ಹಲವು ನಿರೀಕ್ಷೆ ಹುಟ್ಟಿಸಿದ ನಾಳಿನ ಸಂಪುಟ ಸಭೆ; ಲಿಂಗಾಯತ ಸಮುದಾಯಕ್ಕೆ ಸಿಗಲಿದೆಯೇ ಮೀಸಲಾತಿ?

Date:

  • ಲಿಂಗಾಯತರ ಮೀಸಲಾತಿ ವಿಚಾರ ಹೈಕೋರ್ಟ್ ಮಧ್ಯಂತರ ಆದೇಶ ತೆರವು
  • ಸಂಪುಟ ಸಭೆ ನಿರ್ಧಾರ ನೋಡಿ ಮುಂದಿನ ಹೋರಾಟ; ಜಯಮೃತ್ಯುಂಜಯ ಶ್ರೀ

ಶುಕ್ರವಾರ ನಡೆಯಲಿರುವ ರಾಜ್ಯ ಸರ್ಕಾರದ ಸಂಪುಟ ಸಭೆ ಬಹು ನಿರೀಕ್ಷೆಯನ್ನು ಹುಟ್ಟು ಹಾಕಿದೆ.

ಲಿಂಗಾಯತ-ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಒದಗಿಸುವುದು ಹಾಗೂ ಪರಿಶಿಷ್ಟರ ಮೀಸಲಾತಿಯನ್ನು ಶೆಡ್ಯೂಲ್ 9ಕ್ಕೆ ಸೇರಿಸುವ ವಿಚಾರದಲ್ಲಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎನ್ನುವುದು ಈಗ ಕುತೂಹಲಕ್ಕೆ ಕಾರಣವಾಗಿದೆ.

ಮತೊಂದೆಡೆ ಪಂಚಮಸಾಲಿ ಮತ್ತು ಒಕ್ಕಲಿಗ ಸಮುದಾಯಕ್ಕೆ 2ಸಿ, 2ಡಿ ಮೀಸಲಾತಿಗೆ ಸಮ್ಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ತೆರವುಗೊಳಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಜಯಮೃತ್ಯುಂಜಯ ಸ್ವಾಮೀಜಿ, ಹೈಕೋರ್ಟ್ ಆದೇಶವನ್ನ ಸ್ವಾಗತಿಸಿರುವುದಾಗಿ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜೊತೆಗೆ ಸರ್ಕಾರಕ್ಕೆ ಮನವಿ ಮಾಡಿರುವ ಅವರು ಕೂಡಲೇ ಸಿಎಂ ಬಸವರಾಜ ಬೊಮ್ಮಾಯಿ ಈ ವಿಚಾರದಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರಬೇಕು. ಸಂಪುಟದಲ್ಲಿ ಚರ್ಚಿಸಿ 2ಎಗೆ ಸಮನಾದ ಪ್ರವರ್ಗ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸದ್ಯ ಲಿಂಗಾಯತ-ಪಂಚಮಸಾಲಿಗಳಿಗೆ ಶೇ.5ರಷ್ಟು ಮೀಸಲಾತಿ ಇದೆ. ಇದನ್ನ ಶೇ.10ಕ್ಕೇ ಏರಿಸಿದರೂ ನಮಗೆ ಖುಷಿಯಾಗುತ್ತದೆ. ಈ ನಿರ್ಧಾರ ಸಚಿವ ಸಂಪುಟದಲ್ಲಿ ಬರಲಿದೆ ಎನ್ನುವ ವಿಶ್ವಾಸವನ್ನು ಜಯಮೃತ್ಯುಂಜಯ ಶ್ರೀಗಳು ವ್ಯಕ್ತಪಡಿಸಿದರು. ಹಾಗೆಯೇ ಸಂಪುಟ ಸಭೆ ಬಳಿಕ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಅವರು ತಿಳಿಸಿದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?: ಮಲ್ಲಿಕಾರ್ಜುನ ಖರ್ಗೆ

ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್‌ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ...