ಸಿಎಎ, ಎನ್‌ಆರ್‌ಸಿ, ಏಕರೂಪ ನಾಗರಿಕ ಸಂಹಿತೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ಜಾರ್ಖಂಡ್ ಸರ್ಕಾರ

Date:

ಪೌರತ್ವ ತಿದ್ದುಪಡಿ ಕಾನೂನು, ಏಕರೂಪ ನಾಗರಿಕ ಸಂಹಿತೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಗೆ ವಿರೋಧ ಸೇರಿದಂತೆ ಜಾರ್ಖಂಡ್‌ನ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಪಕ್ಷವು ರಾಜ್ಯದಲ್ಲಿ 50 ಅಂಶಗಳ ನಿರ್ಣಯವನ್ನು ಕೈಗೊಂಡಿದೆ.

- Advertisement -

ಜಾರ್ಖಂಡ್‌ನ ಡುಮ್ಮಾದ ಗಾಂಧಿ ಮೈದಾನದಲ್ಲಿ ರವಿವಾರ ಆಯೋಜಿಸಿದ್ದ ಪಕ್ಷದ 46ನೇ ಸಂಸ್ಥಾಪಕ ದಿನಾಚರಣೆ ಸಮಾರಂಭದಲ್ಲಿ ಈ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ‘ಸಿಎಎ, ಎನ್‌ಆರ್‌ಸಿ, ಯುಸಿಸಿಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ತಿರಸ್ಕರಿಸಬೇಕು’ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ‘ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ಜನತೆಗೆ ಮೋಸ ಮಾಡಲಾಗಿದೆ. ಜಾರ್ಖಂಡ್‌ನ ನಿವಾಸಿಗಳು ತಮ್ಮ ಕಾಲಿನ ಮೇಲೆ ನಿಲ್ಲುವುದನ್ನು ಊಳಿಗಮಾನ್ಯ ಮನಸ್ಥಿತಿ ಹೊಂದಿರುವ ಕೆಲವರು ಬಯಸುವುದಿಲ್ಲ” ಎಂದು ಕಿಡಿಕಾರಿದ್ದಾರೆ.

“ಖನಿಜ ಸಂಪನ್ಮೂಲಗಳ ಮೂಲಕ ದೇಶದ ಬೊಕ್ಕಸಕ್ಕೆ ಹೆಚ್ಚಿನ ಕೊಡುಗೆ ನೀಡಿದರೂ ಜಾರ್ಖಂಡ್ ಅತ್ಯಂತ ಹಿಂದುಳಿದ ರಾಜ್ಯವಾಗಿದೆ. ನಾವು ಬಹಳಷ್ಟು ಕೊಡುಗೆ ನೀಡುತ್ತೇವೆ. ಆದರೆ ನಾವು ಏನನ್ನೂ ಪಡೆಯುವುದಿಲ್ಲ. ಕೇಂದ್ರವು ಎಲ್ಲ ರಾಜ್ಯಗಳನ್ನು ಸಮಾನವಾಗಿ ನೋಡಬೇಕು. ನಮ್ಮ ಹಕ್ಕುಗಳಿಗಾಗಿ ನಾವು ಹೋರಾಡಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...