ಜೆಡಿಎಸ್‌ ಟಿಕೆಟ್‌ ಫೈನಲ್ | ಮಂಡ್ಯಕ್ಕೆ ಎಚ್‌ಡಿಕೆ, ಹಾಸನಕ್ಕೆ ಪ್ರಜ್ವಲ್‌, ಕೋಲಾರಕ್ಕೆ ಮಲ್ಲೇಶ್‌ ಬಾಬು

Date:

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ 28 ಕ್ಷೇತ್ರಗಳ ಫೈಕಿ ಮೂರು ಕ್ಷೇತ್ರಗಳು ಸಿಕ್ಕಿದ್ದು, ಕೊನೆಗೂ ಅಭ್ಯರ್ಥಿಗನ್ನು ಜೆಡಿಎಸ್‌ ಫೈನಲ್ ಮಾಡಿದೆ.

ಮೂರು ಕ್ಷೇತ್ರಗಳಾದ ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಎಸ್ ಬಿಡುಗಡೆ ಮಾಡಿದೆ. ‌ನಿರೀಕ್ಷೆಯಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುತ್ತಿದ್ದಾರೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರೇ ಕಣಕ್ಕಿಳಿಯುತ್ತಿದ್ದಾರೆ. ಹಾಗೆಯೇ ಕೋಲಾರ ಎಸ್‌ಸಿ ಮೀಸಲು ಕ್ಷೇತ್ರಕ್ಕೆ ಎಂ ಮಲ್ಲೇಶ್ ಬಾಬುಗೆ ಟ ಟಿಕೆಟ್‌ ನೀಡಲಾಗಿದೆ.

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸಮೃದ್ಧಿ ಮಂಜುನಾಥ, ಮಲ್ಲೇಶ್ ಬಾಬು ಹಾಗೂ ನಿಸರ್ಗ ನಾರಾಯಣಸ್ವಾಮಿ ಅವರು ಟಿಕೆಟ್‌ಗಾಗಿ ದಳಪತಿಗಳ ಮುಂದೆ ಬೇಡಿಕೆ ಇಟ್ಟಿದ್ದರು. ಕೊನೆ ಕ್ಷಣದವರೆಗೂ ಸಮೃದ್ಧಿ ಮಂಜುನಾಥ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ ಮಲ್ಲೇಶ್ ಬಾಬು ಅವರಿಗೆ ದಳಪತಿಗಳು ಮಣೆ ಹಾಕಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜೆಡಿಎಸ್‌ ನಾಯಕರಿಗೆ ಪ್ರತಿಷ್ಠೆಯ ಕ್ಷೇತ್ರವಾದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅಥವಾ ಎಚ್​ ಡಿ ಕುಮಾರಸ್ವಾಮಿ ಸ್ಪರ್ಧಿಸುವ ಮಾತುಗಳು ಕೇಳಿಬಂದಿದ್ದವು. ಈ ನಡುವೆ ಕುಮಾರಸ್ವಾಮಿ ಅವರು ಜೆಡಿಎಸ್‌ ನಾಯಕ ಸಿ ಎಸ್‌ ಪುಟ್ಟರಾಜು ಅವರನ್ನ ಕಣಕ್ಕಿಳಿಸುವುದಾಗಿ ಹೇಳಿದ್ದರು. ಈಗ ಕೊನೆಗೆ ಕುಮಾರಸ್ವಾಮಿ ಅವರೇ ಸ್ಪರ್ಧೆಗೆ ಮುಂದಾಗಿದ್ದಾರೆ.

 

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅಂಬೇಡ್ಕರ್ ಜಯಂತಿಯಂದು ಮಾಂಸ ಮಾರಾಟ ನಿಷೇಧ; ಖಂಡನೆ

ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಹಿನ್ನೆಲೆ ಏಪ್ರಿಲ್ 14ರಂದು ರಾಯಚೂರು ಜಿಲ್ಲೆಯ...

ಕುಮಾರಸ್ವಾಮಿ ರಾಜ್ಯದ ಹೆಣ್ಣು ಮಕ್ಕಳ ಕ್ಷಮೆ ಕೇಳಲೇಬೇಕು : ಮುಖ್ಯಮಂತ್ರಿ ಚಂದ್ರು ಆಗ್ರಹ

"ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಹಳ್ಳಿಯ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂಬ ಮಾಜಿ...

ಮೋದಿ ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದ ಕೆ.ಎಸ್.ಈಶ್ವರಪ್ಪ

ರಾಜ್ಯ ಬಿಜೆಪಿಯ ವಿರುದ್ಧ ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...