ನಾರಿ ಶಕ್ತಿ ಬಗ್ಗೆ ಗೌರವವಿದ್ದರೆ ಬಿಜೆಪಿ, ಹೆಚ್‌ಡಿಕೆ ಸಂತ್ರಸ್ತೆಯರಿಗೆ ಧೈರ್ಯ ತುಂಬಲಿ: ಡಿಕೆ ಶಿವಕುಮಾರ್

Date:

“ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ನಾರಿ ಶಕ್ತಿ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವವಿದ್ದರೆ ಮೊದಲು ಸಂತ್ರಸ್ತರ ಮನೆಗೆ ಹೋಗಿ ಆ ಮಹಿಳೆಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲಿ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಯಾದಗಿರಿಯ ದೇವತ್ಕಲ್‌ನ ಹೆಲಿಪ್ಯಾಡ್ ಬಳಿ ಪೆನ್‌ಡ್ರೈವ್ ಪ್ರಕರಣದ ಹಿಂದೆ ಮಹಾನಾಯಕರ ಕೈವಾಡವಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.

“ದೇವರಾಜೇಗೌಡ ಈ ಪೆನ್ ಡ್ರೈವ್ ವಿಚಾರವಾಗಿ ಯಾರನ್ನೆಲ್ಲಾ ಭೇಟಿ ಮಾಡಿದ್ದರು ಎಂದು ನಮ್ಮ ವಕ್ತಾರರು ವಿವರಿಸಿದ್ದಾರೆ. ಈ ವಿಚಾರವಾಗಿ ದೇವರಾಜೇಗೌಡ, ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು. ಅಲ್ಲದೇ ಬಿಜೆಪಿ ನಾಯಕರಿಗೆ ಈ ವಿಚಾರ ತಿಳಿಸಿದ್ದರು. ನಾವು ಈ ಪೆನ್‌ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಬೇರೆ ರೀತಿಯೇ ಮಾಡಬಹುದಾಗಿತ್ತು. ನಮಗೆ ಅದರ ಅಗತ್ಯವಿಲ್ಲ. ಈ ವಿಚಾರಗಳ ಬಗ್ಗೆ ನಾನು ಸುಮ್ಮನೆ ಕೂರುವುದಿಲ್ಲ, ಈ ವಿಚಾರವಾಗಿ ಮುಂದೆ ಮಾತನಾಡುತ್ತೇನೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ ಪ್ರಕರಣ | ಎಸ್‌ಐಟಿ ಮುಂದೆ ಹಾಜರಾಗಲು ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸೂರಜ್ ರೇವಣ್ಣ ನಿಮ್ಮನ್ನು ಭೇಟಿ ಮಾಡಿದ್ದರೇ ಎಂದು ಕೇಳಿದಾಗ, “ಹೌದು, ಸೂರಜ್ ರೇವಣ್ಣ ನಮ್ಮನ್ನು ಭೇಟಿ ಮಾಡಿದ್ದರು. ಅವರು ಯಾವ ಕಾರಣಕ್ಕೆ ಭೇಟಿಯಾಗಿದ್ದರು ಎಂದು ಅವರನ್ನೇ ಕೇಳಿ” ಎಂದು ತಿಳಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೋಷಾರೋಪ ಪಟ್ಟಿ ಎಂಬುದು ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ್

ರಾಮೇಶ್ವರಂ ಕೆಫೆ ‌ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದ್ದು, ದೋಷಾರೋಪ ಪಟ್ಟಿಯಲ್ಲಿ...

ರಾಮೇಶ್ವರಂ ಕೆಫೆ ಸ್ಫೋಟ | ಪ್ರಕರಣದ ಚಾರ್ಜ್‌ಶೀಟ್‌ ಸಲ್ಲಿಕೆ, ಬಿಜೆಪಿ ಕಚೇರಿ ಸ್ಫೋಟಕ್ಕೆ ನಡೆದಿತ್ತು ಸಂಚು!

ಬೆಂಗಳೂರಿನ ವೈಟ್‌ ಫೀಲ್ಡ್‌ನಲ್ಲಿರುವ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ...

ಇನ್ನೊಬ್ಬರಿಗೆ ಒಳಮೀಸಲಾತಿ ಬೇಡ ಎನ್ನುವ ಹಕ್ಕಾಗಲಿ, ನೈತಿಕತೆಯಾಗಲಿ ಯಾರಿಗೂ ಇಲ್ಲ- ದೇವನೂರ ಮಹಾದೇವ

ಒಳಮೀಸಲಾತಿ ಕುರಿತು ಹಿರಿಯ ಚಿಂತಕ ದೇವನೂರ ಮಹಾದೇವ ಅವರ ಸಂದರ್ಶನ. ಸಂದರ್ಶಕ:...