ಶೆಟ್ಟರ್‌ ರಾಜೀನಾಮೆಯಿಂದ ಬಿಜೆಪಿಗೆ ‘ಡ್ಯಾಮೇಜ್‌’ ಆಗಲಿದೆ: ಸಿಎಂ ಬಸವರಾಜ ಬೊಮ್ಮಾಯಿ

Date:

  • ಬೊಮ್ಮಾಯಿ ಜಗದೀಶ್ ಶೆಟ್ಟರ್ ರಾಜೀನಾಮೆ ನೋವು ತಂದಿದೆ: ಸಿಎಂ
  • ‘ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಅವಕಾಶ ಕೊಡಬೇಕಾಗಿತ್ತು’

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿರುವುದು ನೋವು ಮತ್ತು ಕಸಿವಿಸಿ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರು ಪಕ್ಷ ತೊರೆದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಕೆ ಎಸ್ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶೆಟ್ಟರ್ ಅವರಿಗೆ ದೆಹಲಿ ಮಟ್ಟದಲ್ಲಿ ಇದಕ್ಕಿಂತ ದೊಡ್ಡ ಹುದ್ದೆ ಕೊಡಲಾಗುವುದು ಎಂದು ಜೆ ಪಿ ನಡ್ಡಾ, ಅಮಿತ್ ಶಾ ಅವರು ತಿಳಿಸಿದ್ದರು” ಎಂದು ಹೇಳಿದ್ದಾರೆ.

“ನಿನ್ನೆಯೂ ಚರ್ಚೆ ಮಾಡಿ, ಅವರು ಸೂಚಿಸಿದವರಿಗೆ ಟಿಕೆಟ್ ಕೊಡಲಾಗುವುದು ಎಂದು ತಿಳಿಸಲಾಯಿತು. ಜಗದೀಶ್ ಶೆಟ್ಟರ್ ಅವರು ಮುಂದುವರಿಸಿಕೊಂಡು ಹೋಗಿದ್ದರೆ ಉತ್ತಮವಾಗಿತ್ತು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್‌ ಶೆಟ್ಟರ್

“ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಅವಕಾಶ ಕೊಡಬೇಕಾಗಿತ್ತು. ಅದೇ ಕಾರಣಕ್ಕೆ ಜಗದೀಶ್ ಶೆಟ್ಟರ್ ಟಿಕೆಟ್ ತಪ್ಪಿದೆ. ಅವರ ಎಲ್ಲ ಪ್ರಶ್ನೆಗೆ ನಾನು ಉತ್ತರ ನೀಡುವುದಿಲ್ಲ” ಎಂದು ಹೇಳಿದ್ದಾರೆ.

“ಹೊಸ ಬೆಳವಣಿಗೆಗಾಗಿ ಈ ಪ್ರಯತ್ನ ಮಾಡಲಾಗಿದೆ. ಶೆಟ್ಟರ್ ರಾಜಿನಾಮೆಯಿಂದ ಬಿಜೆಪಿಗೆ ಸ್ವಲ್ಪ ಹಾನಿಯಾಗಲಿದೆ. ಡ್ಯಾಮೇಜ್ ಕಂಟ್ರೋಲ್‌ಗೆ ಎಲ್ಲ ಪ್ರಯತ್ನ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

“ಯಡಿಯೂರಪ್ಪ ನೇತೃತ್ವದಲ್ಲಿ ಮೊದಲನೇ ಪೀಳಿಗೆ ಬೆಳದು ನಿಂತಿದೆ. ಎರಡನೆ ಪೀಳಿಗೆಯಲ್ಲಿ ಲಿಂಗಾಯತ ಸಮುದಾಯದ ಸಿ ಸಿ ಪಾಟೀಲ್, ನಿರಾಣಿ, ಸೋಮಣ್ಣ ಬೆಳೆದು ನಿಂತಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಅತೀ ಹೆಚ್ಚು ಸ್ಥಾನ, ಅತೀ ಹೆಚ್ಚು ಮಂತ್ರಿ ಸ್ಥಾನ, ನೀಡಿದ್ದು ಬಿಜೆಪಿ” ಎಂದಿದ್ದಾರೆ.

“ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಇಬ್ಬರಿದ್ದಾರೆ. ಜೆಡಿಎಸ್‌ನಲ್ಲಿ ಕುಮಾರಸ್ವಾಮಿ ಹೆಸರು ಇದೆ. ನಮ್ಮ ಚುನಾವಣೆ ತಂತ್ರ ನಾವು ರೂಪಿಸುತ್ತೇವೆ. ಪಕ್ಷ ಗೆಲ್ಲಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ಬದಲು SSR! ಪ್ರತಿಭಟನೆ, ಉಳಿದಿಬ್ಬರು ಚುನಾವಣಾ ಆಯುಕ್ತರ ತಕರಾರುಗಳಿಗೆ ಕಡೆಗೂ ಮಣಿಯಿತೇ ಗ್ಯಾನೇಶ್- ಮೋದಿ- ಶಾ ತ್ರಿವಳಿ?

ತೀವ್ರ ವಿರೋಧ, ಪ್ರತಿಭಟನೆ, ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾದ ಬಳಿಕ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...