ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ: ಗೃಹ ಸಚಿವ ಅಮಿತ್ ಶಾ ಜೊತೆ ಮಾತುಕತೆ

Date:

ಕಳೆದ ಕೆಲವು ದಿನಗಳಿಂದ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಹಿಂದಿರುಗಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದು, ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ದಿಢೀರ್‌ ಆಗಿ ಶೆಟ್ಟರ್‌ ಅವರು ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಜೊತೆಯಲ್ಲಿ ಶೆಟ್ಟರ್‌ ಅವರು ದೆಹಲಿಗೆ ಭೇಟಿ ನೀಡಿರುವುದು ಈ ಅಚ್ಚರಿಗೆ ಕಾರಣವಾಗಿದೆ.

ಈ ಬೆಳವಣಿಗೆಗೆ ಮತ್ತಷ್ಟು ಪುಷ್ಟಿ ನೀಡುವಂತೆ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕೂಡ ದೆಹಲಿಯಲ್ಲಿದ್ದಾರೆ. ಇವರೆಲ್ಲರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಅವರು ಗುರುವಾರ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬುಧವಾರವಷ್ಟೇ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ಯಾವ ಮಾಹಿತಿಯನ್ನು ನೀಡದೆ ರಹಸ್ಯವಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಜಗದೀಶ್‌ ಶೆಟ್ಟರ್‌ ಅವರು ಕೂಡ ಬುಧವಾರ ದೆಹಲಿಗೆ ತೆರಳಿದ್ದರು.

ರಾಜ್ಯ ರಾಜಕಾರಣದಲ್ಲಿ ಜಗದೀಶ್‌ ಶೆಟ್ಟರ್‌ ಅವರ ನಡೆ ಮತ್ತೆ ಸಂಚಲನ ಸೃಷ್ಟಿಸುತ್ತಾ? ಅಮಿತ್‌ ಶಾ ಅವರ ಮನವೊಲಿಕೆ ಯಶಸ್ಸು ಆಗುತ್ತಾ? ಬಿಜೆಪಿಯಿಂದ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡ್ತಾರಾ? ಶೆಟ್ಟರ್ ಸ್ಪರ್ಧೆ ಮಾಡುವುದಾದರೆ ಕ್ಷೇತ್ರ ಯಾವುದು? ಅಥವಾ ರಾಜ್ಯಪಾಲರಾಗಿ ನೇಮಕ ಮಾಡ್ತಾರಾ? ಎಂಬ ಪ್ರಶ್ನೆಗಳಿಗೆ ಸಂಜೆ ತೆರೆಬೀಳುವ ಸಾಧ್ಯತೆ ಇದೆ. ಆದರೆ ಈವರೆಗೂ ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿಗೆ ಮರುಳುವ ಬಗ್ಗೆ ಎಲ್ಲೂ ತುಟಿ ಬಿಚ್ಚಿಲ್ಲ.

ಡಿಸಿಎಂ ಡಿಕೆ ಶಿವಕುಮಾರ್‌ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಹತಾಶಗೊಂಡಿರುವ ಬಿಜೆಪಿಯ ಕೆಲವು ನಾಯಕರು ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಅವರನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಯತ್ನಿಸುತ್ತಿದ್ದಾರೆ” ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೈಲು ಸೇರಿದ ಬಜರಂಗದಳ ಕಾರ್ಯಕರ್ತರನ್ನು ಭೇಟಿಯಾದ ಶೋಭಾ ಕರಂದ್ಲಾಜೆ

ಲವ್ ಜಿಹಾದ್​ ಪ್ರಕರಣದಲ್ಲಿ ​ಹಲ್ಲೆ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಕಾರಾಗೃಹ ಸೇರಿರುವ...

ಕರಂದ್ಲಾಜೆ ವಿರುದ್ದ ಷಡ್ಯಂತ್ರ ನಡೀತಿದೆ ಎಂದ ಬಿಎಸ್‌ವೈ; ಬಾಸ್ ಈಸ್ ಆಲ್ವೇಸ್ ರೈಟ್ ಎಂದ ಸಿ ಟಿ ರವಿ

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಕೇಳಿಲ್ಲ. ಈ ಬಗ್ಗೆ ಈಗಾಗಲೇ...

ಪರಿಹಾರಕ್ಕೆ ಹಣವಿಲ್ಲ, ಜಾಹೀರಾತಿಗೆ ಹಣವಿದೆ ಎಂದು ಸರ್ಕಾರ ಕುಟುಕಿದ ಕುಮಾರಸ್ವಾಮಿ

"ರಾಜ್ಯದ ರೈತರು ನಷ್ಟದಲ್ಲಿದ್ದಾರೆ, ಪರಿಹಾರ ಕೊಡೋಕೆ ಸರ್ಕಾರದ ಬಳಿ ಹಣವಿಲ್ಲ. ಆದ್ರೆ,...