ಅರಣ್ಯ ಭೂಮಿ ಗಡಿ ಗುರುತಿಸಲು ಕಂದಾಯ ಇಲಾಖೆಯೊಂದಿಗೆ ಜಂಟಿ ಸರ್ವೇ: ಸಚಿವ ಈಶ್ವರ್ ಖಂಡ್ರೆ

Date:

ಅರಣ್ಯ ಭೂಮಿ ಗಡಿ ಗುರುತಿಸಿ, ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೇ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಶ್ತ್ರ ಮತ್ತು ಪರಿಸರ ಸಚಿವ ಈಶ್ವರ್  ಖಂಡ್ರೆ ಹೇಳಿದರು.

- Advertisement -

ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಗುರುವಾರ ವಿಧಾನ ಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಕರ್ನಾಟಕ ಅರಣ್ಯ ನಿಯಮದ ಪ್ರಕಾರ ಜಿಲ್ಲಾ ಅರಣ್ಯ ಅಥವಾ ರಕ್ಷಿತ ಅರಣ್ಯಕ್ಕೆ ಹೊಂದಿಕೊಂಡಂತೆ ಹಾಗೂ 100 ಮೀಟರ್ ವ್ಯಾಪ್ತಿಯಲ್ಲಿನ ಭೂಮಿ ಮಂಜೂರಾತಿ ಪೂರ್ವದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಸಮ್ಮತಿ ಪಡೆಯುವುದು ಕಡ್ಡಾಯವಾಗಿದೆ. ರೈತರು ಕಂದಾಯ ಇಲಾಖೆ ಸಾಗುವಳಿ ಚೀಟಿಗೆ ಸಂಬಂಧಿಸಿದಂತೆ ನಿರಾಕ್ಷೇಪಣಾ ಪತ್ರ ಕೋರಿದಾಗ ಅರಣ್ಯ ಇಲಾಖೆಯ ದಾಖಲೆ, ಅಧಿಸೂಚನೆ ಹಾಗೂ ನಕಾಶೆಗಳೊಂದಿಗೆ ಪರಿಶೀಲಿಸಿ, ಜಾಗವು ಅರಣ್ಯ ಪ್ರದೇಶ ವ್ಯಾಪ್ತಿಗೆ ಬರುತ್ತದೆ ಅಥವಾ ಇಲ್ಲವೇ ಎಂದು ಹಿಂಬರಹ ನೀಡಲಾಗುತ್ತದೆ. ಅಧಿಸೂಚಿತ ಹಾಗೂ ಡೀಮ್ಡ್ ಅರಣ್ಯ ಅರಣ್ಯ ಪ್ರದೇಶಗಳಿಗೆ ಸರ್ವೇ ನಂಬರ್‌ವಾರು ವಿವರವಾದ ಮಾಹಿತಿ ಇಲ್ಲದಂತಹ ಸಂದರ್ಭದಲ್ಲಿ ನಿರಾಕ್ಷೇಪಣಾ ಪತ್ರ ನೀಡಲು ಕಂದಾಯ ಇಲಾಖೆಯೊಂದಿಗೆ ಜಂಟಿ ಮೋಜಣಿ ಮಾಡಲಾಗುವುದು” ಎಂದರು.

ಬೆಳ್ತಂಗಡಿ ಪ್ರದೇಶದ ರಿ.ಸಂ.69ರಲ್ಲಿ ಅರಣ್ಯ ಭೂಮಿ ಬಗ್ಗೆ ಜಂಟಿ ಸರ್ವೇ ಕೈಗೊಂಡಾಗ 500 ಎಕರೆ ಅಧಿಕ ಭೂಮಿ ಅರಣ್ಯ ಇಲಾಖೆ ಭೂಮಿಯೊಂದಿಗೆ ಇರುವುದು ಕಂಡುಬಂದಿದೆ. ಸರ್ಕಾರ ಅರಣ್ಯ ಅರಣ್ಯ ಭೂಮಿ ಗಡಿ ಗುರುತಿಸಿಲು ಜಂಟಿ ಸರ್ವೇ ನಡೆಸಬೇಕು. ಅರಣ್ಯ ಹಾಗೂ ಕಂದಾಯ ಇಲಾಖೆ ಮೊಜಣಿಗೆ ಕಾಲಮಿತಿ ನಿಗದಿ ಪಡಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಚಿವರಲ್ಲಿ ಕೋರಿದರು.

ಆನೆಗಳ ನಿಯಂತ್ರಣಕ್ಕೆ ರೈಲ್ವೆ ಬ್ಯಾರಿಕೇಡ್

ರಾಜ್ಯದಲ್ಲಿ 6995 ಆನೆಗಳು ಇವೆ. ಒಟ್ಟು 7 ಆನೆ ಕಾರ್ಯಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಆಲ್ಡಾರಾ ಶಾಖೆಯ ಅರಣ್ಯ ಗಡಿ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 2022-23ನೇ ಸಾಲಿನಲ್ಲಿ ರೂ.1.73 ಕೋಟಿ, 2023-24ರಲ್ಲಿ ರೂ.3.59 ಕೋಟಿ ಅನುದಾನ ನಿಗದಿಪಡಿಸಲಾಗಿದೆ. ಒಟ್ಟು 7.152 ಕಿ.ಮೀ ರೈಲ್ವೇ ಬ್ಯಾರಿಕೇಡ್ ನಿರ್ಮಾಣ ಮಾಡಬೇಕಿದೆ. ಇದರಲ್ಲಿ 1.215 ಕಿ.ಮೀ ಪೂರ್ಣಗೊಂಡಿದೆ ಎಂದು ಅರಣ್ಯ ಸಚಿವರು ಸದನಕ್ಕೆ ಮಾಹಿತಿ ನೀಡಿದರು.

“2.337 ಕಿ.ಮೀ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. 3.60 ಕಿ.ಮೀ ನಿರ್ಮಾಣ ಕಾಮಗಾರಿ ಬಾಕಿ ಉಳಿದಿದೆ. ಡಿಸೆಂಬರ್ 2024ರ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುತ್ತೇವೆ” ಎಂದು ಸಚಿವ ಈಶ್ವರ್ ಖಂಡ್ರೆ, ಶಾಸಕ ರಾಜೇಗೌಡ ಟಿ.ಡಿ ಅವರ ಪ್ರಶ್ನೆಗೆ ಉತ್ತರಿಸಿದರು.

ಮೈಸೂರು ಜಿಲ್ಲೆ ಹೆಗ್ಗದೇವನಕೋಟೆ ತಾಲೂಕು ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷ ಎಂಟು ಮಾನವ ಹಾಗೂ ವನ್ಯಪ್ರಾಣಿ ಸಂಘರ್ಷಗಳು ದಾಖಲಾಗಿವೆ. ಈ ಭಾಗದಲ್ಲಿ ಅರಣ್ಯ ಗಡಿ ಪ್ರದೇಶ ಗುರುತಿಸುವ ಕಾರ್ಯ ಪೂರ್ಣಗೊಂಡಿದೆ. ಸಂಘರ್ಷ ತಡೆಯಲು ಜಂಟಿ ಸರ್ವೇ ಕಾರ್ಯವನ್ನು ಸಹ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವರು ತಿಳಿಸಿದರು.

“ರಾಜ್ಯದಲ್ಲಿ ಒಟ್ಟು ರೂ.200 ಕೋಟಿ ವೆಚ್ಚದಲ್ಲಿ ಆನೆಗಳು ಜನವಸತಿ ಪ್ರದೇಶಕ್ಕೆ ಬರುವುದನ್ನು ತಡೆಯಲು 640 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಒಟ್ಟು 312 ಕಿ.ಮೀ. ಬ್ಯಾರಿಕೇಡ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಮನೆ ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ, ಆನೆ ತಡೆ ಕಂದಕ ನಿರ್ಮಾಣ ಮಾಡಿ ನಿರ್ವಹಿಸಲಾಗುತ್ತಿದೆ” ಎಂದು ಸಚಿವರು, ಶಾಸಕ ಅನಿಲ್ ಚಿಕ್ಕಮಾದು ಕೇಳಿದ್ದ ಪ್ರಶ್ನೆಗೆ ಉತ್ತರಿಸುವ ವೇಳೆ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...