ಮುಸ್ಲಿಮರಿಗೆ ಶೇ. 4 ಮೀಸಲಾತಿ ವಿರೋಧಿಸುವ ಬಿಜೆಪಿ ನಿಲುವಿಗೆ ಜೆಡಿಎಸ್‌ನ ಬೆಂಬಲವಿಲ್ಲ

Date:

ಸರಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ವಿರೋಧಿಸಿ ತನ್ನ ಮೈತ್ರಿ ಪಾಲುದಾರ ಬಿಜೆಪಿ ನಡೆಸುವ ಪ್ರತಿಭಟನೆಯನ್ನು ಬೆಂಬಲಿಸುವುದಿಲ್ಲ ಎಂದು ಜೆಡಿಎಸ್ ಹೇಳಿದೆ.

- Advertisement -

ಪ್ರತಿಭಟನೆಯಿಂದ ಹೊರಗುಳಿಯುವಂತೆ ಜೆಡಿಎಸ್ ನಾಯಕರು ತಮ್ಮ ಶಾಸಕರಿಗೆ ಸೂಚಿಸಿದ್ದಾರೆ ಮತ್ತು ಮಾಧ್ಯಮಗಳು ಕೇಳಿದಾಗ ಈ ನಿಲುವನ್ನು ಸ್ಪಷ್ಟಪಡಿಸುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರಿಗೆ ತಿಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಾವು ಪಕ್ಷದ ಸಿದ್ಧಾಂತ ಮತ್ತು ತತ್ವಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಬೆಲೆ ಏರಿಕೆ, ಗ್ಯಾರೆಂಟಿ ಯೋಜನೆಗಳ ವೈಫಲ್ಯ, ದುರಾಡಳಿತ ಮತ್ತು ಭ್ರಷ್ಟಾಚಾರದಂತಹ ವಿಚಾರಗಳಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯನ್ನು ಬೆಂಬಲಿಸಲಿದೆ. 4 ಪ್ರತಿಶತ ಮುಸ್ಲಿಂ ಮೀಸಲಾತಿಯು ಜೆಡಿಎಸ್ ವರಿಷ್ಠ ದೇವೇಗೌಡ ಅವರು ಒದಗಿಸಿದ ನೀತಿಯಾಗಿದೆ. ಆದ್ದರಿಂದ ಈ ವಿಚಾರದಲ್ಲಿ ಜೆಡಿಎಸ್ ಬಿಜೆಪಿಗೆ ಬೆಂಬಲಿಸುವುದಿಲ್ಲ ಎಂದು ಜೆಡಿಎಸ್ ಮೂಲಗಳು ದೃಢಪಡಿಸಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕಕ್ಕೆ ಶಾಸನಸಭೆಯಿಂದ ಅಪಮಾನ; ನೈತಿಕ ಹೊಣೆ ಯಾರದ್ದು?

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ʼಬಿಜೆಪಿಯು ಈ ಕುರಿತು ಜೆಡಿಎಸ್ ಜೊತೆ ಮಾತುಕತೆಯನ್ನು ನಡೆಸಲಿದೆ. ಮುಸ್ಲಿಂ ಮೀಸಲಾತಿ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಬೇಕುʼ ಎಂದು ಪ್ರತಿಪಾದಿಸಿದರು.

ಮುಸ್ಲಿಂ ಮೀಸಲಾತಿ ಅಸಂವಿಧಾನಿಕ ಎಂದು ಪ್ರತಿಪಾದಿಸಿ, ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳು ಎದುರಿಸುತ್ತಿರುವ ಅನ್ಯಾಯದ ಬಗ್ಗೆ ಅರಿವು ಮೂಡಿಸಲು ರಾಜ್ಯಾದ್ಯಂತ ಅಭಿಯಾನವನ್ನು ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಘೋಷಿಸಿದ್ದಾರೆ.

ʼನಾವು ಕಾಂಗ್ರೆಸ್ ವಿರುದ್ಧದ ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ. ನಾವು ಪಕ್ಷದ ನಾಯಕರೊಂದಿಗೆ ಚರ್ಚಿಸುತ್ತೇವೆ ಮತ್ತು ಶೀಘ್ರದಲ್ಲೇ ಆಂದೋಲನವನ್ನು ಕೈಗೊಳ್ಳುತ್ತೇವೆ ಎಂದು ಬಿ ವೈ ವಿಜಯೇಂದ್ರ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...