ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಈ ಪ್ರಕರಣದ ವಿಚಾರಣೆಯು ಬರೋಬ್ಬರಿ 13 ವರ್ಷಗಳ ಕಾಲ ನಡೆದಿದೆ. 7 ವರ್ಷ ಜೈಲು ಶಿಕ್ಷೆ ಪ್ರಕಟಿಸಲಾಗಿದೆ.
ಓಬಳಾಪುರಂ ಮೈನಿಂಗ್ ಕಂಪನಿ (OMC) ಅಕ್ರಮ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಜೊತೆಗೆ ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಬಿ. ವಿ. ಶ್ರೀನಿವಾಸರೆಡ್ಡಿಯನ್ನೂ ದೋಷಿ ಎಂದು ಕೋರ್ಟ್ ಘೋಷಿಸಿದೆ.
ಇದನ್ನು ಓದಿದ್ದೀರಾ? ಬಳ್ಳಾರಿಗೆ ಜನಾರ್ದನ ರೆಡ್ಡಿ ಪ್ರವೇಶ : ಬಿಜೆಪಿಗೆ ವರವಾಗಲಿದೆಯೇ ಸಂಡೂರು ಉಪ ಚುನಾವಣೆ?
ಶಾಸಕ ಜನಾರ್ದನ ರೆಡ್ಡಿಗೆ ಒಟ್ಟು ಏಳು ವರ್ಷ ಜೈಲು ಶಿಕ್ಷ ಪ್ರಕಟವಾಗಿದೆ. ಸದ್ಯ ಜನಾರ್ದನ ರೆಡ್ಡಿ ಜಾಮೀನಿಗಾಗಿ ಹೈದರಾಬಾದ್ನ ಹೈಕೋರ್ಟ್ ಮೊರೆ ಹೋಗುವ ನಿರೀಕ್ಷೆಯಿದೆ. ಜಾಮೀನು ಸಿಗುವವರೆಗೂ ರೆಡ್ಡಿ ಜೈಲಿನಲ್ಲಿರಬೇಕಾಗುತ್ತದೆ.
ಈ ಹಿಂದೆ ರೆಡ್ಡಿ ತಾನು ಜಾಮೀನು ಪಡೆಯಲು ನ್ಯಾಯಾಧೀಶರಿಗೆ ಲಂಚದ ಆಫರ್ ನೀಡಿದ್ದರು. “ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ನೀಡುವಂತೆ ನನಗೆ ನಲವತ್ತು ಕೋಟಿ ರೂಪಾಯಿ ಆಮಿಷ ಒಡ್ಡಿದ್ದರು” ಎಂದು ಸಿಬಿಐನ ಮಾಜಿ ವಿಶೇಷ ನ್ಯಾಯಾಧೀಶ ಬಿ. ನಾಗ ಮಾರುತಿ ಶರ್ಮಾ ಅವರು ಎಸಿಬಿ ಕೋರ್ಟ್‌ನ ವಿಶೇಷ ನ್ಯಾಯಾಧೀಶರ ಮುಂದೆ ಹೇಳಿಕೊಂಡಿದ್ದರು.
