ಪಂಜಾಬ್‌: ಜೈಲಿನಲ್ಲಿರುವ ಖಲಿಸ್ತಾನಿ ಹೋರಾಟಗಾರ ಅಮೃತಪಾಲ್ ಸಿಂಗ್ ಮುನ್ನಡೆ

Date:

ಪ್ರಸ್ತುತ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಸ್ಸಾಂನ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್, ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಮುನ್ನಡೆಯನ್ನು ಸಾಧಿಸಿದ್ದಾರೆ.

- Advertisement -

ಭಾರತೀಯ ಚುನಾವಣಾ ಆಯೋಗದ ವೆಬ್‌ಸೈಟ್‌ನ ಪ್ರಕಾರ, ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ 1,29,938ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅಮೃತಪಾಲ್ ಸಿಂಗ್ ಅವರ ನಾಮಪತ್ರ ತಿರಸ್ಕಾರ ಆಗಬಹುದು ಎಂಬ ಆತಂಕದ ನಡುವೆಯೇ ಭಾರತೀಯ ಚುನಾವಣಾ ಆಯೋಗವು ಅವರ ನಾಮಪತ್ರವನ್ನು ಸ್ವೀಕರಿಸಿತ್ತು. ಕಾಂಗ್ರೆಸ್‌ನ ಕುಲ್ಬೀರ್ ಸಿಂಗ್ ಝಿರಾ ವಿರುದ್ಧ ಅಮೃತಪಾಲ್ ಸಿಂಗ್ ಸ್ಪರ್ಧಿಸಿದ್ದಾರೆ.

ಇದನ್ನು ಓದಿದ್ದೀರಾ?  ಪಂಜಾಬ್‌| ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಲೋಕಸಭೆ ಚುನಾವಣೆಗೆ ಸ್ಪರ್ಧೆ

ವಾರಿಸ್ ಪಂಜಾಬ್ ಡಿ ಸಂಘಟನೆಯ ಮುಖ್ಯಸ್ಥ ಅಮೃತಪಾಲ್ ಸಿಂಗ್‌ನನ್ನು ಕಳೆದ ವರ್ಷ ಏಪ್ರಿಲ್‌ನಲ್ಲಿ ಬಂಧಿಸಲಾಗಿದ್ದು ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹೇರಲಾಗಿದೆ. ಅಮೃತಪಾಲ್ ಅವರು ಪ್ರಸ್ತುತ ತಮ್ಮ ಒಂಬತ್ತು ಸಹಚರರೊಂದಿಗೆ ದಿಬ್ರುಗಢ ಜೈಲಿನಲ್ಲಿದ್ದಾರೆ.

ಖಲಿಸ್ತಾನಿ ಭಯೋತ್ಪಾದಕ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆಯನ್ನು ಹತ್ಯೆಗೈದ ಬಳಿಕ ಅಮೃತಪಾಲ್ ಸಿಂಗ್‌ ಕಳೆದ ವರ್ಷ ಮಾರ್ಚ್‌ನಲ್ಲಿ ಜಲಂಧರ್ ಜಿಲ್ಲೆಯಲ್ಲಿ ವಾಹನಗಳನ್ನು ಬದಲಿಸಿ, ರೂಪ ಬದಲಿಸಿ ಪೊಲೀಸರಿಂದ ತಪ್ಪಿಸಿಕೊಂಡಿದ್ದ. ಅದಾದ ಬಳಿಕ ಕಳೆದ ವರ್ಷ ಏಪ್ರಿಲ್ 23 ರಂದು ಮೊಗಾದ ರೋದ್ ಗ್ರಾಮದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಶೋಧ ಕಾರ್ಯಾಚರಣೆ ನಡೆಸಿ ಬಳಿಕ ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ದೇಶದಲ್ಲಿ ಅಲ್ಲದೆ ಪಾಕಿಸ್ತಾನದಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕೇ?; ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

ನಮ್ಮ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸದಿದ್ದರೆ ಪಾಕಿಸ್ತಾನದಲ್ಲಿ ಹಾರಿಸಬೇಕೇ? ಭಾರತದ ತ್ರಿವರ್ಣ...

CEC ರಾಜೀನಾಮೆಗೆ ಆಗ್ರಹ; ಅ.23ರಂದು ಸಂಯುಕ್ತ ಕಿಸಾನ್‌ ಮೋರ್ಚಾದಿಂದ ದೆಹಲಿ ಚಲೋ

SIR ಪ್ರಕ್ರಿಯೆಯನ್ನು ವಿರೋಧಿಸಿ, CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್...

20 ತಿಂಗಳಲ್ಲಿ 20 ಮುಖ್ಯ ಚುನಾವಣಾಧಿಕಾರಿಗಳ ವರ್ಗಾವಣೆ: ಗ್ಯಾನೇಶ್ ಕುಮಾರ್ ದಾಖಲೆ!

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಆಡಳಿತದಲ್ಲಿ‌ ಚುನಾವಣಾ ಆಯೋಗವು ಭಾರೀ...