ಕೊರೋನಾ 2ನೇ ಅಲೆಯ ವೇಳೆ ಚಾಮರಾಜನಗರದಲ್ಲಿ ನಡೆದಿದ್ದ ಆಮ್ಲಜನಕ ದುರಂತದಲ್ಲಿ ಸಾವನ್ನಪ್ಪಿದ್ದವರ ಕುಟುಂಬಸ್ಥರಿಗೆ ಫೆಬ್ರವರಿ 1ರಿಂದ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದ್ದಾರೆ.
ಚಾಮರಾಜನಗರದಲ್ಲಿ ನಡೆದ ಗಣರೋಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. “2021ರ ಮೇ 2ರಂದು ಆಮ್ಲಜನಕ ಸಕಾಲಕ್ಕೆ ಪೂರೈಕೆಯಾಗದೆ ಚಾಮರಾಜನಗರ ಸರ್ಕಾರಿ ಆಸ್ಪತ್ರೆಯಲ್ಲಿ 32 ಮಂದಿ ಮೃತಪಟ್ಟಿದ್ದರು. ಅವರ ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಉದ್ಯೋಗ ನೀಡಲಾಗುವುದು ಎಂದು ಹೇಳಿದ್ದಾರೆ.
“ಸಂತ್ರಸ್ತರ ಕುಟುಂಬಸ್ಥರು ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸಬೇಕು. ಕಾಯಂ ಸರ್ಕಾರಿ ಉದ್ಯೋಗ ನೀಡಲು ಪ್ರಸ್ತಾವ ಸಲ್ಲಿಸಲಾಗಿದೆ. ಅಲ್ಲಿಯವರೆಗೆ, ಸದ್ಯಕ್ಕೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ಉದ್ಯೋಗ ನೀಡಲಾಗುವುದು” ಎಂದು ಹೇಳಿದ್ದಾರೆ.