ಡಿಕೆಶಿ ಸಿಎಂ ಆಗುವುದಾದರೆ ಜೆಡಿಎಸ್ ಶಾಸಕರ ಬೆಂಬಲ ನೀಡುವೆ: ಎಚ್ ​ಡಿ ಕುಮಾರಸ್ವಾಮಿ ಘೋಷಣೆ

Date:

Advertisements
  • ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಘೋಷಿಸಿದ ಎಚ್‌ಡಿಕೆ
  • ಸರ್ಕಾರದಲ್ಲಿ ಟೆಂಪ್ರವರಿ ಸಿಎಂ, ಡೂಪ್ಲಿಕೇಟ್ ಸಿಎಂ ಇದ್ದಾರೆ: ಕಿಡಿ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು​ ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಮಾಜಿ ಸಿಎಂ ಎಚ್ ​ಡಿ ಕುಮಾರಸ್ವಾಮಿ ಘೋಷಿಸಿದರು.

ಜೆಡಿಎಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರ ಸಿಎಂ ಆಗುವ ಆಸೆಗೆ ನೀವೇ ಹೆಚ್ಚು ಅಡ್ಡಿಯಾಗಿದ್ದೀರಿ ಎನ್ನುವ ಆರೋಪ ಇದೆಯಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ ಅವರು ಪ್ರತಿಕ್ರಿಯಿಸಿದರು.

ಈ ಮೂಲಕ ಡಿ ಕೆ ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆದರೆ ನಾವು ಬೆಂಬಲ ನೀಡುತ್ತೇವೆ ಎಂದು ಓಪನ್ ಆಫರ್​ ನೀಡಿದ್ದಾರೆ. “ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಎಷ್ಟು ಜನ ಸಿಎಂ ಆಗುತ್ತಾರೆ ಗೊತ್ತಿಲ್ಲ. ಇದನ್ನು ನೋಡಿದರೆ ಈ ಸರ್ಕಾರಕ್ಕೆ ಒಂದು ಹೆಸರು ಇಡಬಹುದು. ಟಿಸಿಎಂ, ಡಿಸಿಎಂ ಸರ್ಕಾರ ಎಂದು ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ” ಎಂದು ಲೇವಡಿ ಮಾಡಿದರು.

Advertisements

“ಮುಂಗಾರು ‌ಕೊರತೆಯಿಂದ 60 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದೆ. ಜಿಲ್ಲಾ ಪ್ರವಾಸ ಮಾಡಿ ಸಿಎಂ, ಸಚಿವರು ಕೂಡ ವರದಿ ಕೊಟ್ಟಿದ್ದಾರೆ. ಬರಪರಿಹಾರ ಕೊಡಿಸಿ ಎಂದು ಬಿಜೆಪಿಯವರಿಗೆ ಸಿಎಂ ಹೇಳಿದ್ದಾರೆ. ಕೇಂದ್ರ ಬರ ಅಧ್ಯಯನ ತಂಡ ಕೂಡ ವರದಿ ಪಡೆದು ಹೋಗಿದೆ. 17 ಸಾವಿರ ಕೋಟಿ ರೂ. ಬರ ಪರಿಹಾರ ಹಣಕ್ಕೆ ಮನವಿ ಮಾಡಲಾಗಿದೆ. ನಾನು ನನ್ನ ರಾಜಕೀಯ ಅನುಭವದಲ್ಲಿ ಹೇಳುವುದಾದರೆ. ಇಷ್ಟು ದೊಡ್ಡ ಮೊತ್ತದ ನೆರವನ್ನು ಯಾವ ರಾಜ್ಯಗಳು ಕೇಳಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ಅವರಿಗೆ ಆಡಳಿತ ನಡೆಸುವ ವಿಧಾನ ಗೊತ್ತಿಲ್ಲ: ನಳಿನ್ ಕುಮಾರ್ ಕಟೀಲ್

“ಸಿಎಂ ಸಿದ್ದರಾಮಯ್ಯ ಜಿಲ್ಲೆಗಳಿಗೆ ಹೋಗಿ ಡ್ಯಾನ್ಸ್ ಮಾಡಿ ಬಂದಿದ್ದಾರೆ. ಆ ಜಿಲ್ಲೆಯಲ್ಲೂ ಬರ ಇದೆ, ಏನು ಪರಿಹಾರ ಕೊಟ್ಟು ಬಂದಿದ್ದೀರಿ? ಗ್ಯಾರಂಟಿ ಕಾರ್ಯಕ್ರಮಕ್ಕಾಗಿ ಕೇಂದ್ರದ ಯೋಜನೆ ನಿಲ್ಲಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ರೈತರು ಬೆಳೆದ ಭತ್ತ ಒಣಗಿ ಹೋಗಿದೆ. ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಸಂಪೂರ್ಣ ನಾಶವಾಗಿದೆ” ಎಂದು ಹೇಳಿದರು.

ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಎಂದಿದ್ದಾರೆ. ಯಾವುದು ಪೀಪಲ್ ಲೆಸ್ ಅಂತಾ ಮುಂದೆ ಎಲ್ಲವೂ ಗೊತ್ತಾಗುತ್ತೆ ಎಂದು ಇದೇ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದರು.

ಬರ ಅಧ್ಯಯನ ತಂಡ ರಚನೆ

ರಾಜ್ಯದ 31 ಜಿಲ್ಲೆಗಳ ಬರ ಅಧ್ಯಯನಕ್ಕೆ 24 ತಂಡ ರಚನೆ ಮಾಡಲಾಗಿದೆ. ಮೈಸೂರಿನಲ್ಲಿ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್​, ಮಹದೇವ್​, ಅಶ್ವಿನ್​ ಕುಮಾರ್​, ಮಂಜುನಾಥ್​ ನೇತೃತ್ವದಲ್ಲಿ ಬರ ಅಧ್ಯಯನ ನಡೆಸಲಿದೆ.  ಮಂಡ್ಯದಲ್ಲಿ ಟಿ.ಸಿ.ತಮಣ್ಣ, ರಮೇಶ್ ಗೌಡ, ಸುರೇಶ್​ಗೌಡ, ಡಾ.ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ಬರ ಅಧ್ಯಯನ. ಹಾಸನ- ಶಾಸಕರಾದ ಎ.ಮಂಜು, ಸ್ವರೂಪ್, ಸಿ.ಎನ್.ಬಾಲಕೃಣ್ಣ. ಶಿವಮೊಗ್ಗ- ಶಾಸಕರಾದ‌ ಶಾರದ ಪಿ ನಾಯ್ಕ್, ಪ್ರಸನ್ನ ಕುಮಾರ್. ಚಿಕ್ಕಮಗಳೂರು- ವೈಎಸ್​ವಿ ದತ್ತಾ, ಬೋಜೆಗೌಡ, ಸುಧಾಕರ್ ಶೆಟ್ಟಿ. ಬೆಂಗಳೂರು- ರಮೇಶ್​ಗೌಡ, ಮಂಜುನಾಥ್, ಶರವಣ, ಜವರಾಯಿಗೌಡ ನೇತೃತ್ವದಲ್ಲಿ ಬರ ಅಧ್ಯಯನ ನಡೆಯಲಿದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X