ಬಡವರು ಕಾಂಗ್ರೆಸ್‌ಗೆ ಮತ ಚಲಾಯಿಸಿದ ಕಾರಣಕ್ಕೆ ಕೇಂದ್ರ ಅಕ್ಕಿ ಕೊಡುತ್ತಿಲ್ಲ: ಜೈರಾಮ್‌ ರಮೇಶ್

Date:

Advertisements

ಬಡವರು ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಕಾಂಗ್ರೆಸ್‌ಗೆ ಮತ ಚಲಾಯಿಸಿದ ಏಕೈಕ ಕಾರಣಕ್ಕೆ ಕರ್ನಾಟಕಕ್ಕೆ ಅಕ್ಕಿ ಕೊಡದೇ ಶಿಕ್ಷೆ ನೀಡುತ್ತಿರುವುದು ರಾಜ್ಯದ ದೌರ್ಭಾಗ್ಯವಲ್ಲದೆ ಮತ್ತೇನಲ್ಲ ಎಂದು ರಾಜ್ಯಸಭಾ ಸದಸ್ಯ ಜೈರಾಮ್‌ ರಮೇಶ್ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆದರಿಕೆಯಂತೆ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿಯನ್ನು ನೀಡಲು ನಿರಾಕರಿಸಲಾಗಿದೆ” ಎಂದು ದೂರಿದ್ದಾರೆ.

“ಜನವರಿ 1, 2023 ರಿಂದ ಮೇ 24, 2023 ರವರೆಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕವೊಂದರಿಂದಲೇ ಎಲ್ಲ ರಾಜ್ಯ ಸರ್ಕಾರಗಳು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ದೇಶೀಯ) ಅಡಿಯಲ್ಲಿ ಪ್ರತಿ ಕ್ವಿಂಟಲ್‌ಗೆ 3,400 ದರದಲ್ಲಿ ಸಂಗ್ರಹಿಸಿದ ಶೇ 95 ಕ್ಕಿಂತ ಹೆಚ್ಚು ಅಕ್ಕಿಯನ್ನು ತೆಗೆದುಕೊಂಡಿದೆ. ಬಹುಶಃ ಇದು ಮೋದಿಜೀಯವರ ಆಶೀರ್ವಾದದಿಂದಲೇ ಆಗಿರಬೇಕು” ಎಂದು ಹರಿಹಾಯ್ದಿದ್ದಾರೆ.

Advertisements

“ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ. ಜತೆಗೆ, ಪ್ರತಿಯೊಬ್ಬರಿಗೂ ತಲಾ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡಲು ಅನ್ನಭಾಗ್ಯ 2.0 ಖಾತ್ರಿಯನ್ನು ಶೀಘ್ರವಾಗಿ ಜಾರಿಗೆ ತರಲಾಗುತ್ತದೆ” ಎಂದು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X