- ಜೆಡಿಎಸ್ – ಬಿಜೆಪಿ ಮೈತ್ರಿ ವಿಚಾರಕ್ಕೆ ಮಾಜಿ ಸಿಎಂ ಶೆಟ್ಟರ್ ಪ್ರತಿಕ್ರಿಯೆ
- ‘ಬಿಜೆಪಿ-ಜೆಡಿಎಸ್ ಮೈತ್ರಿಯೊಂದಿಗೆ ಬಿಜೆಪಿಯ ಬಿ ಟೀಂ ಜೆಡಿಎಸ್ ಬಹಿರಂಗ’
ಇಬ್ಬರು ಅಸಹಾಯಕರು ಸೇರಿಕೊಂಡು ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ – ಬಿಜೆಪಿ ಮೈತ್ರಿ ವಿಚಾರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ಹಿಂದೆಯೂ ಮೈತ್ರಿ ಮಾಡಿಕೊಳ್ಳುತ್ತೇವೆ ಅಂದರು. ನಂತರ ಅದಕ್ಕೆ ಆ ವಿಚಾರಕ್ಕೆ ತಡೆಯಾಯಿತು. ಈಗ ಮತ್ತೆ ಚರ್ಚೆಗೆ ಬಂದಿದೆ” ಎಂದರು.
“ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ. ಅನುಕೂಲವಿದ್ದಾಗ ಮೈತ್ರಿ ಮಾಡಿಕೊಳ್ಳುವುದು, ಅನಾನುಕೂಲವಾದಾಗ ಮೈತ್ರಿಯಿಂದ ಹಿಂದೆ ಸರಿಯುವುದು. ಈ ರೀತಿ ಮಾಡಿದಾಗ ಜನರ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ. ಜೊತೆಗೆ ಆಯಾ ಪಕ್ಷಗಳ ಕ್ರೆಡಿಬಿಲಿಟಿ ಸಹ ಹೋಗುತ್ತದೆ” ಎಂದರು.
ಬಿಜೆಪಿಯ ಬಿ ಟೀಂ ಬಹಿರಂಗ
“ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಂಬಂಧಿಸಿದಂತೆ ಬಿಜೆಪಿಯ ಬಿ ಟೀಂ ಜೆಡಿಎಸ್ ಅಂತಾ ಅಧಿಕೃತವಾಗಿ ಗೊತ್ತಾಗುತ್ತಿದೆ. ನಾವು ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ. ವಿಧಾನಸಭೆಯಲ್ಲಿ ಸ್ವಂತ ಬಲದಿಂದ ಹೇಗೆ 135 ಸ್ಥಾನ ಗೆದ್ದಿದ್ದೇವೆ. ಅದೇ ರೀತಿ ಲೋಕಸಭೆಯಲ್ಲೂ ಕನಿಷ್ಠ 20 ಸ್ಥಾನ ಗೆದ್ದೆ ಗೆಲ್ಲುತ್ತೇವೆ” ಎಂದು ಸಚಿವ ಎಂ ಬಿ ಪಾಟೀಲ್ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.