ನಮ್ಮ ಅಭ್ಯರ್ಥಿಗಳಿಗೆ ಬಿಜೆಪಿಗರು ಬೆದರಿಕೆವೊಡ್ಡಿ, ನಾಮಪತ್ರ ಹಿಂಪಡೆಯುವಂತೆ ಮಾಡಿದ್ದಾರೆ: ಪ್ರಶಾಂತ್ ಕಿಶೋರ್

Date:

ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಮುಗಿದಿವೆ. ಈ ನಡುವೆ, ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರುವ ‘ಜನ ಸುರಾಜ್ ಪಕ್ಷ’ದ (ಜೆಎಸ್‌ಪಿ) ನಾಯಕ, “ಬಿಜೆಪಿ ನಾಯಕರು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬೆದರಿಕೆ ಹಾಕಿ, ನಾಮಪತ್ರ ಹಿಂಪಡೆಯುವಂತೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

- Advertisement -

ಮಂಗಳವಾರ ಪಾಟ್ನಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಈ ಬಾರಿ ಬಿಹಾರದಲ್ಲಿ ವಿಭಿನ್ನ ಆಟ ನಡೆಯುತ್ತಿದೆ. ಬಿಜೆಪಿ ಮತ್ತು ಜೆಡಿಯು ಜನ್ ಸುರಾಜ್ ಅಭ್ಯರ್ಥಿಗಳನ್ನು ನಿಗ್ರಹಿಸುತ್ತಿವೆ. ಆಡಳಿತ ಪಕ್ಷವು ಈಗ ಮಹಾಘಟಬಂಧನ್ ಬದಲು ಜನ್ ಸುರಾಜ್ ಬಗ್ಗೆ ಹೆಚ್ಚು ಭಯಪಡುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಮ್ಮ ಮೂವರು ಅಭ್ಯರ್ಥಿಗಳ ನಾಮಪತ್ರವನ್ನು ಬಲವಂತವಾಗಿ ಹಿಂತೆಗೆದುಕೊಳ್ಳುವಂತೆ ಮಾಡಲಾಗಿದೆ. ಬಿಜೆಪಿ ಮತ್ತು ಜೆಡಿಯು ನಮ್ಮ ಅಭ್ಯರ್ಥಿಗಳನ್ನು ಬಹಿರಂಗವಾಗಿ ಗುರಿಯಾಗಿಸಿಕೊಂಡಿವೆ. ನಾವು ಈ ವಿಷಯವನ್ನು ಚುನಾವಣಾ ಆಯೋಗಕ್ಕೆ ಕೊಂಡೊಯ್ಯುತ್ತೇವೆ ಎಂದು ಹೇಳಿದ್ದಾರೆ.

“ದಾನಾಪುರದ ಮುತೂರ್ ಶಾ, ಬ್ರಹ್ಮಪುರದ ಸತ್ಯ ಪ್ರಕಾಶ್ ತಿವಾರಿ ಮತ್ತು ಗೋಪಾಲಗಂಜ್‌ನ ಶಶಿ ಶೇಖರ್ ಸಿಂಗ್ ಎಲ್ಲರೂ ಜನ್ ಸುರಾಜ್ ಅಭ್ಯರ್ಥಿಗಳಾಗಿದ್ದರು. ಆದರೆ, ಅವರನ್ನು ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಒತ್ತಾಯಿಸಲಾಗಿದೆ” ಎಂದು ಆರೋಪಿಸಿದ್ದಾರೆ.

“ನಮ್ಮ ಅಭ್ಯರ್ಥಿಗಳು ಸ್ಪರ್ಧಿಸಿರುವ ಸ್ಥಾನಗಳಲ್ಲಿ ಬಿಜೆಪಿ-ಜೆಡಿಯು ನಾಯಕರು ಆತಂಕಗೊಂಡಿದ್ದಾರೆ. ಜನ್ ಸುರಾಜ್‌ನ ಉದ್ದೇಶ ಅಧಿಕಾರವಲ್ಲ, ಆದರೆ ವ್ಯವಸ್ಥೆಯ ಬದಲಾವಣೆ ಮತ್ತು ಇದು ಸಾಂಪ್ರದಾಯಿಕ ಪಕ್ಷಗಳನ್ನು ಆತಂಕಕ್ಕೀಡು ಮಾಡುತ್ತಿದೆ” ಎಂದು ಪ್ರಶಾಂತ್ ಕಿಶೋರ್ ಹೇಳಿದರು.

“ನಮ್ಮ ಅಭ್ಯರ್ಥಿಗಳಲ್ಲಿ 200ಕ್ಕೂ ಹೆಚ್ಚು ಅಭ್ಯರ್ಥಿಗಳು ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಶೇಕಡಾ 90ಕ್ಕೂ ಹೆಚ್ಚು ಅಭ್ಯರ್ಥಿಗಳು ಸಾರ್ವಜನಿಕರಿಂದ ಬಂದವರು” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...