ಶಕ್ತಿ ಕೇಂದ್ರ ವಿಧಾನಸೌಧ ಮುಂದೆ ‘ಜನಸ್ಪಂದನಾ’ ಕಾರ್ಯಕ್ರಮ ಆರಂಭ, ಹರಿದುಬರುತ್ತಿರುವ ಜನ

Date:

ಸ್ಪಂದನಶೀಲ ಆಡಳಿತದ ಭರವಸೆಯನ್ನು ಗಟ್ಟಿಗೊಳಿಸುವ ಪ್ರಯತ್ನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ವಿಧಾನಸೌಧ ಮುಂಭಾಗದಲ್ಲಿ ಇಂದು (ಫೆ.8) ರಾಜ್ಯ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಆರಂಭಗೊಂಡಿದೆ.

- Advertisement -

ಜನಸಾಮಾನ್ಯರ ಅಹವಾಲು ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಪ್ರಯತ್ನದೊಂದಿಗೆ ಜನತಾ ದರ್ಶನ ನಡೆಸುತ್ತಿರುವುದು ವಿಶೇಷವಾಗಿದೆ. ಇಂದಿನ ಜನತಾ ದರ್ಶನ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬುಧವಾರ ರಾತ್ರಿಯೇ ಜನ ಸ್ಪಂದನ ಕಾರ್ಯಕ್ರಮಕ್ಕಾಗಿ ದೂರದೂರುಗಳಿಂದ ಜನ ಆಗಮಿಸಿದ್ದಾರೆ. ಗುರುವಾರ ಬೆಳಿಗ್ಗೆ 8.30 ಗಂಟೆಗೇ ಸಾರ್ವಜನಿಕರಿಂದ ಅರ್ಜಿ ಸ್ವೀಕಾರ, ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕಂದಾಯ ಇಲಾಖೆಯ ಕೌಂಟರಿನಲ್ಲಿ ನಿರೀಕ್ಷೆಗೂ ಮೀರಿ ಜನರು ಸೇರಿದ್ದನ್ನು ಕಂಡು, ಕೂಡಲೇ ಆಯೋಜಕರು ಇನ್ನೊಂದು ಕೌಂಟರ್‌ ತೆರೆದು ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.

ಪೊಲೀಸ್‌ ಬಂದೋಬಸ್ತ್

ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್‌ ಅವರ ನೇತೃತ್ವದಲ್ಲಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಒಟ್ಟು 936 ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. 8 ಎಸಿಪಿ, 23 ಇನ್ಸ್‌ಪೆಕ್ಟರ್‌, 58 ಸಬ್‌ ಇನ್ಸ್‌ಪೆಕ್ಟರ್‌, 205 ಪೊಲೀಸ್‌ ಕಾನ್ಸ್‌ಟೇಬಲ್‌, 142 ಮಹಿಳಾ ಪೊಲೀಸ್‌ ಸಿಬ್ಬಂದಿ, 500 ಹೋಂ ಗಾರ್ಡ್‌ಗಳನ್ನು ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ದಿಲ್ಲಿ ಚಲೋ ಮತ್ತು ಬಿಜೆಪಿಯ ಭಂಡತನ

ಕಳೆದ ಸಲ ಶೇ.98 ರಷ್ಟು ಅರ್ಜಿ ವಿಲೇವಾರಿ

ಜನ ಸ್ಪಂದನೆ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಸಭೆ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಮೂರು ತಿಂಗಳಲ್ಲಿ ಜನಸ್ಪಂದನ ಅರ್ಜಿಗಳಿಗೆ ಪರಿಹಾರ ಕೊಡಬೇಕು. ಕಾನೂನು ಪ್ರಕಾರ ಪರಿಹಾರ ಸಾಧ್ಯವಿಲ್ಲದಿದ್ದರೆ ಆ ರೀತಿ ಹಿಂಬರಹ ಕೊಡಬೇಕು. ಪ್ರತೀ ಅರ್ಜಿಗೂ ಸರ್ಕಾರ ಸ್ಪಂದನೆ ಇರಬೇಕು” ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ನವೆಂಬರ್‌ 27ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ. ಸರ್ಕಾರವನ್ನು ಜನರ ಬಳಿಗೆ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ” ಎಂದು ವಿವರಿಸಿದರು.

ಜನಸ್ಪಂದನ (1)

“ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು” ಎಂದು ತಿಳಿಸಿದರು.

“ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ” ಎಂದರು.

ಅಪಪ್ರಚಾರಗಳಿಗೆ ಕಿವಿಗೊಡಬೇಡಿ

“ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದು ತಿಳಿಸಿದ್ದಾರೆ. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

“ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ; ಅಸಮಾನತೆ ನಿವಾರಿಸುವ ಕಾರ್ಯಕ್ರಮ. ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು. ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ” ಎಂದರು.

“ಭ್ರಾತೃವ ಬೆಳೆಯಬೇಕು, ಸಮಾನತೆ ಬೆಳೆಯಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಬದಲಾವಣೆ ತರಲು ಜನಸ್ಪಂದನ ಅಗತ್ಯ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...