ಖರ್ಗೆ ಅವರನ್ನು ಭೇಟಿ ಮಾಡಿದ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮತ್ತೆ ಬೇಡಿಕೆ?

Date:

ಕಾಂಗ್ರೆಸ್‌ ಅಧಿಕಾರ ಹಿಡಿದು ಮೂರು ವರ್ಷಗಳು ಪೂರೈಸುತ್ತಿರುವ ಬೆನ್ನಲ್ಲೇ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್‌ ಜಾರಕಿಹೊಳಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್‌. ಸಿ ಮಹದೇವಪ್ಪ ಇಂದು(ಏ.28) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಅಧಿಕಾರ ಹಸ್ತಾಂತರ ಮತ್ತು ಸಚಿವ ಸಂಪುಟ ವಿಸ್ತರಣೆ/ಬದಲಾವಣೆಯ ಬಗ್ಗೆ ಇರುವ ಚರ್ಚೆಗೆ ಮತ್ತಷ್ಟು ಪುಷ್ಠಿ ನೀಡಿದೆ.

ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರನ್ನೂ ಕೂಡ ಜಾರಕಿಹೊಳಿ ಭೇಟಿ ಮಾಡಿ ಚರ್ಚಿಸಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಹೆಚ್‌.ಸಿ ಮಹದೇವಪ್ಪ ಕೂಡ ದೆಹಲಿಯಲಲಿ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಭಾರಿ ದೊಡ್ಡ ಬದಲಾವಣೆಗೆ ಮುನ್ಸೂಚನೆ ಎಂಬಂತೆ ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.  ಈಗಾಗಲೇ ಅನೇಕ ಕಾಂಗ್ರೆಸ್‌ ಅತೃಪ್ತ ಶಾಸಕರು ಸಚಿವ ಸಂಪುಟ ಬದಲಾವಣೆಗೆ ಒತ್ತಾಯ ಮಾಡುತ್ತಿರುವ ಬೆನ್ನಲ್ಲೇ ಈ ಉಭಯ ನಾಯಕರ ದೆಹಲಿ ಭೇಟಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.  

ಇದನ್ನೂ ಓದಿ : ಅಹಿಂದ ನಾಯಕತ್ವ:‌ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯನವರ ಉತ್ತರಾಧಿಕಾರಿಯಾಗಬಲ್ಲರೇ?

ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸುತ್ತಿರುವ ಬೆನ್ನಲ್ಲೇ ಸಚಿವ ಸಂಪುಟ ಬದಲಾವಣೆಗೆ ಒತ್ತಾಯ ಕೇಳಿ ಬಂದಿದೆ. ಹೈಕಮಾಂಡ್‌ ಪಂಚ ರಾಜ್ಯ ಚುನಾವಣೆಯ ಫಲಿತಾಂಶದ ಬಳಿಕ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ ಎಂಬ ಮಾಹಿತಿ ಇದೆ.

ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್  ಕೂಡ ಕಳೆದ ಮೂರು ವರ್ಷಗಳಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡುತ್ತಿದ್ದು, ಹೈಕಮಾಂಡ್‌ ಗೆ ತಲೆನೋವಾಗಿ ಪರಿಣಮಿಸಿದೆ. ಬದಲಾವಣೆ ಮಾಡಲೇಬೇಕಾದ ಪರಿಸ್ಥಿತಿಯಲ್ಲಿ ಹೈಕಮಾಂಡ್‌ ಇದೆ. ಸಿದ್ದರಾಮಯ್ಯ ಬಣ ಮತ್ತು ಡಿಕೆಶಿ ಬಣವನ್ನು ಸಮನ್ವಯ ಸಾಧಿಸಿಕೊಂಡು ಈ ಬದಲಾವಣೆಗೆ ಕೈ ಹಾಕಬೇಕಿದ್ದು, ಅದರ ಪ್ರಾಥಿಮಿಕ ಹಂತದ ಕಾರ್ಯ ಎನ್ನುವಂತೆ ಪ್ರಮುಖರಿಗೆ ದೆಹಲಿಗೆ ಬುಲಾವ್‌ ನೀಡಿ ಚರ್ಚೆಗೆ ಮುಂದಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...