ಅಧಿಕಾರದ ಮದದಿಂದ ಕಾಂಗ್ರೆಸ್ ಮಿದುಳಿಗೂ ಗೆದ್ದಲು ಹಿಡಿದಿದೆ: ಜೆಡಿಎಸ್ ವ್ಯಂಗ್ಯ

Date:

  • ಎಸ್ ಎಂ ಕೃಷ್ಣರನ್ನು ಕೆಳಗಿಳಿಸಿದಾಗ ಕಾಂಗ್ರೆಸ್ ಕೃತಜ್ಞತೆ ಎಲ್ಲಿತ್ತು?
  • ವಿಧಾನಸೌಧ ಗುರುವಾರದ ಬಜಾರ್ ಆಗಿಬಿಟ್ಟಿದೆ ಎಂದ ಜೆಡಿಎಸ್

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಟೀಕೆ ಮಾಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತೀವ್ರ ತಿರುಗೇಟು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿದೆ.

- Advertisement -

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್, ಮೂರ್ಖರಿಗೆ ಬುದ್ಧಿ ಮಂದ ಎನ್ನುವ ಮಾತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅದೇ ಆಗಿದೆ. ಅಧಿಕಾರದ ಮದದಿಂದ ಅದರ ಮಿದುಳಿಗೂ ಗೆದ್ದಲು ಹಿಡಿದಿದೆ. ನಾಲ್ಕು ವರ್ಷದ ಹಿಂದೆ ಸರಕಾರ ಮಾಡಲು ಸಿದ್ದರಾಮಯ್ಯ, ಡಿಕೆಶಿ ಅವರ ಮನೆಗೆ ಕುಮಾರಸ್ವಾಮಿ ಅವರು ಬಂದಿದ್ದರಾ? ಸುಳ್ಳು ಹೇಳುವುದಕ್ಕೆ ಸಾಸಿವೆ ಕಾಳಿನಷ್ಟಾದರೂ ಸಂಕೋಚ ಬೇಡವೇ? ಎಂದು ಜೆಡಿಎಸ್ ತರಾಟೆಗೆ ತೆಗೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

‘ಕೈ’ ಅಭಯದ ಸಂಕೇತವೆಂದು ನಂಬಿದ್ದರು ಕುಮಾರಸ್ವಾಮಿ. ಆದರೆ, ಡಿ.ಕೆ.ಶಿವಕುಮಾರ್‌ ಅವರದ್ದು ‘ಕೈ’ ಎತ್ತುವುದಷ್ಟೇ ಅಲ್ಲ, ‘ಕೈ’ ಕೊಡುವುದರಲ್ಲೂ ಎತ್ತಿದ ‘ಕೈ’ ಎಂದು ಅವರಿಗೆ ಗೊತ್ತಾಗಲೇ ಇಲ್ಲ. ಅಸೆಂಬ್ಲಿಯಲ್ಲಿ ‘ಕೈ’ ಎತ್ತಿದರು, ಮಂಡ್ಯದಲ್ಲೂ ‘ಕೈ’ ಎತ್ತಿದರು. ಬೆಂಗಳೂರು ಗ್ರಾಮಾಂತರದಲ್ಲೂ ‘ಕೈ’ ಎತ್ತಿದರು!! ಪಾಪ… ಕುಮಾರಸ್ವಾಮಿ ಅವರು ನಂಬಿದರು. ಬೆಂಗಳೂರು ಗ್ರಾಮಾಂತರದಲ್ಲಿ ಕುಮಾರಸ್ವಾಮಿಯವರು, ಅವರ ‘ಕೈ’ ಹಿಡಿದರು. ಮಂಡ್ಯದಲ್ಲಿ ಅದೇ ‘ಕೈ’ ಅವರನ್ನು ನಡುರಸ್ತೆಯಲ್ಲಿ ಬಿಟ್ಟು ಜಾರಿಕೊಂಡಿತು.
ಇದೆಂತಾ ಕೈಚಳಕ? ಅವರ ಹಸ್ತವಾಸಿ ವಿಸ್ವಾಸಘಾತುಕಕ್ಕೇ ಹೆಸರುವಾಸಿ… ಅಲ್ಲವೇ? ಎಂದು ಜೆಡಿಎಸ್ ಖಾರವಾಗಿ ಕೇಳಿದೆ.

ಜಾತ್ಯತೀತ ಎಂದ ಪೆನ್ನು ಜಾತಿ ಜಾತಿ ಎಂದು ಗೀಚುತ್ತಿದೆ. ಮಿದುಳಿಗೂ ಪೆನ್ನಿಗೂ ಲಿಂಕ್‌ ತಪ್ಪಿದೆಯಾ ಹೇಗೆ? ಅಥವಾ ಬೇರೆಯವರು ಬೆಪ್ಪರು ಎನ್ನುವ ಮದವೇ? ಅಧಿಕಾರಕ್ಕಾಗಿ ಶಿವಸೇನೆಯ ಜತೆ ಮಹಾ ಶೋ ನಡೆಸಿದಾಗ ಆ ಜಾತ್ಯತೀತತೆಯನ್ನು ಯಾವ ಶೋಕೇಸಿನಲ್ಲಿ ಇಟ್ಟಿದ್ದಿರಿ? ಬಿಜೆಪಿ ಜತೆ ಸುದೀರ್ಘ ಕಾಲ ಅಧಿಕಾರದ ಸುಖ ಅನುಭವಿಸಿದ ನಿತೀಶ್‌ ಕುಮಾರ್‌ ಪಕ್ಕದಲ್ಲಿ ಆಸೀನರಾದಾಗ ಜಾತ್ಯತೀತವನ್ನು ಎಲ್ಲಿ ಜೀತಕ್ಕೆ ಇಟ್ಟಿದ್ದಿರಿ? I.N.D.I.A ಕೂಟದಲ್ಲಿರುವ ಬಿಜೆಪಿಯ ಎಲ್ಲ ನೇರ ಫಲಾನುಭವಿಗಳ ಪದತಲದಲ್ಲಿ ಹಣೆ ಇಟ್ಟಾಗ ಹಸ್ತದ ಜಾತ್ಯತೀತತೆಯನ್ನು ಮಡಚಿ ಯಾರ ಜೇಬಿನಲ್ಲಿ ಇಟ್ಟಿದ್ದಿರಿ? ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಪ್ರಾದೇಶಿಕ ಪಕ್ಷಗಳ ಪಟ್ಟುಗಳಿಗೆ ಸೂತ್ರವಿಲ್ಲದ ಪತಂಗದಂತೆ ಪತರಗುಟ್ಟುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಅಮಿತ್ ಶಾ ಅವರ ಹೆಸರು ದುಃಸ್ವಪ್ನದಂತೆ ಕಾಡುತ್ತಿದೆ. ರಾಜಕೀಯ ಸ್ವಾರ್ಥಕ್ಕಾಗಿ ಭಯೋತ್ಪಾದಕರನ್ನೂ ಸಮರ್ಥಿಸುತ್ತಾ; ಈಗ ಭಯ, ಒತ್ತಡ, ಷರತ್ತು ಎಂದು ಪಠಿಸುತ್ತಿದೆ. ಕಾಲಾಯ ತಸ್ಮೈ ನಮಃ, ಇದನ್ನು ಕಾಂಗ್ರೆಸ್ ಮರೆಯದಿದ್ದರೆ ಕ್ಷೇಮ. ಪರಿವಾರ ಪಾಲಿಟಿಕ್ಸ್ʼನಲ್ಲಿ ಕಾಂಗ್ರೆಸ್ಸಿಗೆ ಸಾಟಿ ಮೇಟಿ ಉಂಟೆ? ಜನಪಥ ಹತ್ತರಲ್ಲಿರುವ ಮನೆಗಿಂತಾ ಬೇಕೆ? ಎಷ್ಟು ನಾಯಕರು ಅಲ್ಲಿನ ರಾಜಕೀಯಕ್ಕೆ ಉಸಿರುಗಟ್ಟಿ ನರಳಿದರೆಂಬ ಲೆಕ್ಕಾ ಇದೆಯೇ? ಎಂದು ಜೆಡಿಎಸ್ ಕಾಂಗ್ರೆಸ್ ಕಾಲೆಳೆದಿದೆ.

ನಿಮ್ಮ ಪಟ್ಟಿಯಲ್ಲಿರುವ ರಾಜಕೀಯದ ಪರಮ ಪುರುಷೋತ್ತಮರೆಲ್ಲರೂ ನಮ್ಮ ಪಕ್ಷಕ್ಕೆ ಬಂದರು. ಪೊಗದಸ್ತಾಗಿ ಉಂಡರು, ಆಮೇಲೆ ಎದ್ದು ಹೋದರು. ʼಉಂಡು ಹೋದ, ಕೊಂಡು ಹೋದʼ ಎನ್ನುತ್ತೀವಲ್ಲಾ.. ಹಾಗೆ. ಆದರೆ, ಅದೇ ಸಿದ್ದಪುರುಷನನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಂಡವರು, ‘ಅನ್ ಪಾಲಿಷ್ಡ್ ಡೈಮಂಡ್’ ಎಂದು ಸೋನಿಯಾ ಗಾಂಧಿ ಅವರ ಮುಂದೆ ವಕಾಲತ್ತು ಹಾಕಿದ ಎಸ್.ಎಂ.ಕೃಷ್ಣ ಅವರ ಬಗ್ಗೆ ಈ ಪರಿಯ ಕೃತಜ್ಞತೆಗೆ ಏನಾಗಿತ್ತು? ಕೃತಜ್ಞತೆ, ಕರುಣೆ, ಉಪಕಾರ ಸ್ಮರಣೆಗಳ ಕತ್ತು ಕುಯ್ದು ರಾಜಕೀಯದ ಅಂತ್ಯಕಾಲದಲ್ಲಿ ಅವರು ಬಿಜೆಪಿಗೆ ಹೋಗುವ ಸ್ಥಿತಿ ಸೃಷ್ಟಿಸಿದವರು ಯಾರು? ವಿಶ್ವಸಂಸ್ಥೆಯಿಂದ ದೆಹಲಿಗೆ ಮರಳಿದ ಕೂಡಲೇ ಅಪಮಾನಕರವಾಗಿ ಸಂಪುಟದಿಂದ ಅವರನ್ನು ಕಿತ್ತೊಗೆದದ್ದು ಉಪಕಾರ ಸ್ಮರಣೆಯೇ? ಕಷ್ಟಕಾಲದಲ್ಲಿ ಇಡೀ ಕಾಂಗ್ರೆಸ್ಸಿಗೆ ಆಸರೆ ಆಗಿದ್ದವರನ್ನು ತುಚ್ಛವಾಗಿ ಆಚೆಗಟ್ಟಿದ್ದು ಗೌರವವೇ? ಅವಕಾಶವಾದಿ, ಗೋಸುಂಬೆ, ನರಿಬುದ್ಧಿ ಯಾರದ್ದು? ಎಂದು ಜೆಡಿಎಸ್ ಟಾಂಗ್ ನೀಡಿದೆ.

‘ನಂಬಿಕೆ, ಪ್ರಾಮಾಣಿಕತೆ, ನಿಷ್ಠೆ, ನಿಯತ್ತನ್ನು ಗುಜರಿಗೆ ಹಾಕಿ ʼಸಂಡೇ ಬಜಾರ್ʼನಂತೆ ವಿಧಾನಸೌಧವನ್ನೇ ʼಗುರುವಾರದ ಬಜಾರ್ʼ ಮಾಡಿಕೊಂಡವರು ನೀವು. ನಿಜಕ್ಕೂ ನಿಮಗೆ ಲಜ್ಜೆ ಇದೆಯಾ? ವಾರಕ್ಕೊಂದು ದಿನ, ಅದೂ ಗುರುವಾರದ ದಿನವಷ್ಟೇ ಸಂಪುಟ ನೆಪದಲ್ಲಿ 3ನೇ ಮಹಡಿಯಲ್ಲಿ ಕೆಲ ಹೊತ್ತಷ್ಟೇ ಠಳಾಯಿಸಿ, 24/7 ರಾಜ್ಯವನ್ನು ಗುಡಿಸಿ ಗುಂಡಾಂತರ ಮಾಡುತ್ತಿರುವವರು ಲಜ್ಜೆಯಲ್ಲೂ ಕನಿಷ್ಠ-ಗರಿಷ್ಠ ಎಂದು ಅಳತೆ ಮಾಡುತ್ತಿರುವುದು ಅದ್ಭುತ.. ಅಲ್ಲಲ್ಲ.. ಅದ್ಭುತಃ!’ ಎಂದು ಜೆಡಿಎಸ್, ಕಾಂಗ್ರೆಸ್‌ಗೆ ಟಾಂಗ್ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....