ಜಿ.ಪಂ., ತಾ.ಪಂ. ಚುನಾವಣೆ; ಕಾಂಗ್ರೆಸ್‌ಗೆ ಜಿಗಿದ ನಗರಸಭೆಯ ಜೆಡಿಎಸ್‌-ಬಿಜೆಪಿ ಅಧ್ಯಕ್ಷ, ಸದಸ್ಯರು!

Date:

ರಾಜ್ಯದಲ್ಲಿ 2025ರ ಫೆಬ್ರವರಿಯಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಅವರ ಹೇಳಿಕೆಯ ಬೆನ್ನಲ್ಲೇ, ಸ್ಥಳೀಯ ಸಂಸ್ಥೆಗಳಲ್ಲಿ ರಾಜಕಾರಣ ಗರಿಗೆದರಿದೆ. ಪಕ್ಷಾಂತರಗಳೂ ಆರಂಭವಾಗಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರಸಭೆಯ ಅಧ್ಯಕ್ಷೆ ಮತ್ತು ಸದಸ್ಯರು ಬಿಜೆಪಿ-ಜೆಡಿಎಸ್‌ ತೊರೆದು ಮಂಗಳವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ

- Advertisement -

ಜೆಡಿಎಸ್‌ನಿಂದ ಗೆದ್ದು ನಗರಸಭೆ ಅಧ್ಯಕ್ಷೆಯಾಗಿದ್ದ ಪೂರ್ಣಿಮಾ, ನಗರಸಭೆ ಸದಸ್ಯರಾದ ಎನ್ ಗಣೇಶ್, ಶಾರದ ಉಮೇಶ್, ಭಾರತಿ ಬಾಯಿ ಹಾಗೂ ಬಿಜೆಪಿ-ಜೆಡಿಎಸ್‌ನ ಹಲವಾರು ಮುಖಂಡರು ಕಾಂಗ್ರೆಸ್‌ ಶಾಸಕ ಎನ್‌ ಶ್ರೀನಿವಾಸ್ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ವೇಳೆ ಮಾತನಾಡಿದ ಶಾಸಕ ಶ್ರೀನಿವಾಸ್, “ಕಾಂಗ್ರೆಸ್‌ ಸಿದ್ದಾಂತವನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗುವುದು ಸಂತೋಷದ ಸಂಗತಿ. ಎಲ್ಲರ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಪಕ್ಷಕ್ಕೆ ಬಂದವರನ್ನು ಪಕ್ಷವು ಎಂದಿಗೂ ಕೈಬಿಟ್ಟಿಲ್ಲ. ಹಲವಾರು ಹಂತಗಳಲ್ಲಿ ಜವಾಬ್ದಾರಿ ನೀಡಿದೆ. ನೆಲಮಂಗಲದಲ್ಲಿ ಇನ್ನೂ ಹಲವಾರು ಮಂದಿ ಕಾಂಗ್ರೆಸ್‌ಗೆ ಬರಲಿದ್ದಾರೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...