ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ, ಷಡ್ಯಂತ್ರ ಹಾಗೂ ಸುಳ್ಳು ಆರೋಪಗಳ ವಿರುದ್ಧ ಜಾತ್ಯತೀತ ಜನತಾದಳ ವತಿಯಿಂತ ಧರ್ಮಸ್ಥಳ ಸತ್ಯ ಯಾತ್ರೆ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.
ಆಗಸ್ಟ್ 31ರಂದು ಜೆಡಿಎಸ್ ನಾಯಕರು ನೇತ್ರಾವತಿ ನದಿತಟದಿಂದ ಧರ್ಮಸ್ಥಳ ದೇವಸ್ಥಾನದವರೆಗೆ ಪಾದಯಾತ್ರೆ ನಡೆಸಲಿದ್ದಾರೆ. ಧರ್ಮಸ್ಥಳದ ಪರ ನಿಲ್ಲುತ್ತೇವೆ ಮತ್ತು ಅದರ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಹಿಂದೆ ಪಿತೂರಿ ಇದೆ, ಅದಕ್ಕೆ ಫಂಡಿಂಗ್ ಎಲ್ಲಿಂದ ಆಗುತ್ತಿದೆ ಎಂಬುದು ಬಯಲಾಗಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಇದೇ ಭಾನುವಾರ 31 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದೇವೆ. ಧರ್ಮಸ್ಥಳಕ್ಕೆ ಅಪಮಾನ ಆಗುವ ತರ ಕೆಲವೊಂದು ಹೆಜ್ಜೆ ಈ ಸರ್ಕಾರ ಇಟ್ಟಿದೆ. ನಾನು ಒಬ್ಬ ಭಕ್ತನಾಗಿ ಹಾಗೂ ನಮ್ಮ ಪಕ್ಷ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಧರ್ಮಸ್ಥಳ ಸತ್ಯ ಯಾತ್ರೆ ಮಾಡಿ, ವೀರೇಂದ್ರ ಹೆಗ್ಗಡೆ ಭೇಟಿ ಮಾಡಿ ಅವರಿಗೆ ಬೆಂಬಲ ನೀಡುತ್ತೇವೆ ” ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವಶಕ್ತಿ ಸದ್ಬಳಕೆಗೆ ಇದು ಸಕಾಲ: ಮೋದಿ ಮನಸ್ಸು ಮಾಡುವರೇ?
ಧರ್ಮಸ್ಥಳ ಯಾತ್ರೆಯಲ್ಲಿ ಯಾವುದೇ ರಾಜಕೀಯ ಇಲ್ಲ. ಪಕ್ಷಾತೀತವಾಗಿ ಈ ಯಾತ್ರೆ ಕೈಗೊಂಡಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಧರ್ಮಸ್ಥಳಕ್ಕೆ ದೊಡ್ಡ ಸಂಖ್ಯೆಯಲ್ಲಿ ಭೇಟಿ ನೀಡುತ್ತೇವೆ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಕ್ಕೆ ಒಂದೂವರೆ ತಿಂಗಳಿಂದ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಅವರ ಕುಟುಂಬದವರು ತಾಳ್ಮೆ ಮತ್ತೆ ಸಹನೆಯಿಂದ ನಡೆದುಕೊಂಡಿದ್ದಾರೆ. ನಾವು ಅವರ ಜೊತೆ ನಿಲ್ಲುತ್ತೇವೆ ಹೆಗ್ಗಡೆ ಕುಟುಂಬಕ್ಕೆ ಜೆಡಿಎಸ್ ಬೆಂಬಲವಿದೆ ಎಂದರು.
ಕಳೆದ ಹಲವಾರು ದಿನಗಳಿಂದ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಮಾನ ಹಾಗೂ ಹಲವಾರು ಅನುಮಾನಗಳಿಗೆ ರಾಜ್ಯ ಸರ್ಕಾರ ಎಡೆ ಮಾಡಿಕೊಟ್ಟಿದೆ. ತರಾತುರಿಯಲ್ಲಿ ಎಸ್ಐಟಿ ರಚನೆ ಮಾಡಿದೆ. ಧರ್ಮಸ್ಥಳ ವಿಚಾರವಾಗಿ ಒಂದು ತಂಡವಾಗಿ ಪಿತೂರಿ ಮಾಡಿದ್ದನ್ನು ನೋಡಿದ್ದೇವೆ. ಒಬ್ಬ ಹೇಳಿಕೆಯನ್ನ ಪರಿಗಣಿಸಿ ಎಸ್ಐಟಿ ಯನ್ನು ಯಾಕೆ ರಚನೆ ಮಾಡಿದೆ ಎಂದು ನಿಖಿಲ್ ಕುಮಾರ್ಸ್ವಾಮಿ ಪ್ರಶ್ನಿಸಿದರು.
ಆಡಳಿತ ಪಕ್ಷ ಬಿಜೆಪಿಯು ಸಹ ಸೆಪ್ಟೆಂಬರ್ 1ರಂದು ಹಾಸನದಿಂದ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದು, ಜೆಡಿಎಸ್ಗಿಂತ ಒಂದು ದಿನ ಮುಂಚಿತವಾಗಿ ಯಾತ್ರೆ ನಡೆಸಲು ಮುಂದಾಗಿದೆ