ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರಿಡಲು ಜೆಡಿಎಸ್ ವಿರೋಧ

Date:

Advertisements

ಬೆಂಗಳೂರಿನ ಕೇಂದ್ರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್ ಹೆಸರಿಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನು ಜೆಡಿಎಸ್ ಖಂಡಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಸರ್ಕಾರದ ನಡೆಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್, ಕಾಂಗ್ರೆಸ್ ಕನ್ನಡಿಗರಿಗೆ ಮಹಾದ್ರೋಹ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದೆ.

ರಾಜ್ಯದಲ್ಲಿ ಗುಲಾಮಿ ಕಾಂಗ್ರೆಸ್ ಸರ್ಕಾರದ ತೊಘಲಕ್ ಆಡಳಿತ ಹೇಗಿದೆ ನೋಡಿ ಕರ್ನಾಟಕದ ಮಹಾಜನತೆ. ರಾಮನ ಹೆಸರಿನ “ರಾಮನಗರ” ಜಿಲ್ಲೆಯನ್ನು “ಬೆಂಗಳೂರು ದಕ್ಷಿಣ” ಎಂದು ವಿರೋಧವನ್ನು ಲೆಕ್ಕಿಸದೇ ಮರುನಾಮಕರಣ ಮಾಡಲಾಗಿದೆ. “ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ”ಕ್ಕೆ ಮಾಜಿ ಪಿಎಂ “ಮನಮೋಹನ್ ಸಿಂಗ್ ವಿವಿ ಬೆಂಗಳೂರು” ಎಂದು ಹೆಸರಿಡಲು ಈಗ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸೈಬರ್ ಅಪರಾಧ ಕುರಿತು ಜನ ಜಾಗೃತರಾಗಬೇಕಿದೆ

ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರದ ವಿಶ್ವಮಟ್ಟದಲ್ಲಿ ಬ್ರ‍್ಯಾಂಡ್ ಆಗಿದೆ. “ಬೆಂಗಳೂರು” ಹೆಸರನ್ನೇ ವಿಶ್ವವಿದ್ಯಾಲಯಕ್ಕೂ ಇಡಲಾಗಿತ್ತು. ಪರ್ಯಾಯಾವಾಗಿ ಮರುನಾಮಕರಣ ಮಾಡುವ ಅವಶ್ಯಕತೆ, ಜರೂರು ಏನಿತ್ತು? ಅಧಿಕಾರದ ಮದ, ದರ್ಪ, ದುರಹಂಕಾರದಲ್ಲಿ ಮೆರೆಯುತ್ತಿರುವ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಹೈಕಮಾಂಡ್ ಮೆಚ್ಚಿಸಲು ಬೆಂಗಳೂರಿನ ಘನತೆ, ಗೌರವಕ್ಕೆ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ವಿರೋಧದ ನಡುವೆಯೂ ಮಾಡುತ್ತಿರುವುದು ಅಕ್ಷಮ್ಯ ಎಂದು ಆಕ್ರೋಶ ಹೊರಹಾಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X