ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರನ್ನು ಬುಧವಾರ ಜಾರಿ ನಿರ್ದೇಶನಾಲಯವು ಬಂಧಿಸಿದೆ.
ಆಲಂ ಅವರ ಆಪ್ತ ಕಾರ್ಯದರ್ಶಿಗೆ ಸಂಬಂಧಿಸಿದ ಫ್ಲ್ಯಾಟ್‌ನಿಂದ 35 ಕೋಟಿ ರೂಪಾಯಿಗೂ ಅಧಿಕ ನಗದು ವಶಪಡಿಸಿಕೊಂಡ ಪ್ರಕರಣದಲ್ಲಿ ಈ ಬಂಧನ ಮಾಡಲಾಗಿದೆ.
#WATCH | Jharkhand: Security strengthened outside the office of the Enforcement Directorate (ED) in Ranchi.
ED today arrested Jharkhand Minister and Congress leader Alamgir Alam in connection with a huge cash recovery from the household help of his PS Sanjeev Lal pic.twitter.com/7m8OxnDT2T
— ANI (@ANI) May 15, 2024
ಮಂಗಳವಾರ ರಾಂಚಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಆಲಂ ಅವರನ್ನು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. ಬುಧವಾರ ಮತ್ತೆ ವಿಚಾರಣೆಗೆ ಸಮನ್ಸ್ ನೀಡಲಾಗಿದೆ. ಸುಮಾರು ಆರು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದ್ದು, ತನಿಖೆಗೆ ಸಹಕರಿಸದ ಕಾರಣ ಬಂಧಿಸಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.
ಇದನ್ನು ಓದಿದ್ದೀರಾ? ಜಾರ್ಖಂಡ್ | ಗೃಹ ಸಹಾಯಕನ ಮನೆಯಲ್ಲಿ ಅಪಾರ ಪ್ರಮಾಣದ ಹಣ ವಶ; ಸಚಿವರೊಂದಿಗೆ ನಂಟು ಆರೋಪ
ಕಳೆದ ವಾರ ರಾಂಚಿಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಗೃಹ ಸಹಾಯಕರಾದ ಜಹಾಂಗೀರ್ ಆಲಂ ವಾಸವಾಗಿದ್ದ 2ಬಿಎಚ್‌ಕೆ ಫ್ಲಾಟ್ ಮೇಲೆ ದಾಳಿ ನಡೆಸಿದೆ. ಅಲ್ಲಿಂದ ಸುಮಾರು 35.23 ಕೋಟಿ ರೂಪಾಯಿ ಮತ್ತು ಇತರ ಕಡೆಗಳಲ್ಲಿ 1.5 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟಾಗಿ 37 ಕೋಟಿ ರೂಪಾಯಿ ಇಡಿ ವಶ ಪಡಿಸಿಕೊಂಡಿದೆ.
ಇದಾದ ಮರುದಿನವೇ ಲಾಲ್ ಮತ್ತು ಜಹಾಂಗೀರ್ ಆಲಂ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬಂಧಿಸಲಾಗಿದ್ದು, ಪ್ರಸ್ತುತ ಇಡಿ ವಶದಲ್ಲಿದ್ದಾರೆ. ಬುಧವಾರ ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರನ್ನು ಬಂಧಿಸಲಾಗಿದೆ.
ಇದನ್ನು ಓದಿದ್ದೀರಾ? ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ನಾದಿನಿ ಬಿಜೆಪಿ ಸೇರ್ಪಡೆ
ಅಲಂಗೀರ್ ಆಲಂ 2000ರಲ್ಲಿ ಜಾರ್ಖಂಡ್ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದು ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಸೊರೆನ್ ಅವರನ್ನು ಇಡಿ ವಶಕ್ಕೆ ತೆಗೆದುಕೊಂಡ ತಿಂಗಳುಗಳ ಬಳಿಕ ಈಗ ಸಚಿವರನ್ನು ಬಂಧಿಸಲಾಗಿದೆ. ಸೋರೆನ್ ಅವರನ್ನು ಅಧಿಕೃತವಾಗಿ ಬಂಧಿಸುವ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದರು.