ಹುಣಸೂರು | ಎಲ್ಲ 12 ಸ್ಥಾನಗಳನ್ನೂ ಗೆದ್ದ ಜೆಡಿಎಸ್; ಕಾಂಗ್ರೆಸ್‌ಗೆ ಭಾರೀ ಮುಖಭಂಗ

Date:

ಹುಣಸೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲ 12 ಸ್ಥಾನಗಳನ್ನೂ ಜೆಡಿಎಸ್‌ ಗೆದ್ದುಕೊಂಡಿದ್ದು, ಕಾಂಗ್ರೆಸ್‌ ಭಾರೀ ಮುಖಭಂಗ ಅನುಭವಿಸಿದೆ.

- Advertisement -

ಮೈಸೂರು ಜಿಲ್ಲೆಯ ಹಣಸೂರಿನ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಶನಿವಾರ ಚುನಾವಣೆ ನಡೆದಿದೆ. ಚುನಾವಣೆಯಲ್ಲಿ ಎಲ್ಲ 12 ಸ್ಥಾನಗಳನ್ನೂ ಜೆಡಿಎಸ್ ಗೆದ್ದುಕೊಂಡಿದೆ. ಕಾಂಗ್ರೆಸ್‌ ಒಂದು ಸ್ಥಾನವನ್ನೂ ಗೆಲ್ಲದೆ, ತೀವ್ರ ಹಿನ್ನಡೆ ಅನುಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

12 ಸ್ಥಾನಗಳ ಪೈಕಿ 5 ಸಾಲಗಾರರ ಕ್ಷೇತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ತಲಾ 1 ಕ್ಷೇತ್ರ, ಮಹಿಳಾ ಮೀಸಲು 1 ಕ್ಷೇತ್ರ, ಬಿಸಿಎಂ (ಎ) ಮತ್ತು (ಬಿ) ತಲಾ 1 ಕ್ಷೇತ್ರ, ಸಾಮಾನ್ಯ 2 ಕ್ಷೇತ್ರಗಳಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಜೆಡಿಎಸ್ ಗೆದ್ದುಕೊಂಡಿದೆ.

ಪ್ರಸ್ತುತ, ಹುಣಸೂರು ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್‌ ಶಾಸಕ ಜಿ.ಡಿ ಹರೀಶ್‌ ಗೌಡ ಪ್ರತಿನಿಧಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ನಡೆದು 2 ವರ್ಷಗಳ ಬಳಿಕ ನಡೆದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿಯೂ ಜೆಡಿಎಸ್‌ ಗೆದ್ದಿದೆ. ಇದು, ಕ್ಷೇತ್ರದಲ್ಲಿ ಜೆಡಿಎಸ್‌ ಹಿಡಿತ ಪ್ರಬಲವಾಗಿದೆ ಎಂಬುದನ್ನು ಸೂಚಿಸುತ್ತದೆ. ಮುಂದಿನ ಚುನಾವಣೆಗಳಲ್ಲಿಯೂ ಜೆಡಿಎಸ್‌ ಗೆಲುವಿನ ಹಾದಿಯಲ್ಲಿಯೇ ಸಾಗುತ್ತದೆ ಎಂದು ಜೆಡಿಎಸ್‌ ನಾಯಕರು ವಿಶ್ವಾಸ ಹೊಂದಿದ್ದಾರೆ.

ಇತ್ತ, 4 ಅಥವಾ 5 ಸ್ಥಾನಗಳನ್ನು ಗೆಲ್ಲುವ ಭರವಸೆಯಲ್ಲಿದ್ದ ಕಾಂಗ್ರೆಸ್‌ ತೀವ್ರ ಹಿನ್ನಡೆ ಅನುಭವಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....