ಪ್ರಸ್ತುತ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಸ್ಸಾಂನ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್, ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಮುನ್ನಡೆಯನ್ನು ಸಾಧಿಸಿದ್ದಾರೆ.
ಭಾರತೀಯ ಚುನಾವಣಾ ಆಯೋಗದ ವೆಬ್‌ಸೈಟ್‌ನ ಪ್ರಕಾರ, ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ 1,29,938ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
Amritpal Singh laughing in corner. pic.twitter.com/o4boLwZaEs
— ಸಕ್ರವರ್ತಿ ಚೂಲಿಬೆಲೆ (@heng_pung_lee) June 4, 2024
ಅಮೃತಪಾಲ್ ಸಿಂಗ್ ಅವರ ನಾಮಪತ್ರ ತಿರಸ್ಕಾರ ಆಗಬಹುದು ಎಂಬ ಆತಂಕದ ನಡುವೆಯೇ ಭಾರತೀಯ ಚುನಾವಣಾ ಆಯೋಗವು ಅವರ ನಾಮಪತ್ರವನ್ನು ಸ್ವೀಕರಿಸಿತ್ತು. ಕಾಂಗ್ರೆಸ್‌ನ ಕುಲ್ಬೀರ್ ಸಿಂಗ್ ಝಿರಾ ವಿರುದ್ಧ ಅಮೃತಪಾಲ್ ಸಿಂಗ್ ಸ್ಪರ್ಧಿಸಿದ್ದಾರೆ.
ಇದನ್ನು ಓದಿದ್ದೀರಾ? ಪಂಜಾಬ್| ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಲೋಕಸಭೆ ಚುನಾವಣೆಗೆ ಸ್ಪರ್ಧೆ
ವಾರಿಸ್ ಪಂಜಾಬ್ ಡಿ ಸಂಘಟನೆಯ ಮುಖ್ಯಸ್ಥ ಅಮೃತಪಾಲ್ ಸಿಂಗ್‌ನನ್ನು ಕಳೆದ ವರ್ಷ ಏಪ್ರಿಲ್‌ನಲ್ಲಿ ಬಂಧಿಸಲಾಗಿದ್ದು ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹೇರಲಾಗಿದೆ. ಅಮೃತಪಾಲ್ ಅವರು ಪ್ರಸ್ತುತ ತಮ್ಮ ಒಂಬತ್ತು ಸಹಚರರೊಂದಿಗೆ ದಿಬ್ರುಗಢ ಜೈಲಿನಲ್ಲಿದ್ದಾರೆ.
ಖಲಿಸ್ತಾನಿ ಭಯೋತ್ಪಾದಕ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆಯನ್ನು ಹತ್ಯೆಗೈದ ಬಳಿಕ ಅಮೃತಪಾಲ್ ಸಿಂಗ್ ಕಳೆದ ವರ್ಷ ಮಾರ್ಚ್‌ನಲ್ಲಿ ಜಲಂಧರ್ ಜಿಲ್ಲೆಯಲ್ಲಿ ವಾಹನಗಳನ್ನು ಬದಲಿಸಿ, ರೂಪ ಬದಲಿಸಿ ಪೊಲೀಸರಿಂದ ತಪ್ಪಿಸಿಕೊಂಡಿದ್ದ. ಅದಾದ ಬಳಿಕ ಕಳೆದ ವರ್ಷ ಏಪ್ರಿಲ್ 23 ರಂದು ಮೊಗಾದ ರೋದ್ ಗ್ರಾಮದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಶೋಧ ಕಾರ್ಯಾಚರಣೆ ನಡೆಸಿ ಬಳಿಕ ಬಂಧಿಸಲಾಗಿದೆ.