ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ದೇವೇಗೌಡರಿಗೆ ಸಿದ್ದರಾಮಯ್ಯ ತಿರುಗೇಟು

Date:

ಜೆಡಿ(ಎಸ್) ವರಿಷ್ಠ ಹೆಚ್ ಡಿ ದೇವೇಗೌಡರು ನನ್ನನ್ನು ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

- Advertisement -

ಈ ಭಾರಿಯ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ಗರ್ವಭಂಗ ಮಾಡಬೇಕು ಎಂದು ಕರೆಕೊಟ್ಟಿರುವ ದೇವೇಗೌಡರ ಹೇಳಿಕೆ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ನನ್ನದು ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ” ಎಂದಿದ್ದಾರೆ.

“ದೇವೇಗೌಡರೇ, ವೈಯಕ್ತಿಕ ಇಲ್ಲವೆ ರಾಜಕೀಯ ಲಾಭಕ್ಕಾಗಿ ನಾನು ಯಾರ ಜೊತೆಯಲ್ಲಿಯೂ ರಾಜಿ ಮಾಡಿಕೊಳ್ಳಲಾರೆ, ಅಂತಹ ಪರಿಸ‍್ಥಿತಿ ಬಂದೊದಗಿದರೆ ರಾಜಕೀಯವಾಗಿ ನಿವೃತ್ತಿಯಾಗುತ್ತೇನೆ ವಿನಃ ಕರ್ನಾಟಕದ ಹಿತಾಸಕ್ತಿಯ ವಿರೋಧಿಗಳ ಜೊತೆಯಲ್ಲಿ ನಿಮ್ಮಂತೆ ಹೊಂದಾಣಿಕೆ ಮಾಡಿಕೊಳ್ಳಲಾರೆ” ಎಂದು ಕುಟುಕಿದ್ದಾರೆ.

“ದೇವೇಗೌಡರ ಜೊತೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯವಿದ್ದರೂ. ನಮ್ಮ ನೆಲ, ಜಲ ಮತ್ತು ಭಾಷೆಯ ರಕ್ಷಣೆಯ ಬಗೆಗಿನ ಅವರ ನಿಲುವಿನ ಬಗ್ಗೆ ಗೌರವ ಇತ್ತು. ಆದರೆ ಕಳೆದ ಹತ್ತು ವರ್ಷಗಳ ಅಧಿಕಾರವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹೆಜ್ಜೆಹೆಜ್ಜೆಗೂ ಕರ್ನಾಟಕದ ಹಿತಾಸಕ್ತಿಯ ವಿರುದ್ಧವೇ ಕೆಲಸ ಮಾಡಿದೆ. ನಾಡಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆ, ಕಾವೇರಿ, ಕೃಷ್ಣ, ಮಹದಾಯಿ ಜಲವಿವಾದಗಳಲ್ಲಿ ಅನ್ಯಾಯ, ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗ ಯುವಜನರಿಗೆ ವಂಚನೆ…. ಹೀಗೆ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ದ್ರೋಹ ಎಸಗುತ್ತಾ ಬಂದಿದೆ. ಹೀಗಿದ್ದರೂ “ದೇಶದ ಎಲ್ಲ ಸಮಸ್ಯೆಗಳಿಗೆ ಮೋದಿ ಮತ್ತು ಶಾ ಬಳಿ ಪರಿಹಾರ ಇದೆ” ಎಂದು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ನಿಮ್ಮನ್ನು ಚುಚ್ಚಲಿಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶೋಭಾ ಕರಂದ್ಲಾಜೆಗೆ ಯಾಕೆ ಇಡಿ ನೋಟಿಸ್ ಕೊಟ್ಟಿಲ್ಲ: ರಮೇಶ್‌ ಬಾಬು ಪ್ರಶ್ನೆ 

“ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯಕ್ಕೆ ಕ್ಷಮೆಯೇ ಇಲ್ಲ. ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರದ ಖಜಾನೆಗೆ ಸಂದಾಯವಾಗುವ ಕನ್ನಡಿಗರ ಒಂದು ರೂಪಾಯಿಗೆ ಪ್ರತಿಯಾಗಿ ಕೇವಲ ಹದಿಮೂರು ಪೈಸೆಯಷ್ಟು ಹಣ ಮಾತ್ರ ಕರ್ನಾಟಕಕ್ಕೆ ವಾಪಸು ಬರುತ್ತಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮೊದಲಾದ ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಕೂಡಾ ಕೇಂದ್ರ ಸರ್ಕಾರದ ಅನ್ಯಾಯವನ್ನು ಕೂಗಿ ಕೂಗಿ ಹೇಳುತ್ತಿವೆ. ಆದರೆ ಕರ್ನಾಟಕದ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಮಾತ್ರ ನಮ್ಮ ನೆಲ-ಜಲ-ಭಾಷೆಯ ವಿರೋಧಿಗಳ ಜೊತೆಯಲ್ಲಿ ರಾಜಿ ಮಾಡಿಕೊಂಡು ಕನ್ನಡಿಗರಿಗೆ ದ್ರೋಹ ಎಸಗಿದೆ” ಎಂದಿದ್ದಾರೆ.

“ದೇವೇಗೌಡರೇ, ಎಪ್ಪತ್ತು ವರ್ಷಗಳ ಕಾಲ ರಾಜಕೀಯದಲ್ಲಿದ್ದು ಕನ್ನಡಿಗರ ಪ್ರೀತಿ-ಅಭಿಮಾನವನ್ನು ಉಂಡು ಬೆಳೆದ ನೀವು ‘’ನಾವು ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿಯೇ ಚುನಾವಣೆ ನಡೆಸುತ್ತೇವೆ” ಎಂಬ ಶರಣಾಗತಿಯ ಹೇಳಿಕೆಯನ್ನು ನೀಡುವಾಗ ಕನಿಷ್ಠ ನಿಮ್ಮ ಆತ್ಮಾಭಿಮಾನವೂ ಕುಟುಕಲಿಲ್ಲವೇ? ಕನ್ನಡ-ಕರ್ನಾಟಕ ವಿರೋಧಿ ನಾಯಕನಿಗೆ ಈ ರೀತಿ ಶರಣಾಗುವುದು ಸಮಸ್ತ ಕನ್ನಡಿಗರಿಗೆ ಮಾಡುವ ದ್ರೋಹ ಎಂದು ನಿಮಗೆ ಅನಿಸಲಿಲ್ಲವೇ? ನಿಮ್ಮೊಳಗಿನ ರಾಜಕೀಯ ನಾಯಕ ಅಷ್ಟೊಂದು ದುರ್ಬಲ ಅಸಹಾಯಕನಾಗಿ ಹೋದನೇ?” ಎಂದು ಲೇವಡಿ ಮಾಡಿದ್ದಾರೆ.

“ತಮ್ಮ ರಾಜಕೀಯ ಜೀವನದುದ್ದಕ್ಕೂ ಪ್ರಾದೇಶಿಕ ಆಶೋತ್ತರಗಳನ್ನು ಪ್ರತಿಪಾದಿಸಿಕೊಂಡು ಕೇಂದ್ರದ ಅಧಿಪತ್ಯವನ್ನು ಪ್ರಶ್ನಿಸುತ್ತಾ ಬಂದ ದೇವೇಗೌಡರು ಈ ಇಳಿವಯಸ್ಸಿನಲ್ಲಿ ಈ ರೀತಿಯ ರಾಜಕೀಯ ರಾಜಿ ಮಾಡಿಕೊಳ್ಳುವಂತೆ ಮಾಡಿದ ಶಕ್ತಿ ಮತ್ತು ವ್ಯಕ್ತಿ ಯಾರೇ ಇರಬಹುದು, ಆದರೆ ದೇವೇಗೌಡರು, ಕೇವಲ ರಾಜಕೀಯ ಲಾಭಕ್ಕಾಗಿ ಮೈತ್ರಿ ಮಾಡಿಕೊಂಡು ಸಮಸ್ತ ಆರುವರೆ ಕೋಟಿ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದ್ದಾರೆ. ಈ ದ್ರೋಹಕ್ಕಾಗಿ ದೇವೇಗೌಡರು ಮತ್ತು ಅವರ ಪಕ್ಷ ಭಾರಿ ಬೆಲೆ ತೆರಲಿರುವುದು ಖಚಿತ” ಎಂದು ಭವಿಷ್ಯ ನುಡಿದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...