- ‘ಸ್ವಪಕ್ಷದ ವಿರುದ್ಧವೇ ಸಂಸದ ಬಿ ಎನ್ ಬಚ್ಚೇಗೌಡ ಟೀಕಾಪ್ರಹಾರ’
- ‘ಬಿಜೆಪಿ ಜೆಡಿಎಸ್ ಜೊತೆ ಹೋಗಿ ಮತ್ತಷ್ಟು ಶಕ್ತಿ ಕಳೆದುಕೊಳ್ಳಲಿದೆ’
ಜಾತ್ಯತೀತ ಎನಿಸಿರುವ ಜೆಡಿಎಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಹೋಗುವುದು ಅಚ್ಚರಿಯಾಗಿದೆ ಎಂದು ಹೇಳುವ ಮೂಲಕ ಸ್ವಪಕ್ಷದ ವಿರುದ್ಧವೇ ಸಂಸದ ಬಿ ಎನ್ ಬಚ್ಚೇಗೌಡ ಟೀಕಾಪ್ರಹಾರ ನಡೆಸಿದರು.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ. ದೇವೇಗೌಡರು ಇರುವವರೆಗೂ ಬಿಜೆಪಿ ಜೊತೆ ಜೆಡಿಎಸ್ ಹೋಗುವುದಿಲ್ಲ ಎಂದುಕೊಂಡಿದ್ದೆ. ಅದು ಸುಳ್ಳಾಗುತ್ತಿದೆ” ಎಂದರು.
“ಜೆಡಿಎಸ್ ಮತ್ತು ಬಿಜೆಪಿ ಒಂದಾಗುತ್ತದೆ ಎನ್ನುವುದು ಜನರಿಗೆ ಗೋಪ್ಯದ ವಿಚಾರವಾಗಿತ್ತು. ಆದರೆ ಈಗ ಜನರಿಗೆ ಸ್ಪಷ್ಟವಾಗಿ ಗೊತ್ತಾಗಲಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಅನಕೂಲಕ್ಕಿಂತ ಅನಾನುಕೂಲವೇ ಹೆಚ್ಚು. ಈ ಮೈತ್ರಿಯಿಂದ ಬಿಜೆಪಿಗೆ ಒಳ್ಳೆಯದಾಗುವುದಿಲ್ಲ. ಪಕ್ಷ ಮತ್ತಷ್ಟು ಶಕ್ತಿ ಕಳೆದುಕೊಳ್ಳಲಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ
ಜೆಡಿಎಸ್ ಮತ್ತು ಬಿಜೆಪಿ ಒಂದಾಗುವ ಕಾರಣದಿಂದಾಗಿಯೇ ಹೈಕಮಾಂಡ್ ನವರು ವಿರೋಧ ಪಕ್ಷದ ನಾಯಕನ ಆಯ್ಕೆಗೆ ತಡೆ ಮಾಡಿದ್ದಾರೆ ಅನ್ನಿಸುತ್ತಿದೆ. ದೊಡ್ಡ ಮಟ್ಟದ ನಾಯಕರು ಬಿಜೆಪಿಯಲ್ಲಿದ್ದಾರೆ. ಆದರೆ, ಹೈಕಮಾಂಡ್ ದೃಷ್ಟಿಯಲ್ಲಿ ಈಗ ಅವರೆಲ್ಲ ಕೆಲಸಕ್ಕೆ ಬಾರದ ನಾಯಕರು ಇರಬಹುದು” ಎಂದರು.
ಈ ಮೈತ್ರಿಯಿಂದ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹುದ್ದೆಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದು ನನಗೆ ಅನ್ನಿಸುತ್ತಿದೆ. ಬಿಜೆಪಿಯವರು ಮಾಡುವುದೆಲ್ಲ ಸರಿ ಎಂದು ಹೇಳಲು ಆಗುವುದಿಲ್ಲ. ನಾನೂ ಪಕ್ಷದಲ್ಲಿ ಹಿರಿಯನಿದ್ದೇನೆ. ಕೆಲವು ವಿಚಾರ ನೋಡಿಕೊಂಡು ಸುಮ್ಮನೇ ಕೂರಲು ಆಗುವುದಿಲ್ಲ” ಎಂದರು.