ವಿವಾದ ಸೃಷ್ಟಿಸಿದ ಐವನ್ ಡಿಸೋಜ ಹೇಳಿಕೆ, ಬಿಜೆಪಿಯಿಂದ ದೂರು ದಾಖಲು

Date:

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಷ್ಟ್ರಪತಿಗಳು ವಾಪಸ್ ಕರೆಸಿಕೊಳ್ಳದಿದ್ದರೆ ಬಾಂಗ್ಲಾದೇಶ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿ ರಾಜ್ಯಪಾಲರ ಕಚೇರಿಗೂ ಬರಲಿದೆ ಎಂಬ ಅರ್ಥದಲ್ಲಿ ಮಾತನಾಡಿದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

- Advertisement -

ಐವನ್ ಡಿಸೋಜ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಕೂಡಲೇ ರಾಜ್ಯ ಪೋಲಿಸ್ ಇಲಾಖೆಯ ಮಹಾನಿರ್ದೇಶಕರು, ಪರಿಷತ್ ಸದಸ್ಯರಾದ ಐವಾನ್ ಡಿಸೋಜ ಅವರ ವಿರುದ್ದ ದೂರುನ್ನು ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಂಎಲ್‌ಸಿ ಸ್ಥಾನದಿಂದ ವಜಾ ಮಾಡಿ

“ಎಂಎಲ್‌ಸಿ ಐವಾನ್ ಡಿಸೋಜ ಅವರು ಬಾಂಗ್ಲಾದ ಪರಿಸ್ಥಿತಿ ಕರ್ನಾಟಕದಲ್ಲೂ ಬರಲಿದೆ; ರಾಜಭವನಕ್ಕೆ ನುಗ್ಗಿ ತೊಂದರೆ ಮಾಡುತ್ತೇವೆ ಎಂದಿದ್ದಾರೆ. ಐವಾನ್ ಡಿಸೋಜ ಅವರಿಗೆ ಪಾಕ್ ಉಗ್ರರ ನಂಟಿದೆಯೇ ಎಂಬ ಸಂಶಯ ನನಗೆ ಬರುತ್ತಿದೆ. ಅವರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು ದೇಶದ್ರೋಹಿ ಎಂಬ ಹಣೆಪಟ್ಟಿ ಕಟ್ಟಬೇಕು. ಎಂಎಲ್‌ಸಿ ಸ್ಥಾನದಿಂದ ವಜಾ ಮಾಡಬೇಕು” ಎಂದು ಸಂಸದ ಗೋವಿಂದ ಕಾರಜೋಳ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಸುದ್ದಿಗಾರರ ಜೊತೆ ಮಾತನಾಡಿ, “ಕಾಂಗ್ರೆಸ್ಸಿನ ಹತಾಶ ಮನಸ್ಥಿತಿಗಳು ಹೇಗೆಲ್ಲ ಮಾತನಾಡುತ್ತವೆ ಎಂಬುದನ್ನು ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ‌ ಐವಾನ್‌ ಡಿಸೋಜ ಅವರು ಬಿಚ್ಚಿಟ್ಟಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರನ್ನು ಬಾಂಗ್ಲಾದೇಶದ ಮಾದರಿಯಲ್ಲಿ ಕೆಳಗಿಳಿಸುತ್ತೇವೆ ಎಂಬ ಹೇಳಿಕೆಯ ಹಿಂದಿನ ಮರ್ಮವೇನು? ರಾಜಭವನಕ್ಕೆ ಕಾಂಗ್ರೆಸ್‌ ಪುಢಾರಿಗಳನ್ನು ನುಗ್ಗಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಅರಾಜಕತೆ

ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, “ಸಿದ್ದರಾಮಯ್ಯ ಅವರ ರಾಜೀನಾಮೆ ಸನ್ನಿಹಿತವಾಗುತ್ತಿದ್ದಂತೆಯೇ ಗೌರವಾನ್ವಿತ ರಾಜ್ಯಪಾಲರ ಕಚೇರಿಯ ಮೇಲೆ ದಾಳಿ ಮಾಡುವ ಬೆದರಿಕೆಯನ್ನು ಕಾಂಗ್ರೆಸ್ ಹಾಕುತ್ತಿದೆ. ಈ ಮೂಲಕ ಕರ್ನಾಟಕದಲ್ಲಿ ಅರಾಜಕತೆ ಮತ್ತು ಅಸ್ಥಿರತೆಯನ್ನು ಉಂಟುಮಾಡಲು ಸಂಚು ಮಾಡುತ್ತಿದೆ” ಎಂದು ಆರೋಪಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ, “ಸಂವಿಧಾನದ ರಕ್ಷಕರು ಎಂದು ಹೇಳಿಕೊಳ್ಳುವ ಕಾಂಗ್ರೆಸ್ಸಿಗರು ಈಗ ಗೂಂಡಾಗಿರಿ ನಡೆಸುತ್ತಿದ್ದಾರೆ, ರಾಜ್ಯಪಾಲರ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ರಾಜ್ಯಪಾಲರನ್ನು ಬೆದರಿಸುತ್ತಿದ್ದಾರೆ. ರಾಜ್ಯವು ಬಾಂಗ್ಲಾದೇಶದಂತಹ ಪರಿಸ್ಥಿತಿಗೆ ಸಾಕ್ಷಿಯಾಗಬಹುದು ಎಂದು ಎಚ್ಚರಿಸುವ ಮೂಲಕ ಕಾಂಗ್ರೆಸ್ ನಾಯಕರು ತಮ್ಮ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ” ಎಂದು ಕಿಡಿಕಾರಿದರು.

ಐವನ್ ಡಿಸೋಜಾ ವಿವಾದಾತ್ಮಕ ಹೇಳಿಕೆ ‌ವಿರೋಧಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಐವನ್ ಡಿಸೋಜಾ ವಿರುದ್ಧ ಉಪ್ಪಾರಪೇಟೆ ಪೋಲೀಸ್ ಠಾಣೆಗೆ ಬಿಜೆಪಿ ನಿಯೋಗ ದೂರು ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...