ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್​ಗೆ ಖಚಿತ:‌ ಶ್ರೀನಿವಾಸಪುರ ಶಾಸಕ ವೆಂಕಟಶಿವಾರೆಡ್ಡಿ

Date:

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಹೊಂದಾಣಿಕೆಯಿಂದ ಕೋಲಾರ ಲೋಕಸಭಾ ಕ್ಷೇತ್ರ ಜೆಡಿಎಸ್​ಗೆ ಸಿಗುವುದು ಬಹುತೇಕ ಖಚಿತ ಎಂದು ಶ್ರೀನಿವಾಸಪುರ ಕ್ಷೇತ್ರದ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ ಬಹಿರಂಗಪಡಿಸಿದ್ದಾರೆ.

ಹಾಲಿ ಸಂಸದ ಮುನಿಸ್ವಾಮಿ ಅವರಿಗೆ ಬಿಜೆಪಿಯಿಂದ ಈ ಬಾರಿ ಟಿಕೆಟ್‌ ಸಿಗಲ್ಲ ಎನ್ನುವ ಚರ್ಚೆಗಳ ನಡುವೆ ವೆಂಕಟಶಿವಾರೆಡ್ಡಿ ಹೇಳಿರುವ ಈ ಮಾತು ರಾಜಕೀಯ ಆಸಕ್ತರ ಗಮನ ಸೆಳೆದಿದೆ.

ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಅಭ್ಯರ್ಥಿ ಆಯ್ಕೆ ಸೇರಿದಂತೆ ಗೆಲುವಿನ ತಂತ್ರಗಾರಿಕೆಯನ್ನು ಶುರು ಮಾಡಿವೆ. ಈ ಬಾರಿ ಬಿಜೆಪಿ–ಜೆಡಿಎಸ್‌ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದಲ್ಲಿ ಚಿತ್ರಣ ಏನಾಗಲಿದೆ ಎಂಬುದು ಸಹಜವಾಗಿ ಕುತೂಹಲ ಕೆರಳಿಸಿದೆ. ಜೆಡಿಎಸ್​ಗೆ ಬಿಜೆಪಿ ಯಾವ ಯಾವ ಕ್ಷೇತ್ರ ಬಿಟ್ಟು ಕೊಡಲಿದೆ ಎಂಬುದು ಕೂಡ ಕುತೂಹಲ ಸಂಗತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಕುಮಾರಸ್ವಾಮಿ ಮಹತ್ವದ ಸಭೆ

ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​ ಡಿ ಕುಮಾರಸ್ವಾಮಿ ಕೋಲಾರ ಲೋಕಸಭಾ ಕ್ಷೇತ್ರದ ಬಗ್ಗೆ ಮಹತ್ವದ ಸಭೆ ಮಾಡಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ನಡೆದ ಈ ಸಭೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಇದೇ ವೇಳೆ ಪಕ್ಷ ಸಂಘಟನೆ, ಸಿದ್ದತೆ, ಆಕಾಂಕ್ಷಿಗಳ ಬಗ್ಗೆ ಚರ್ಚೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಮೂವರು ಶಾಸಕರು ಇರುವ ಕಾರಣ ಜೆಡಿಎಸ್‌ನಿಂದ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಸಲಹೆ ನೀಡಿದ್ದಾರೆ. ದಲಿತ ನಾಯಕರೊಬ್ಬರನ್ನು ಗೆಲ್ಲಿಸುವ ಬಗ್ಗೆ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

ಮೂವರ ಹೆಸರು ಅಂತಿಮ

“ಬಿಜೆಪಿಯೊಂದಿಗೆ ಹೊಂದಾಣಿಕೆಯಲ್ಲಿ ಕೋಲಾರ ಕ್ಷೇತ್ರ ಜೆಡಿಎಸ್ ಪಾಲಿಗೆ ಸಿಗುವುದು ಬಹುತೇಕ ಖಚಿತ. ಕೋಲಾರ ಕ್ಷೇತ್ರಕ್ಕೆ ಜೆಡಿಎಸ್ ನಿಂದ ಮೂವರ ಹೆಸರು ಅಂತಿಮಗೊಳಿಸಲಾಗಿದೆ. ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್, ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಹಾಗೂ‌ ವಿಧಾನಸಭಾ ಚುನಾವಣೆಯಲ್ಲಿ ಬಂಗಾರಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಮಲ್ಲೇಶ್ ಬಾಬು, ಹೆಸರು ಅಂತಿಮ‌ ಪಟ್ಟಿಯಲ್ಲಿದೆ. ಈ ಮೂವರ ಹೆಸರನ್ನು ಸರ್ವೇ ಮಾಡಿದ ನಂತರ ಒಬ್ಬರು ಅಂತಿಮ ಅಭ್ಯರ್ಥಿ ಆಗಲಿದ್ದಾರೆ” ಎಂದು ಶಾಸಕ ವೆಂಕಟಶಿವಾರೆಡ್ಡಿ ಕೋಲಾರದಲ್ಲಿ ಸ್ಪಷ್ಟಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾಗೆ ಚಾಲನೆ | ಚುನಾಯಿತ ಸರ್ಕಾರಗಳನ್ನು ಉರುಳಿಸುವ ದುರ್ಬುದ್ಧಿ ಬಾರದಿರಲಿ; ಚಾಮುಂಡಿ ದೇವಿಗೆ ಹಂಪನಾ ಪ್ರಾರ್ಥನೆ

ವಿಶ್ವವಿಖ್ಯಾತ ಮೈಸೂರು ದಸರಾಗೆ ಗುರುವಾರ ಅದ್ಧೂರಿ ಚಾಲನೆ ದೊರೆಯಿತು. ಖ್ಯಾತ ಸಾಹಿತಿ...

ಮೈಸೂರು | ಸಿಎಂ ಸಿದ್ದರಾಮಯ್ಯ ಪರ ಜಿಟಿಡಿ ಅಬ್ಬರ; ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ

ಆಪಾದಿತ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿರುವ...

ಮೈಸೂರು ದಸರಾದಲ್ಲೂ ಕೋಮು ದ್ವೇಷ; ದೀಪಾಲಂಕಾರಕ್ಕೂ ಬಿಜೆಪಿ ಅಪಸ್ವರ

ಮೈಸೂರು ದಸರಾ ಸಮಯದಲ್ಲಿ ಬಿಜೆಪಿ ನಿರಂತರವಾಗಿ ವಿವಾದ ಹುಟ್ಟುಹಾಕುತ್ತಲೇ ಇದೆ. ಈ...

50 ಕೋಟಿ ರೂ.ಗಾಗಿ ಜೀವ ಬೆದರಿಕೆ: ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್‌ ನಾಯಕ ದೂರು

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ...