ನಾಳೆಯೊಳಗೆ ಜೆಡಿಎಸ್ 2ನೇ ಪಟ್ಟಿ ಬಿಡುಗಡೆ: ಎಚ್ ಡಿ ಕುಮಾರಸ್ವಾಮಿ

Date:

Advertisements
  • ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಹೆಸರು ಇರಲಿದೆ
  • ಸುಧಾಕರ್ ಎಚ್ಚರಿಕೆಯಿಂದ ಇದ್ದರೆ ಉತ್ತಮ

ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಾಳೆ ಅಥವಾ ಗುರುವಾರ ಬಿಡುಗಡೆ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ದೇವೆಗೌಡರು ದೆಹಲಿಯಿಂದ ವಾಪಸಾದ ನಂತರ ಪಟ್ಟಿ ಹೊರಬರಲಿದೆ ಎಂದಿದ್ದಾರೆ.

ಎರಡನೇ ಪಟ್ಟಿ ಬಿಡುಗಡೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ಹಾಸನ ಕ್ಷೇತ್ರವನ್ನೂ ಸೇರಿಸಿ ಪಟ್ಟಿ ಬಿಡುಗಡೆ ಮಾಡುತ್ತೇವೆ. ಆ ಕ್ಷೇತ್ರ ಬಿಟ್ಟು ಮಾಡಿದರೆ ಇನ್ನೊಂದು ಕಥೆ ಹುಟ್ಟಿಕೊಳ್ಳುತ್ತದೆ” ಎಂದು ಹೇಳಿದ್ದಾರೆ.

Advertisements

“ಮೊದಲ ಪಟ್ಟಿ ಬಿಡುಗಡೆಯಾದಗಲೂ ಯಾವುದೇ ಸಮಸ್ಯೆ ಇರಲಿಲ್ಲ. ಎರಡನೇ ಪಟ್ಟಿ ವೇಳೆ ಹಾಸನ ವಿಧಾನಸಭಾ ಕ್ಷೇತ್ರದ್ದು ಹೆಚ್ಚು ಪ್ರಚಾರವಾಗಿದೆ. ಹಾಸನ ವಿಚಾರದಿಂದ ಜನತಾದಳಕ್ಕೂ ಹೆಚ್ಚು ಪ್ರಚಾರವಾಗಿದೆ” ಎಂದು ಹೇಳಿದ್ದಾರೆ.

“ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಶೇ. 2 ರಿಂದ 3ರಷ್ಟು ಮತ ಪ್ರಮಾಣ ಹೆಚ್ಚಾಗಲಿದೆ. ನಮ್ಮ ಗುರಿ ಮುಟ್ಟುವುದಕ್ಕೆ ನಾವು ಯಾವುದೇ ದುಡುಕಿನ ತೀರ್ಮಾನ ಮಾಡುವುದಿಲ್ಲ. ಗೆಲ್ಲುವ ಮಾನದಂಡದಲ್ಲೇ ಟಿಕೆಟ್ ಕೊಡುತ್ತೇವೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಕೈ’ ನಾಯಕರ ಬೆದರಿಸಲು ಬಿಜೆಪಿ ಸರ್ಕಾರ ಸ್ವಾಯತ್ತ ಸಂಸ್ಥೆಗಳನ್ನು ಛೂ ಬಿಟ್ಟಿದೆ; ಸಿದ್ದರಾಮಯ್ಯ ಕಿಡಿ

ಕಾಂಗ್ರೆಸ್ ಪಟ್ಟಿ ಬಿಡುಗಡೆ ಆಗದ ಹಿನ್ನೆಲೆ ಜೆಡಿಎಸ್ ಪಟ್ಟಿ ವಿಳಂಬ ಆಗುತ್ತಿದೆಯಾ ಎನ್ನುವ ಪ್ರಶ್ನೆಗೆ ಉತ್ತರಿಸಿ, “ಅದರ ಬಗ್ಗೆ ನಾನು ಚಿಂತೆ ಮಾಡಿಲ್ಲ. ನಾವು ನಮ್ಮದೇ ರೀತಿಯಲ್ಲಿ ಅಭ್ಯರ್ಥಿಗಳನ್ನು ತೀರ್ಮಾನ ಮಾಡುತ್ತೇವೆ” ಎಂದಿದ್ದಾರೆ.

ಜೆಡಿಎಸ್ 120 ಸ್ಥಾನ ಗೆದ್ದರೆ ರಾಜಕೀಯ ನಿಲ್ಲಿಸುತ್ತೇನೆ ಎಂದಿರುವ ಸಚಿವ ಕೆ ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯಿಸಿ, “ಹೆಚ್ಚು ಕಡಿಮೆ ಆಗಿ ಅವರು ರಾಜಿನಾಮೆ ಕೊಡಬೇಕಾದ ಸಂದರ್ಭ ಬಂದುಬಿಟ್ಟಾತು. ಅವರು ಮಾಡಿದ ಅನಾಚಾರ ಜನರಿಗೆ ಗೊತ್ತಿದೆ” ಎಂದು ಕಿಡಿಕಾರಿದ್ದಾರೆ.

“ರೆಫ್ರಿಜರೇಟರ್, ಸ್ಟವ್ ಎಲ್ಲ ಹಂಚುತ್ತಿದ್ದಾರೆ. ಇಷ್ಟೆಲ್ಲಾ ಕೊಡುತ್ತಿದ್ದಾರೆ ಎಂದರೆ; ಇವರು ಇನ್ನೆಷ್ಟು ಶ್ರೀಮಂತರು ಅಂತ ಜನರು ಮನೇಲಿ ಕೂರಿಸಿಬಿಟ್ಟರೆ ಕಷ್ಟ. ಎಚ್ಚರಿಕೆಯಿಂದ ಇದ್ದರೆ ಉತ್ತಮ” ಎಂದು ತಿರುಗೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

ಡಿ ಕೆ ಶಿವಕುಮಾರ್ ಬಳಿಕ ಕಾಂಗ್ರೆಸ್ ಶಾಸಕ ರಂಗನಾಥ್‌ರಿಂದ ಆರ್‌ಎಸ್‌ಎಸ್ ಗೀತೆ ಗುಣಗಾನ!

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X