ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಕಡೆ ಮುಖ ಮಾಡಿರುವುದು ಅಕ್ಷಮ್ಯ ಅಪರಾಧ : ಯಡಿಯೂರಪ್ಪ

Date:

  • ಶೆಟ್ಟರ್ – ಸವದಿ ಬಂಡವಾಳ ಬಯಲು ಮಾಡುವುದಾಗಿ ಬಿಎಸ್‌ವೈ ಹೇಳಿಕೆ
  • ಬಿಜೆಪಿಯ ಪಕ್ಷಾಂತರ ಬೆಳವಣಿಗೆಗೆ ಕಾರ್ಯಕರ್ತರು ವಿಚಲಿತರಾಗದಂತೆ ಕರೆ

ಜಗದೀಶ್‌ ಶೆಟ್ಟರ್‌ ಅವರಿಗೆ ನಾವು ಏನು ಅನ್ಯಾಯ ಮಾಡಿದ್ದೇವೆ? ಶೆಟ್ಟರ್ ಕಾಂಗ್ರೆಸ್‌ ಕಡೆ ಮುಖ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹೇಳಿದರು.

- Advertisement -

ಜಗದೀಶ್‌ ಶೆಟ್ಟರ್‌ ಅವರು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಿ ಹೊರಬರುತ್ತಿದ್ದಂತೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ದಿಢೀರ್‌ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಶೆಟ್ಟರ್‌ ಪಕ್ಷ ತೊರೆಯುವುದರಿಂದ ಯಾವುದೇ ಡ್ಯಾಮೇಜ್‌ ನಮ್ಮ ಪಕ್ಷಕ್ಕೆ ಆಗುವುದಿಲ್ಲ. ನಮ್ಮ ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಜನಸಂಘದ ಕಾಲದಿಂದ ಶೆಟ್ಟರ್ ಬಿಜೆಪಿಯೊಂದಿಗೆ ಇದ್ದರು. ಶೆಟ್ಟರ್‌ ಅವರಿಗೆ ಪಕ್ಷ ಎಲ್ಲ ಸ್ಥಾನಮಾನ ನೀಡಿತ್ತು. ನಾನೇ ಮುಂದೆ ನಿಂತು ಅವರನ್ನು ಮುಖ್ಯಮಂತ್ರಿ ಮಾಡಿದ್ದೆ. ಶೆಟ್ಟರ್ ಅವರು ಆತುರದಿಂದ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರ ಈ ಬೆಳವಣಿಗೆ ಅವರೇ ನಂಬಿರುವ ಸಿದ್ದಾಂತಕ್ಕೆ ವಿರುದ್ಧವಾಗಿದೆ. ನಮಗೆ ಸ್ಥಾನಮಾನ ಸಿಗಲಿ ಬಿಡಲಿ, ದೇಶಕ್ಕಾಗಿ ಕೆಲಸ ಮಾಡುವುದು ನಮ್ಮ ಕರ್ತವ್ಯ” ಎಂದು ಹೇಳಿದರು.

“ಜಗದೀಶ್ ಶೆಟ್ಟರ್ ಅವರ ಮನವೊಲಿಸಲು ನಮ್ಮ ನಾಯಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಪ್ರಲ್ಹಾದ್ ಜೋಶಿ ಅವರ ಹುಬ್ಬಳ್ಳಿಗೆ ತೆರಳಿ, ಕೆಲ ಭರವಸೆ ನೀಡಿದ್ದರು. ಆದರೆ, ಶೆಟ್ಟರ್ ಅವರು ನಮ್ಮ ನಾಯಕರ ಮಾತಿಗೆ ಬೆಲೆ ಕೊಡಲಿಲ್ಲ. ನಮಗೆ ದ್ರೋಹ ಬಗೆದು ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ” ಎಂದು ಕಿಡಿ ಕಾರಿದರು.

“ಜಗದೀಶ್ ಶೆಟ್ಟರ್ ಅವರನ್ನು ರಾಜ್ಯಾದ್ಯಕ್ಷ, ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿ ಮಾಡಿದ್ದೆವು. ಆದರೂ ಅವರು ಕಾಂಗ್ರೆಸ್‌ ಜೊತಗೆ ಕೈ ಜೋಡಿಸಲು ಹೊರಟಿರುವುದು ಅಕ್ಷಮ್ಯ ಅಪರಾಧ ಇದನ್ನು ಜನ ಕ್ಷಮಿಸಲಾರರು. ಬರುವ ದಿನಗಳಲ್ಲಿ ಜಗದೀಶ್‌ ಶೆಟ್ಟರ್‌ ಅವರ ಬಣ್ಣ ಬಯಲು ಮಾಡುವೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಶೆಟ್ಟರ್‌ ರಾಜೀನಾಮೆಯಿಂದ ಬಿಜೆಪಿಗೆ ‘ಡ್ಯಾಮೇಜ್‌’ ಆಗಲಿದೆ: ಸಿಎಂ ಬಸವರಾಜ ಬೊಮ್ಮಾಯಿ

“ನಾವು ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಯತ್ನ. ಹೊಸತನಕ್ಕೆ ನಾವು ದಾರಿ ಮಾಡಿಕೊಡಬೇಕು. ಬಿಜೆಪಿ ನಿಮಗೆ ಎಲ್ಲವೂ ಕೊಟ್ಟಿದೆ. ಆ ಋಣ ತೀರಿಸಬೇಕಿದೆ. ಅದನ್ನು ಶೆಟ್ಟರ್‌ ಅರ್ಥ ಮಾಡಿಕೊಳ್ಳಲಿಲ್ಲ. ನಾನು ಆ ಭಾಗಕ್ಕೆ ಹೋಗಿ ವಾಸ್ತವ ಅರ್ಥ ಮಾಡಿಸುತ್ತೇನೆ. ಪಕ್ಷ ಬಿಟ್ಟು ಹೋದವರ ಬಂಡಾವಳ ಬಯಲು ಮಾಡುತ್ತೇನೆ. ರಾಜಕೀಯ ಬೆಳವಣಿಗೆಯಿಂದ ಕಾರ್ಯಕರ್ತರು ವಿಚಲಿತರಾಗಬೇಡಿ, ಒಟ್ಟಾಗಿ ಕೆಲಸ ಮಾಡಿ” ಎಂದು ಕರೆ ನೀಡಿದರು.

ಲಕ್ಷ್ಮಣ ಸವದಿ ಅವರ ಕುರಿತು ಮಾತನಾಡಿ, “ಚುನಾವಣೆಯಲ್ಲಿ ಸೋತ ಸವದಿಗೆ ಉಪ ಮುಖ್ಯಮಂತ್ರಿ ಮಾಡಿದ್ದೆವು. ಅವರನ್ನು ಎಂಎಲ್‌ಸಿ ಮಾಡಿದ್ದೆವು. ಅವರ ನಿರ್ಧಾರ ದುರದೃಷ್ಟಕರ. ಅದನ್ನು ತಿರಸ್ಕರಿಸಿ ಕಾಂಗ್ರೆಸ್‌ಗೆ ಹೋಗಿದ್ದಾರೆ. ನಮ್ಮ ಕೆಲ ನಾಯಕರು ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ಬದಲು SSR! ಪ್ರತಿಭಟನೆ, ಉಳಿದಿಬ್ಬರು ಚುನಾವಣಾ ಆಯುಕ್ತರ ತಕರಾರುಗಳಿಗೆ ಕಡೆಗೂ ಮಣಿಯಿತೇ ಗ್ಯಾನೇಶ್- ಮೋದಿ- ಶಾ ತ್ರಿವಳಿ?

ತೀವ್ರ ವಿರೋಧ, ಪ್ರತಿಭಟನೆ, ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾದ ಬಳಿಕ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...