ನೈಸ್ ರಸ್ತೆ ಯೋಜನೆ ಸಂಪೂರ್ಣ ವಶಕ್ಕೆ ಪಡೆಯಲು ರಾಜ್ಯ ಸರ್ಕಾರಕ್ಕೆ ಜೆಡಿಎಸ್-ಬಿಜೆಪಿ ಜಂಟಿ ಒತ್ತಾಯ

Date:

Advertisements
  • ವಿಧಾನಸೌಧದಲ್ಲಿ ಕುಮಾರಸ್ವಾಮಿ, ಬೊಮ್ಮಾಯಿ ಆಗ್ರಹ
  • ‘₹1325 ಕೋಟಿ ನೈಸ್ ಟೋಲ್ ಹಣ ವಸೂಲಿಗೆ ಆಗ್ರಹ

ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ – ನೈಸ್‌ ಅಕ್ರಮ ರಾಜ್ಯದಲ್ಲಿ ಹಾಡುಹಗಲೇ ನಡೆದಿರುವ ಲೂಟಿಯಾಗಿದೆ. ಜನರ ಭೂಮಿ ಹಾಗೂ ಹಣವನ್ನು ಕೊಳ್ಳೆ ಹೊಡೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಎಚ್‌ ಡಿ ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಆರೋಪಿಸಿದರು.

ವಿಧಾನಸೌಧದಲ್ಲಿರುವ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, “ಈ ಹೋರಾಟ ಇಲ್ಲಿಗೇ ನಿಲ್ಲುವುದಿಲ್ಲ. ನೈಸ್ ವಿರುದ್ಧದ ನಮ್ಮ ಹೋರಾಟ ಹಲವಾರು ಮಜಲುಗಳನ್ನು ಮುಟ್ಟಲಿದೆ” ಎಂದರು.

“ಅಕ್ರಮಗಳ ಆಗರವಾಗಿರುವ ಹಾಗೂ ರಾಜ್ಯದ ಜನತೆಗೆ ವಂಚನೆ ಎಸಗಿರುವ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ – ನೈಸ್ ಯೋಜನೆಯನ್ನು ಸಂಪೂರ್ಣವಾಗಿ ಸರ್ಕಾರ ವಶಕ್ಕೆ ಪಡೆಯಬೇಕು. ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ರಾಜ್ಯ ಸರ್ಕಾರವನ್ನು ಒಟ್ಟಾಗಿ ಒತ್ತಾಯ ಮಾಡುತ್ತವೆ” ಎಂದು ಹೇಳಿದರು.

Advertisements

“ಜಂಟಿ ಸದನ ಸಮಿತಿ ವರದಿಯ ಪ್ರಕಾರ ಹಾಗೂ ನ್ಯಾಯಾಲಯಗಳು ನೀಡಿರುವ ಆದೇಶದಂತೆ ಆ ಇಡೀ ಯೋಜನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಒಂದು ವೇಳೆ ಯೋಜನೆಯನ್ನು ವಶಕ್ಕೆ ಪಡೆಯದಿದ್ದರೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಸದನದ ಒಳಗೆ – ಹೊರಗೆ ಜಂಟಿ ಹೋರಾಟ ನಡೆಸಲಿವೆ” ಎಂದು ಇಬ್ಬರೂ ನಾಯಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕುಮಾರಸ್ವಾಮಿ ಹೇಳಿದ್ದೇನು?

“ಈಗ ಬ್ರ್ಯಾಂಡ್ ಬೆಂಗಳೂರು ಎಂದು ಜಪ ಮಾಡುತ್ತಿರುವವರೇ ಹಿಂದೆ ನೈಸ್’ನೊಳಕ್ಕೆ ನೈಸಾಗಿ ಸೇರಿಕೊಂಡು ಸಹಕಾರ ನೀಡಿದ್ದರು. ಈಗ ಅವರೇ ಅಧಿಕಾರದಲ್ಲಿ ಇದ್ದಾರೆ. ಅದಕ್ಕೆ ಎರಡೂ ಪಕ್ಷಗಳ ವತಿಯಿಂದ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದೇವೆ. ಅಲ್ಲದೆ; ನೈಸ್ ರಸ್ತೆಯ ಸುತ್ತಮುತ್ತ ನಮ್ಮ ಪಕ್ಷವೂ ಒಳಗೊಂಡಂತೆ ಬೇರೆ ಯಾವುದೇ ಪಕ್ಷದ ರಾಜಕಾರಣಿಗಳ‌ ಭೂಮಿ ಇದ್ದರೆ ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಲಿ” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ಒಟ್ಟಾಗಿ ಕೆಲಸ ಮಾಡಲಿವೆ: ಎಚ್‌ ಡಿ ಕುಮಾರಸ್ವಾಮಿ

“2012ರೊಳಗೆ ಕಾಂಕ್ರೀಟ್ ರಸ್ತೆ ಮಾಡದೆ ಟೋಲ್ ಸಂಗ್ರಹ ಮಾಡುವಂತಿಲ್ಲ ಎನ್ನುವ ಷರತ್ತು ಯೋಜನೆಯಲ್ಲಿ ಇದೆ. ಆದರೆ, ಅಕ್ರಮವಾಗಿ ಟೋಲ್ ಸಂಗ್ರಹ ಮಾಡಲಾಗಿದೆ. ಈವರೆಗೂ ವಸೂಲು ಮಾಡಲಾಗಿರುವ 1325 ಕೋಟಿ ರೂಪಾಯಿ ಟೋಲ್ ಹಣವನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಸರ್ಕಾರ ಕೂಡಲೇ ಹಣ ವಾಪಸ್ ಪಡೆಯಬೇಕು” ಎಂದು ಒತ್ತಾಯಿಸಿದರು.

“ಈ ಯೋಜನೆ ಬಗ್ಗೆ ಮಾತನಾಡಲೇಬಾರದು ಎಂದು ಮಾಜಿ ಪ್ರಧಾನಿ ದೇವೇಗೌಡರಿಗೆ 2 ಕೋಟಿ, ಮಾಜಿ ಸಚಿವ ಮಾಧುಸ್ವಾಮಿ ಅವರಿಗೆ 5 ಲಕ್ಷ ದಂಡ ಹಾಕಿದ್ದರು. ಈ ಸಂದರ್ಭದಲ್ಲಿ ಬೊಮ್ಮಾಯಿ ಸರ್ಕಾರ ಬಿಗಿ ಕ್ರಮಗಳನ್ನು ಕೈಗೊಂಡು, ಅದರ ಪರಿಣಾಮವಾಗಿ ಒಂದಿಷ್ಟು ನ್ಯಾಯಾಲಯ ಆ ಕಂಪನಿಗೆ ಛೀಮಾರಿ ಹಾಕಿದೆ. ಈಗ ಅಲ್ಲಲ್ಲಿ ವೈಟ್ ಟ್ಯಾಪಿಂಗ್ ರಸ್ತೆ ಮಾಡುತ್ತಿದ್ದಾರೆ” ಎಂದರು.

ಬೊಮ್ಮಾಯಿ‌ ಹೇಳಿದ್ದೇನು?

“ನೈಸ್‌ ರಸ್ತೆ ಕಾಮಗಾರಿಗೆ ಹೆಚ್ಚುವರಿ ಸಾಕಷ್ಟು ಭೂಮಿಯನ್ನೂ ಪಡೆದುಕೊಳ್ಳಲಾಗಿದೆ. ಈ ಹೆಚ್ಚುವರಿ ಭೂಮಿಯನ್ನು ಏನು ಮಾಡಬೇಕು ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ಸರ್ಕಾರಕ್ಕೆ ಇದೆ ಎಂಬ ಮಾತನ್ನು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ, ಮತ್ತೆ ಹೊಸದಾಗಿ ಜಮೀನು ಸ್ವಾಧೀನಕ್ಕೆ ಪಡೆಯುವ ಹುನ್ನಾರವನ್ನು ನೈಸ್ ಕಂಪನಿ ನಡೆಸಿದೆ” ಎಂದು ದೂರಿದರು.

“ಮುಖ್ಯವಾಗಿ ನೈಸ್ ಯೋಜನೆಗೆ ನೀಡಲಾಗಿರುವ ಹೆಚ್ಚುವರಿ ಭೂಮಿಯನ್ನು ಕಾನೂನು ಪ್ರಕಾರವೇ ಹಿಂಪಡೆಯಲು ಸಂಪುಟ ಉಪ ಸಮಿತಿ ಕೂಡ ಸ್ಪಷ್ಟವಾಗಿ ಶಿಫಾರಸು ಮಾಡಿದೆ. ಈ ನಿಟ್ಟಿನಲ್ಲಿ ಈಗಿನ ರಾಜ್ಯ ಸರ್ಕಾರ ನೈಸ್ ಯೋಜನೆಯಿಂದ ಹೆಚ್ಚುವರಿ ಭೂಮಿಯನ್ನು ಈ ಕೂಡಲೇ ವಾಪಸ್ ಪಡೆಯಲು ನಿರ್ಧಾರ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X