ?:ಈಗ ಬಿಜೆಪಿಗೆ ಬೇಕಿರೋದು ಲಿಂಗಾಯತ ಶಾಸಕರೇ ಹೊರತು ನಾಯಕರಲ್ಲ

“ಬಿಜೆಪಿಯವರ ನಿರ್ಧಾರದಿಂದ 6 ಬಾರಿ ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾಯಿತು. ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ಅದು ಗುಲಾಮಗಿರಿಯ ಸಂಕೇತ. ಶೆಟ್ಟರ್ ಮತ್ತೆ ಗೆದ್ದರೆ ಮುಂದಕ್ಕೆ ಹೋಗುತ್ತಾರೆನ್ನುವ ಆತಂಕ ಕೆಲವರನ್ನು ಕಾಡಿತು” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ; ಜೆ.ಪಿ ಹೆಗ್ಡೆಗೆ ಜನ ಬೆಂಬಲ

ಚಿಕ್ಕಮಗಳೂರು ಹಾಗೂ ಉಡುಪಿ ಲೋಕಾಸಭಾ ಕ್ಷೇತ್ರವಾಗಿದೆ. ಎಂಟು ವಿಧಾನಸಭಾ ಕ್ಷೇತ್ರ ಒಳಗೊಂಡ...

ನೇಹಾ ಕೊಲೆ ಪ್ರಕರಣ | ಸಿಐಡಿ ತನಿಖೆ ಆರಂಭ; ಆರೋಪಿ ಫಯಾಜ್‌ನನ್ನು ವಶಕ್ಕೆ ಪಡೆದ ಅಧಿಕಾರಿಗಳು

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ...

ಅನ್ಯ ರಾಜ್ಯಗಳ 9 ನಾಯಕರನ್ನು ಲೋಕಸಭೆಗೆ ಚುನಾಯಿಸಿದ ಕರ್ನಾಟಕದ ಮತದಾರರು

ರಾಜ್ಯಸಭೆಗೆ ಯಾವುದೇ ರಾಜ್ಯದ ನಾಯಕರು, ಉದ್ಯಮಿಗಳು ಸ್ಥಳೀಯ ರಾಜಕೀಯ ಪಕ್ಷದ ಬೆಂಬಲದಿಂದ...

ಲೋಕಸಭಾ ಚುನಾವಣೆ | ಊರಿಗೆ ಹೊರಟ ಮತದಾರರು; ಸುಲಿಗೆಗಿಳಿದ ಖಾಸಗಿ ಬಸ್‌ಗಳು

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26ರಂದು ಮತದಾನ...