ಇಂದಿನ ಎನ್‌ಡಿಎ ಸಭೆಯ ನಿರ್ಧಾರ ನೋಡಿಕೊಂಡು ಮೈತ್ರಿ ಬಗ್ಗೆ ಮಾತುಕತೆಗೆ ಜೆಡಿಎಸ್ ಚಿಂತನೆ

Date:

ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಪಾಠ ಕಲಿಸಬೇಕೆಂದು ಕಾಂಗ್ರೆಸ್‌ ನೇತೃತ್ವದಲ್ಲಿ ದೇಶದ 24 ಪ್ರತಿಪಕ್ಷಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಮತ್ತೊಂದೆಡೆ ದೆಹಲಿಯಲ್ಲಿ 38 ಎನ್‌ಡಿಎ ಮಿತ್ರಪಕ್ಷಗಳು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿವೆ. ಆದರೆ, ಜೆಡಿಎಸ್‌ ಮಾತ್ರ ಎರಡೂ ಸಭೆಗಳಲ್ಲಿ ಭಾಗವಹಿಸದೆ ಕಾದುನೋಡುವ ತಂತ್ರ ಅನುಸರಿಸುತ್ತಿದೆ.

- Advertisement -

ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಜುಲೈ 18ರಂದು ಸಂಜೆ ದೆಹಲಿಯಲ್ಲಿ ನಡೆಯುವ ಎನ್‌ಡಿಎ ಒಕ್ಕೂಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಜೆಡಿಎಸ್ ಮತ್ತು ಬಿಜೆಪಿ ನಡುವೆ ಮೈತ್ರಿ ಮಾಡಿಕೊಳ್ಳುತ್ತಾರೆ ಎಂಬ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ, ಇಂದಿನ ಎನ್‌ಡಿಎ ಸಭೆಯಲ್ಲಿ ಎಚ್ ​ಡಿ ಕುಮಾರಸ್ವಾಮಿ ಪಾಲ್ಗೊಳ್ಳುತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎನ್​ಡಿಎ ಮೈತ್ರಿಕೂಟ ಸಭೆಗೆ ಜೆಡಿಎಸ್​ಗೆ ಆಹ್ವಾನ ನೀಡಿಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದು, ಎನ್‌ಡಿಎ ಸಭೆಗೆ ನನಗೆ ಆಹ್ವಾನ ಬಂದಿಲ್ಲ ಎಂದಿದ್ದರು. ಇದರೊಂದಿಗೆ ಇತ್ತ ಮಹಾಘಟಬಂಧನ್​​ ಸಭೆಗೂ ಆಹ್ವಾನವಿಲ್ಲ, ಅತ್ತ ಎನ್​ಡಿಎ ಮೈತ್ರಿಕೂಟದ ಸಭೆಗೂ ಆಹ್ವಾನ ಬಂದಿಲ್ಲ. ಈ ಹಿನ್ನೆಯಲ್ಲಿ ಕುಮಾರಸ್ವಾಮಿ ನಡೆ ಯಾವ ಕಡೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಉತ್ಸುಕರಾಗಿರುವ ದಳಪತಿಗಳು ಇಂದಿನ ಎನ್​ಡಿಎ ಮೈತ್ರಿಕೂಟ ಸಭೆಗೆ ಆಹ್ವಾನ ಬರದಿರುವುದರಿಂದ ಕುಮಾರಸ್ವಾಮಿ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಸಭೆಯಿಂದ ಅಂತರ ಕಾಯ್ದುಕೊಂಡಿರುವ ಎಚ್ ​ಡಿ ದೇವೇಗೌಡ, ಎಚ್ ​ಡಿ ಕುಮಾರಸ್ವಾಮಿ, ಇಂದಿನ ಸಭೆಯ ನಿರ್ಧಾರ ನೋಡಿಕೊಂಡು ಮೈತ್ರಿ ಬಗ್ಗೆ ಮಾತುಕತೆ ನಡೆಸಲು ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಮಹಾಘಟಬಂಧನ್ | ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ ಜಾರಿ: ಕುಮಾರಸ್ವಾಮಿ ಆರೋಪ

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಸೋಮವಾರ ಎಚ್‌ ಡಿ ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಶಾಸಕರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. “ನಾವು ಬಿಜೆಪಿ ಜೊತೆ ಹೋದರೆ ಕೆಲ ಸಮುದಾಯದ ವಿರೋಧ ಕಟ್ಟಿಕೊಳ್ಳಬೇಕು. ಇದರಿಂದ ಪಕ್ಷಕ್ಕೆ ಹೊಡೆತ ಆಗಬಹುದು. ಹೀಗಾಗಿ ಎಚ್ಚರಿಕೆಯಿಂದ ಹೆಚ್ಚೆ ಇಡಬೇಕು” ಎಂದು ಶಾಸಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದರಿಂದ ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕೋ ಬೇಡವೋ ಎನ್ನುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...