ಜೈ ಬಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನ | ಆರ್‌ಎಸ್‌ಎಸ್‌ ಸಿದ್ಧಾಂತ ಹಿಮ್ಮೆಟ್ಟಿಸೋಣ: ಸಿಎಂ ಸಿದ್ದರಾಮಯ್ಯ ಕರೆ

Date:

ಸಂವಿಧಾನ ದ್ವೇಷಿಯಾಗಿರುವ ಆರ್‌ಎಸ್‌ಎಸ್‌ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

- Advertisement -

ಬೆಳಗಾವಿಯಲ್ಲಿ ಮಂಗಳವಾರ ನಡೆದ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ಈ ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ. ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ. ಬಿಜೆಪಿ ಪರಿವಾರ ಗಾಂಧಿ, ಅಂಬೇಡ್ಕರ್‌ರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ” ಎಂದು ಹೇಳಿದರು.‌

“ನಾವು ಸಂವಿಧಾನ ರಕ್ಷಿಸಿದರೆ ಇದೇ ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ. ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು. ಗಾಂಧಿ ಅಂಬೇಡ್ಕರ್ ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್ ನಲ್ಲಿ 52 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...