ಅಸಹಾಯಕರು ಸೇರಿಕೊಂಡು ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ: ಜಗದೀಶ್ ಶೆಟ್ಟರ್ ಲೇವಡಿ

Date:

  • ಜೆಡಿಎಸ್ – ಬಿಜೆಪಿ ಮೈತ್ರಿ ವಿಚಾರಕ್ಕೆ ಮಾಜಿ ಸಿಎಂ ಶೆಟ್ಟರ್ ಪ್ರತಿಕ್ರಿಯೆ
  • ‘ಬಿಜೆಪಿ-ಜೆಡಿಎಸ್​ ಮೈತ್ರಿಯೊಂದಿಗೆ ಬಿಜೆಪಿಯ ಬಿ ಟೀಂ ಜೆಡಿಎಸ್​ ಬಹಿರಂಗ’

ಇಬ್ಬರು ಅಸಹಾಯಕರು ಸೇರಿಕೊಂಡು ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ – ಬಿಜೆಪಿ ಮೈತ್ರಿ ವಿಚಾರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು.

- Advertisement -

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ಹಿಂದೆಯೂ ಮೈತ್ರಿ ಮಾಡಿಕೊಳ್ಳುತ್ತೇವೆ ಅಂದರು. ನಂತರ ಅದಕ್ಕೆ ಆ ವಿಚಾರಕ್ಕೆ ತಡೆಯಾಯಿತು. ಈಗ ಮತ್ತೆ ಚರ್ಚೆಗೆ ಬಂದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ. ಅನುಕೂಲವಿದ್ದಾಗ ಮೈತ್ರಿ ಮಾಡಿಕೊಳ್ಳುವುದು, ಅನಾನುಕೂಲವಾದಾಗ ಮೈತ್ರಿಯಿಂದ ಹಿಂದೆ ಸರಿಯುವುದು. ಈ ರೀತಿ ಮಾಡಿದಾಗ ಜನರ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ. ಜೊತೆಗೆ ಆಯಾ ಪಕ್ಷಗಳ ಕ್ರೆಡಿಬಿಲಿಟಿ ಸಹ ಹೋಗುತ್ತದೆ” ಎಂದರು.

ಬಿಜೆಪಿಯ ಬಿ ಟೀಂ ಬಹಿರಂಗ

“ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಸಂಬಂಧಿಸಿದಂತೆ ಬಿಜೆಪಿಯ ಬಿ ಟೀಂ ಜೆಡಿಎಸ್​ ಅಂತಾ ಅಧಿಕೃತವಾಗಿ ಗೊತ್ತಾಗುತ್ತಿದೆ. ನಾವು ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ. ವಿಧಾನಸಭೆಯಲ್ಲಿ ಸ್ವಂತ ಬಲದಿಂದ ಹೇಗೆ 135 ಸ್ಥಾನ ಗೆದ್ದಿದ್ದೇವೆ. ಅದೇ ರೀತಿ ಲೋಕಸಭೆಯಲ್ಲೂ ಕನಿಷ್ಠ 20 ಸ್ಥಾನ ಗೆದ್ದೆ ಗೆಲ್ಲುತ್ತೇವೆ” ಎಂದು ಸಚಿವ ಎಂ ಬಿ ಪಾಟೀಲ್‌ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವೇಗೌಡರ ಕುಟುಂಬದ ರಾಜಕೀಯ ಮುಗಿಸಲು ₹600 ಕೋಟಿ ಡೀಲ್: ಎಚ್‌‌ಡಿಕೆ ಗಂಭೀರ ಆರೋಪ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಹಾಲಿ ಮುಖ್ಯಮಂತ್ರಿಗಳು...

ರಾಮಮಂದಿರ ಲೂಟಿ: ಕಳ್ಳರು, ಅಪರಾಧಿಗಳನ್ನು ಮೋದಿ, ಶಾ, ಯೋಗಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್ ಆರೋಪ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭಕ್ತರು ನೀಡಿದ ಕಾಣಿಕೆ ಹಣ ಮತ್ತು ದಾನದ...