ಜೈಪುರ ಮಸೀದಿಯಲ್ಲಿ ದಾಂಧಲೆ: ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು

Date:

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧ ರಾಜಸ್ಥಾನದ ಜೈಪುರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ, ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಮಸೀದಿ ಆವರಣಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಪರಿಣಾಮ, ಸ್ಥಳದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದೆ. ಕೋಮುದ್ವೇಷ ಪ್ರಚೋದನೆಗೆ ಯತ್ನಿಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಸೇರಿ, ಹಲವಾರು ಬಿಜೆಪಿಗರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಜೈಪುರದಲ್ಲಿ ಶನಿವಾರ ರಾತ್ರಿ, ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ನೇತೃತ್ವದಲ್ಲಿ ಬಿಜೆಪಿ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೇಸರಿ ಧ್ವಜಗಳು ಮತ್ತು ಪಂಜುಗಳನ್ನು ಹಿಡಿದು ‘ಜೈ ಶ್ರೀ ರಾಮ್’ ಮತ್ತು ‘ಪಾಕಿಸ್ತಾನ್ ಮುರ್ದಾಬಾದ್’ ಸೇರಿದಂತೆ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವ ವೇಳೆ, ಜಾಮಾ ಮಸೀದಿ ಆವರಣಕ್ಕೆ ನುಗ್ಗಿ ಶಾಸಕ ಆಚಾರ್ಯ ಮತ್ತು ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮಸೀದಿ ಆವರಣದಲ್ಲಿ ಪ್ರಕ್ಷುಬ್ದತೆ ಉಂಟಾದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕರಾದ ರಫೀಕ್ ಖಾನ್ ಮತ್ತು ಅಮೀನ್ ಕಾಗ್ಜಿ ಹಾಗೂ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಅವರು ಸ್ಥಳಕ್ಕೆ ತೆರಳಿ, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಜಾಮಾ ಮಸೀದಿ ಸಮಿತಿ ನೀಡಿದ ದೂರಿನ ಮೇರೆಗೆ ಬಿಜೆಪಿ ಶಾಸಕ ಆಚಾರ್ಯ ಮತ್ತು ಇತರರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

“ಬಿಜೆಪಿ ಶಾಸಕರು ಬೂಟುಗಳನ್ನು ಧರಿಸಿ ಮಸೀದಿಗೆ ಪ್ರವೇಶಿಸಿದರು. ಮೆಟ್ಟಿಲುಗಳ ಮೇಲೆ ಪೋಸ್ಟರ್ ಅಂಟಿಸಿದರು. ಭಯೋತ್ಪಾದಕರನ್ನು ಬೆಂಬಲಿಸುವವರನ್ನು ‘ಒಬ್ಬೊಬ್ಬರಾಗಿ ಸ್ವರ್ಗದ ಬಾಗಿಲಿಗೆ ಕಳಿಸಲಾಗುವುದು’ ಎಂದು ಘೋಷಣೆಗಳನ್ನು ಕೂಗಿದರು. ಅಲ್ಲದೆ, ಆಚಾರ್ಯ ಮತ್ತು ಅವರ ಬೆಂಬಲಿಗರು ಮುಸ್ಲಿಮರನ್ನು ಕೊಲ್ಲುವುದಾಗಿಯೂ ಬೆದರಿಕೆ ಹಾಕಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ವರದಿ ಓದಿದ್ದೀರಾ?: ಸರ್ವಪಕ್ಷಗಳ ಸಭೆಗೆ ಪ್ರಧಾನಿ ಮೋದಿ ಗೈರು: ದೇಶಕ್ಕಿಂತ ಚುನಾವಣೆಯೇ ಮುಖ್ಯವಾಯಿತಾ?

ಬಿಜೆಪಿ ಶಾಸಕ ಮತ್ತು ಬೆಂಬಲಿಗರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 298 (ಪೂಜಾ ಸ್ಥಳಕ್ಕೆ ಹಾನಿ ಅಥವಾ ಅಪವಿತ್ರಗೊಳಿಸುವುದು), 300 (ಧಾರ್ಮಿಕ ಸಭೆಯನ್ನು ಕದಡುವುದು), 302 (ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶದಿಂದ ಪದ ಬಳಕೆ) ಮತ್ತು 351(3) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಕರಣದ ತನಿಖೆಯನ್ನು ಸಿಐಡಿ-ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ನಗರದಲ್ಲಿ ಕೋಮು ಉದ್ವಿಗ್ನತೆ ಹರಡುತ್ತಿದ್ದಂತೆ, ಶಾಸಕ ಆಚಾರ್ಯ ಅವರು ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಜಾಮಾ ಮಸೀದಿಯಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಳಿಕ ಜಾಮಾ ಮಸೀದಿ ಸಮಿತಿ ಮತ್ತು ಮುಸ್ಲಿಂ ಸಮುದಾಯದ ಹಿರಿಯ ನಾಯಕರು ಪತ್ರಿಕಾಗೋಷ್ಠಿ ನಡೆಸಿದ್ದು, “ದಾಂಧಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವವರೆಗೆ ಕಾಯುತ್ತೇವೆ. ಮಸೀದಿಗೆ ನುಗ್ಗಿ ದಾಂಧಲೆ ನಡೆಸಿದ ಬಿಜೆಪಿಗರು ಮತ್ತು ಶಾಸಕ ಆಚಾರ್ಯ ಅವರನ್ನು ತಕ್ಷಣ ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...