ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ನಿರ್ಣಯ ಅಂಗೀಕರಿಸಲು ಜಾರ್ಖಂಡ್ ಇಂಡಿಯಾ ಒಕ್ಕೂಟ ಸಜ್ಜು

Date:

ಜಾರ್ಖಂಡ್‌ನ ಆಡಳಿತಾರೂಢ ಇಂಡಿಯಾ ಒಕ್ಕೂಟದ ಶಾಸಕರು ಮುಂಗಾರು ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧ ನಿರ್ಣಯ ಅಂಗೀಕರಿಸಲು ನಿರ್ಧರಿಸಿದ್ದಾರೆ. ಅಧಿವೇಶನದಲ್ಲಿ ‘ವಿರೋಧ ಪಕ್ಷದ ಪ್ರಶ್ನೆಗೆ ತಾರ್ಕಿಕ ಉತ್ತರಗಳನ್ನು’ ನೀಡಲು ಮೈತ್ರಿಕೂಟ ನಿರ್ಧರಿಸಿದೆ ಎಂದು ವರದಿಯಾಗಿದೆ.

- Advertisement -

ಜಾರ್ಖಂಡ್‌ನಲ್ಲಿ ಮುಂಗಾರು ಅಧಿವೇಶನ ಶುಕ್ರವಾರ(ಆಗಸ್ಟ್‌ 1) ಆರಂಭವಾಗಿ ಆಗಸ್ಟ್ 7ರಂದು ಕೊನೆಯಾಗಲಿದೆ. ರಜೆಗಳನ್ನು ಹೊರತುಪಡಿಸಿ ಒಟ್ಟು ಐದು ದಿನಗಳು ಅಧಿವೇಶನ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: 64 ಲಕ್ಷಕ್ಕೂ ಅಧಿಕ ಮತದಾರರ ಹೆಸರು ‘ಡಿಲೀಟ್’

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಹೇಮಂತ್ ಸೊರೇನ್, “ಸಭೆಯಲ್ಲಿ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಮಾಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಇಂಡಿಯಾ ಒಕ್ಕೂಟವು ಚುನಾವಣಾ ಆಯೋಗದ ನಿರ್ಧಾರವನ್ನು ವಿರೋಧಿಸುತ್ತದೆ” ಎಂದು ಹೇಳಿದರು.

“ಸಭೆಯಲ್ಲಿ ನಾವು ಕೇಂದ್ರವು ಸಾಂವಿಧಾನಿಕ ಸಂಸ್ಥೆಗಳನ್ನು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಬಗ್ಗೆಯೂ ಚರ್ಚಿಸಲಾಗಿದೆ. ಪ್ರತ್ಯೇಕ ಸರ್ನಾ ಧಾರ್ಮಿಕ ಸಂಹಿತೆ ಮತ್ತು ಒಬಿಸಿ ಮೀಸಲಾತಿ ಹೆಚ್ಚಳದ ಬಗ್ಗೆಯೂ ಚರ್ಚಿಸಲಾಗುವುದು” ಎಂದರು.

ಇನ್ನು ಸಂಸತ್ತಿನ ವ್ಯವಹಾರಗಳ ಸಚಿವ ರಾಧಾಕೃಷ್ಣ ಕಿಶೋರ್ ಅವರು “ಅಧಿವೇಶನದಲ್ಲಿ ಎಸ್‌ಐಆರ್ ವಿರುದ್ಧ ನಿರ್ಣಯ ಅಂಗೀಕರಿಸಲು ನಿರ್ಧರಿಸಿದ್ದೇವೆ” ಎಂದು ತಿಳಿಸಿದರು. ಪ್ರತಿಪಕ್ಷಗಳ ಎಲ್ಲಾ ಪ್ರಶ್ನೆಗಳಿಗೆ ತಾರ್ಕಿಕ ಉತ್ತರಗಳನ್ನು ನೀಡಲು ಎಲ್ಲಾ ಸದಸ್ಯರನ್ನು ಸಿದ್ಧರಾಗಿರಬೇಕು ಎಂದು ಕರೆ ನೀಡಿದರು.

ಶುಕ್ರವಾರ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿ ಮುಂಗಾರು ಅಧಿವೇಶನಕ್ಕೆ ತಮ್ಮ ಪಕ್ಷದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದ ನಿರ್ಧರಿಸಲಿದೆ. ಇದಕ್ಕೂ ಮುನ್ನ ಜಾರ್ಖಂಡ್ ಸ್ಪೀಕರ್ ರವೀಂದ್ರನಾಥ್ ಮಹಾತೋ ಸರ್ವಪಕ್ಷ ಸಭೆ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...