ಮೇ 25ರಂದು ಬೆಂಗಳೂರಿನಲ್ಲಿ ಜೆಡಿಎಸ್ ವಿಮರ್ಶಾ ಸಭೆ

Date:

  • ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಭೆ
  • ಸೋಲಿನ ಪರಾಮರ್ಶೆಗೆ ಮುಂದಾದ ಜೆಡಿಎಸ್ ದಳಪತಿಗಳು

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಜೆಡಿಎಸ್ ಇದೀಗ ಚುನಾವಣೆ ಫಲಿತಾಂಶದ ಬಗ್ಗೆ ಮೇ 25ರಂದು ವಿಮರ್ಶಾ ಸಭೆ ನಡೆಸಲಿದೆ.

ಮೇ 25ರ ಗುರುವಾರ 10.30ಕ್ಕೆ ಬೆಂಗಳೂರು ಅರಮನೆ ಮೈದಾನದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕರಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸಮ್ಮುಖದಲ್ಲಿ ವಿಮರ್ಶಾ ಸಭೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೇ 10ರಂದು ನಡೆದ ಚುನಾವಣೆಯ ಫಲಿತಾಂಶದ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುವುದು. ಅಂದಿನ ಸಭೆಯಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಲೋಕಸಭಾ ಸದಸ್ಯರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಚಿವರು, ಶಾಸಕರು ಉಪಸ್ಥಿತರಿರಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂ ಪ್ರಮುಖರಿಗೆ ಪತ್ರ ಬರೆದಿದ್ದು, ಎಲ್ಲರೂ ಪಾಲ್ಗೊಳ್ಳುವಂತೆ ತಿಳಿಸಿದ್ದಾರೆ. ಉಳಿದಂತೆ ಪಕ್ಷದ ಫಲಿತಾಂಶ, ಹಾಕಿಕೊಂಡಿದ್ದ ಗುರಿ, ಎದುರಾದ ಸಮಸ್ಯೆ-ಸವಾಲುಗಳು, ಎಡವಿದ್ದೆಲ್ಲಿ? ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಿ ಸಲಹೆಗಳನ್ನು ಅಲಿಸಲಾಗುವುದು.

ಈ ಸುದ್ದಿ ಓದಿದ್ದೀರಾ?:4 ಲಕ್ಷ ಕೋಟಿ ಕೊಟ್ಟರೂ 5 ಸಾವಿರ ಕೋಟಿ…

ಚುನಾವಣೆಯಲ್ಲಿನ ಸೋಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹ ಕಳೆದುಕೊಳ್ಳುವಂತೆ ಮಾಡಿದೆ. ಅವರಲ್ಲಿ ಧೈರ್ಯ ತುಂಬಿ ಮರಳಿ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಅಗತ್ಯವಾದ ಮಾರ್ಗದರ್ಶನವನ್ನು ಪಕ್ಷದ ವರಿಷ್ಠರು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ತಾಲ್ಲೂಕು, ಜಿಲ್ಲಾಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಬಗ್ಗೆ ಕಾರ್ಯತಂತ್ರ ರೂಪಿಸಲಾಗುತ್ತದೆ ಎಂದು ಪಕ್ಷದ ಮುಖಂಡರು ಮಾಹಿತಿ ಒದಗಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್‌ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ...

ಧಾರವಾಡ ಕ್ಷೇತ್ರ | ಪ್ರಲ್ಹಾದ್ ಜೋಶಿ ಬದಲಾವಣೆಗೆ ಮಠಾಧೀಶರಿಂದ ಹಕ್ಕೊತ್ತಾಯ

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಅವರನ್ನು ಬದಲಿಸಬೇಕು...

ಕನ್ನಡಿಗರ ಎದುರು ಚರ್ಚೆಗೆ ಬನ್ನಿ; ನಿರ್ಮಲಾ ಸೀತಾರಾಮನ್‌ಗೆ ಸಿದ್ದರಾಮಯ್ಯ ಪಂಥಾಹ್ವಾನ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಹಿರಂಗ ಚರ್ಚೆಗೆ ಸಿಎಂ ಸಿದ್ದರಾಮಯ್ಯ...

ಬೆಂಗಳೂರು | ರಜಾ ದಿನಗಳಂದು ಬೆಸ್ಕಾಂ ಕ್ಯಾಶ್‌ ಕೌಂಟರ್‌ಗಳಲ್ಲಿ ಸೇವೆ

ವಿದ್ಯುತ್‌ ಬಿಲ್‌ ಪಾವತಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಬೆಂಗಳೂರು ವಿದ್ಯುತ್...