ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಸೇರ್ಪಡೆ

Date:

ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್‌ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದರು.

- Advertisement -

ಕಾಂಗ್ರೆಸ್ ಶಾಲು ಹೊದಿಸಿ, ಪಕ್ಷದ ಬಾವುಟ ನೀಡುವ ಮೂಲಕ ‘ಕೈ’ ನಾಯಕರು ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ಪಕ್ಷದ ಸದಸ್ಯತ್ವ ಪಡೆಯುತ್ತಿರುವ ಜಗದೀಶ್ ಶೆಟ್ಟರ್ ಅವರಿಗೆ ಸ್ವಾಗತ. ಶೆಟ್ಟರ್ ಅವರಿಗೆ ನಮ್ಮ ಪಕ್ಷದ ಸಿದ್ದಾಂತ ಈಗಾಗಲೇ ಗೊತ್ತಿದೆ. ಅವುಗಳನ್ನು ಒಪ್ಪಿ ಅವರು ಕಾಂಗ್ರೆಸ್ ಸೇರುತ್ತಿದ್ದಾರೆ. ತಮ್ಮ ಸ್ವಾಭಿಮಾನ ಕಾಪಾಡಿಕೊಳ್ಳಲು ಶೆಟ್ಟರ್ ಬಿಜೆಪಿ ತೊರೆದಿದ್ದಾರೆ. ಅವರ ನಡೆ ಸಂತೋಷ ತಂದಿದೆ” ಎಂದು ಹೇಳಿದರು.

“ಶೆಟ್ಟರ್ ಅವರ ಕಾಂಗ್ರೆಸ್ ಸೇರ್ಪಡೆಯಿಂದ ಉತ್ತರ ಕರ್ನಾಟಕದಲ್ಲಿ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದೆ. ಶೆಟ್ಟರ್ ಜೊತೆಗೆ ಅಭಯ್ ಸಿಂಗ್ ಕೈ ಹಿಡಿಯುತ್ತಿದ್ದಾರೆ. ನಾನು 35 ವರ್ಷ ರಾಜ್ಯದಲ್ಲಿ ರಾಜಕಾರಣ ಮಾಡಿದ್ದೇನೆ. ಒಮ್ಮೆಯೂ ಶೆಟ್ಟರ್ ಜೊತೆಗೆ ಜಗಳವಾಡಿಕೊಂಡಿಲ್ಲ” ಎಂದರು.

“ಶೆಟ್ಟರ್ ಯಾವುದೇ ವಿವಾದ ಇಲ್ಲದೆ ಕೆಲಸ ಮಾಡಿಕೊಂಡು ಬಂದಿದ್ದಾರೆ. ಇವರು ನೇರ ಮಾತಿನ ರಾಜಕಾರಣಿ. ಜಗದೀಶ್ ಶೆಟ್ಟರ್‌ಗೆ ಧಾರವಾಡ ಭಾಗದ ಕ್ಷೇತ್ರಗಳ ಹೊಣೆ ನೀಡುತ್ತೇವೆ” ಎಂದು ತಿಳಿಸಿದರು.

ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಸೇರುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌, ಎಂ.ಬಿ ಪಾಟೀಲ್ ಉಪಸ್ಥಿತರಿದ್ದರು.

ಹುಬ್ಬಳಿ-ಧಾರವಾಡ ಸೆಂಟ್ರಲ್ ಸೀಟು ಹಂಚಿಕೆ ವಿಚಾರವಾಗಿ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದರು. ಬಳಿಕ ಬಿಜೆಪಿ ಹೈಕಮಾಂಡ್ ನಾಯಕರು ಅವರ ಮನವೊಲಿಕೆಗೆ ಅನೇಕ ಆಫರ್‌ಗಳನ್ನು ಮುಂದಿಟ್ಟು ಕಸರತ್ತು ನಡೆಸಿದ್ದರು.

ಆದರೆ, ಬಿಜೆಪಿ ನಾಯಕರ ಆಫರ್ ಧಿಕ್ಕರಿಸಿದ್ದ ಜಗದೀಶ್ ಶೆಟ್ಟರ್ ಪಕ್ಷದ ಎಲ್ಲ ಸ್ಥಾನಮಾನಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅಧಿಕೃತವಾಗಿ ‘ಕೈ’ ಹಿಡಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ಬದಲು SSR! ಪ್ರತಿಭಟನೆ, ಉಳಿದಿಬ್ಬರು ಚುನಾವಣಾ ಆಯುಕ್ತರ ತಕರಾರುಗಳಿಗೆ ಕಡೆಗೂ ಮಣಿಯಿತೇ ಗ್ಯಾನೇಶ್- ಮೋದಿ- ಶಾ ತ್ರಿವಳಿ?

ತೀವ್ರ ವಿರೋಧ, ಪ್ರತಿಭಟನೆ, ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾದ ಬಳಿಕ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...